ಬೆಂಗಳೂರು,ಡಿ.1- ಯಾವುದೇ ಕಾರಣಕ್ಕೂ ಅಪರಾಧ ಹಿನ್ನಲೆಯುಳ್ಳ ರೌಡಿಗಳನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುವುದೇ ಇಲ್ಲ. ಈ ನಿಲುವಿನಲ್ಲಿ ಬದಲಾವಣೆ ಇಲ್ಲವೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುನರುಚ್ಚರಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೌಡಿಗಳನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬೇಕಾದ ಅಗತ್ಯ ನಮಗಿಲ್ಲ. ಅಂಥವರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಂಡು ರಾಜಕಾರಣ ಮಾಡಬೇಕಾದ ಅಗತ್ಯವೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ಈಗಾಗಲೇ ನಮ್ಮ ಪಕ್ಷದ ರಾಜ್ಯಾಧ್ಯಕ್ಷರಾದ ನಳೀನ್‍ಕುಮಾರ್ ಕಟೀಲ್ ಅವರೇ ಸ್ಪಷ್ಟಪಡಿಸಿರುವುದರಿಂದ ಈ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ನಮಗೆ ಇಂತಹ ವಿಷಯಗಳ ಬಗ್ಗೆ ಚರ್ಚಿಸಲು ಸಮಯವೂ ಇಲ್ಲ. ಬಿಜೆಪಿಗೆ ರೌಡಿಗಳ ಅಗತ್ಯ ಬೇಕಾಗಿಯೇ ಇಲ್ಲ ಎಂದು ಹೇಳಿದರು.
ಬಿಬಿಎಂಪಿ ಮುಖ್ಯ ಆಯುಕ್ತರ ತಲೆದಂಡವಾದರೆ ಉಗ್ರ ಹೋರಾಟ ಎಚ್ಚರಿಕೆ
ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸುಪ್ರೀಂಕೋರ್ಟ್‍ನಲ್ಲಿ ಮಹಾರಾಷ್ಟ್ರ ಸರ್ಕಾರ ಅರ್ಜಿ ಹಾಕಿದೆ. ನನ್ನ ಪ್ರಕಾರ ಈ ಅರ್ಜಿಯು ವಿಚಾರಣೆ ನಡೆಸಲು ಅರ್ಹತೆಯೇ ಇಲ್ಲ. ನಮಗೆ ಕಾನೂನಿನಲ್ಲಿ ಜಯ ಸಿಗುವ ವಿಶ್ವಾಸ ಇದೆ ಎಂದರು.
ಮಹಾರಾಷ್ಟ್ರ ಸರ್ಕಾರ ಹಾಕಿರುವ ಅರ್ಜಿಗೆ ಕಾನೂನಿನ ಮಾನ್ಯತೆ ಸಿಗುವ ಸಾಧ್ಯತೆ ಕಡಿಮೆ. ನಮ್ಮ ಸರ್ಕಾರದ ನಿಲುವು ಏನಿರಬೇಕೆಂಬುದನ್ನು ಈಗಾಗಲೇ ಕಾನೂನು ತಜ್ಞರ ಚರ್ಚೆ ಮಾಡಿದ್ದೇವೆ. ನ್ಯಾಯಾಲಯದಲ್ಲಿ ಸಮರ್ಥವಾಗಿ ವಾದ ಮಂಡಿಸಲು ಸಿದ್ದರಾಗಿದ್ದಾರೆ ಎಂದರು.
ಏರ್ ಇಂಡಿಯಾ ದೇಶೀಯ ವಿಮಾನ ಕಾರ್ಯಾಚರಣೆಗಳಲ್ಲಿ ಬದಲಾವಣೆ
ವಕ್ ಬೋರ್ಡ್‍ನಿಂದ ಮುಸ್ಲಿಮ್ ಯುವತಿಯರಿಗೆ ಪ್ರತ್ಯೇಕ ಕಾಲೇಜು ತೆರೆಯುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪ್ರತ್ಯೇಕ ಕಾಲೇಜು ಬಗ್ಗೆ ನಮ್ಮ ಸರ್ಕಾರದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಇದು ನಮ್ಮ ಸರ್ಕಾರದ ನಿಲುವು ಕೂಡಾ ಆಗಿಲ್ಲ. ಆ ಥರದ್ದು ಏನಾದರೂ ಪ್ರಸ್ತಾವನೆ ಇದ್ರೆ ವಕ್ ಬೋರ್ಡ್ ಅಧ್ಯಕ್ಷರೇ ಬಂದು ನನ್ನ ಜತೆ ಚರ್ಚೆ ಮಾಡಲಿ ಎಂದು ಹೇಳಿದರು.
ವಿಧಾನಸೌಧ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ದೂರದೃಷ್ಟಿಯ ಫಲವಾಗಿ ಇಂದು ದೇಶಕ್ಕೆ ಮಾದರಿಯಾದ ಶಕ್ತಿಕೇಂದ್ರ ವಿಧಾನಸೌಧ ನಿರ್ಮಾಣವಾಗಿದೆ. ಅವರಿಗೆ ಇಲ್ಲಿ ಕೂತು ಆಡಳಿತ ನಡೆಸಲು ಸಾಧ್ಯವಾಗದಿದ್ದರೂ ಕನ್ನಡ ನಾಡು ಹೆಮ್ಮೆಪಡುವ ಕಟ್ಟಡ ನಿರ್ಮಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಪ್ರಶಂಸಿಸಿದರು.
ಕೊವಿಡ್ ಲಸಿಕೆಯನ್ನು ಮೋದಿ ಲಸಿಕೆ ಎಂದು ಕಾಂಗ್ರೆಸ್ ಟೀಕಿಸಿತ್ತು : ಅಮಿತ್ ಶಾ
ಇಂದು ಅವರ ತತ್ವ ಆದರ್ಶ ಸ್ಮರಿಸುವ ದಿನವಾಗಿದೆ. ಮೈಸೂರು ಪ್ರಾಂತ್ಯದ ಹಿರಿಯ ನಾಯಕ ಕೆಂಗಲ್ ಹನುಮಂತಯ್ಯ ಕರ್ನಾಟಕದ ಏಕೀಕರಣಕ್ಕೆ ಭಾಗಿಯಾಗಿದ್ದರು. ನಾಡಿನ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಿದ್ದರು. ಬೆಂಗಳೂರನ್ನು ಶಕ್ತಿ ಕೇಂದ್ರವಾಗಿಸಿ ವಿಧಾನಸೌಧ ನಿರ್ಮಾಣ ಮಾಡಿದರು. ಅವರು ಜನಮಾನಸದಲ್ಲಿ ಶಾಶ್ವತ ಸ್ಥಾನ ಬಿಟ್ಟು ಹೋಗಿದ್ದಾರೆ ಎಂದು ಸ್ಮರಿಸಿದರು.
BJP, rowdies, CM Bommai,