Saturday, May 3, 2025
Homeರಾಜ್ಯಸುಹಾಸ್‌‍ ಶೆಟ್ಟಿ ಹತ್ಯೆಯನ್ನು ಬಿಜೆಪಿಯವರು ರಾಜಕೀಯಕ್ಕೆ ಬಳಸಿಕೊಳ್ಳಬಾರದು : ಡಿಕೆಶಿ

ಸುಹಾಸ್‌‍ ಶೆಟ್ಟಿ ಹತ್ಯೆಯನ್ನು ಬಿಜೆಪಿಯವರು ರಾಜಕೀಯಕ್ಕೆ ಬಳಸಿಕೊಳ್ಳಬಾರದು : ಡಿಕೆಶಿ

BJP should not use Suhas Shetty's murder for politics: DK Shivakumar

ಬೆಂಗಳೂರು,ಮೇ 2– ಮಂಗಳೂರಿನಲ್ಲಿ ಸುಹಾಸ್‌‍ ಶೆಟ್ಟಿ ಹತ್ಯೆಯನ್ನು ಬಿಜೆಪಿಯವರು ರಾಜಕೀಯಕ್ಕೆ ಬಳಸಿಕೊಳ್ಳಬಾರದು. ಕರ್ನಾಟಕ ರಾಜ್ಯ ಶಾಂತಿಯಿಂದಿದೆ. ಶಾಂತಿಯಿಂದ ಇರುವುದಕ್ಕೆ ಬಿಜೆಪಿಯವರು ಸಹಕಾರ ನೀಡಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹತ್ಯೆಯಲ್ಲಿ ಭಾಗಿಯಾಗಿರುವ ತಪ್ಪಿತಸ್ಥರ ವಿರುದ್ಧ ಪೊಲೀಸರು ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ. ಈ ವಿಚಾರದಲ್ಲಿ ನಾವು ತಲೆಹಾಕಲು ಹೋಗುವುದಿಲ್ಲ ಎಂದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಎನ್ನುವ ಬಿಜೆಪಿ ಆರೋಪಕ್ಕೆ ನಾನು ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಮಂಗಳೂರಿನ ಪೊಲೀಸರು ಉತ್ತಮ ಸಾಮರ್ಥ್ಯ ಹೊಂದಿದ್ದಾರೆ. ಈ ಘಟನೆ ಬಗ್ಗೆ ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.

RELATED ARTICLES

Latest News