‘ಉಗ್ರ ಭಾಗ್ಯ’ದ ರಣಹದ್ದುಗಳನ್ನುಬೇಟೆಯಾಡಲಾಗಿದೆ : ಸಿದ್ದುಗೆ ಬಿಜೆಪಿ ತಿರುಗೇಟು

Social Share

ಬೆಂಗಳೂರು,ಸೆ.28- ಉಗ್ರ ಭಾಗ್ಯ ಯೋಜನೆ ಯಡಿ ಸಾಕಿದ ರಣಹದ್ದು ಗಳನ್ನು ಬಿಜೆಪಿ ಸರ್ಕಾರ ಬೇಟೆಯಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರಾಜ್ಯ ಬಿಜೆಪಿ ಘಟಕ ತಿರುಗೇಟು ನೀಡಿದೆ. ಪಿಎಫ್‍ಐ, ಎಸ್‍ಡಿಪಿಐ ಈ ಯಾವ ಸಂಘಟನೆಗಳೇ ಆಗಲಿ ಸಮಾಜದ ಸಾಮರಸ್ಯ ಹಾಳು ಮಾಡುತ್ತವೆ.

ಗಲಭೆಗಳಿಗೆ ಕಾರಣವಾಗುತ್ತದೆ ಎಂಬುದಕ್ಕೆ ಸೂಕ್ತ ಸಾಕ್ಷಾಧಾರವಿದ್ದರೆ, ಬಿಜೆಪಿ ಸರ್ಕಾರ ಇಂಥ ಸಂಘಟನೆಗಳನ್ನು ನಿಷೇಧ ಮಾಡಲಿ. ರಾಜ್ಯ ಮತ್ತು ಕೇಂದ್ರದಲ್ಲಿ ಎರಡೂ ಕಡೆ ನಿಮ್ಮದೇ ಸರ್ಕಾರವಿದೆ ಆದರೂ ಏಕೆ ಸುಮ್ಮನಿದ್ದೀರಿ ಎಂದು ಸಿದ್ದರಾಮಯ್ಯ ಅವರು ಟ್ವಿಟರ್‍ನಲ್ಲಿ ಪ್ರಶ್ನೆ ಮಾಡಿದ್ದರು.

ಇದಕ್ಕೆ ತಿರುಗೇಟು ಕೊಟ್ಟಿರುವ ಬಿಜೆಪಿ ಮಾನ್ಯ ಸಿದ್ದರಾಮಯ್ಯನವರೇ ನಾವು ನುಡಿದಂತೆ ನಡೆದಿದ್ದೇವೆ. ನೀವು ಉಗ್ರ ಭಾಗ್ಯ ಯೋಜನೆಯಡಿ ಸಾಕಿದ ರಣಹದ್ದುಗಳನ್ನು ಬೇಟೆಯಾಡಿದ್ದೇವೆ ಎಂದು ಹೇಳಿದೆ. ದೇಶದ ಆಂತರಿಕ ಭದ್ರತೆಗೆ ಸವಾಲೆಸೆದಿದ್ದ ಪಿಎಫ್‍ಐ ಮತ್ತು ಅದರ ಸಹವರ್ತಿ ಸಂಘಟನೆಗಳನ್ನು ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುಂದಿನ 5 ವರ್ಷಗಳ ಅವಧಿಗೆ ನಿಷೇಧ ಮಾಡಿದೆ ಎಂದಿದೆ.

ಮೋದಿ ಸರ್ಕಾರದ ಈ ನಿರ್ಧಾರ ಅತ್ಯಂತ ಸ್ವಾಗತಾರ್ಹ. ಮತಾಂಧ ಶಕ್ತಿಗಳ ವಿರುದ್ಧ ಬಿಜೆಪಿಯ ಸಮರ ಮುಂದುವರೆಯಲಿದೆ. ದೇಶದಲ್ಲಿ ಆಂತರಿಕವಾಗಿ ವಿಧ್ವಂಸಕ ಕೃತ್ಯಗಳನ್ನು ಮಾಡುವ ದೇಶದ್ರೋಹಿ PFI ಮತ್ತು ಸಹವರ್ತಿ ಸಂಘಟನೆಗಳನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿ ಆದೇಶ ಹೊರಡಿಸಿರುವುದು ಸ್ವಾಗತಾರ್ಹ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ಧನ್ಯವಾದಗಳು ಎಂದು ಬಿಜೆಪಿ ಹೇಳಿದೆ.

ಪಿಎಫ್‍ಐ ಮತ್ತು ಅದರ ಸಂಘಸಂಸ್ಥೆಗಳು ನಿಷೇಧಿತ ಸಿಮಿ ಸಂಘಟನೆಯ ಮುಂದುವರೆದ ಅವತಾರಗಳಾಗಿದ್ದವು. ದೇಶದಲ್ಲಿ ಹಲವಾರು ವಿಧ್ವಂಸಕ ಚಟುವಟಿಕೆಯಲ್ಲಿ ಪಾಲ್ಗೊಂಡ ಬಗ್ಗೆ ಅನೇಕ ಸಾಕ್ಷ್ಯಾಧಾರಗಳು ಲಭಿಸಿದ್ದವು. ಈಗ ಆ ಸಂಘಟನೆಗಳನ್ನು ನಿಷೇಧಿಸುವ ಮೂಲಕ ಸೂಕ್ತ ನಿರ್ಧಾರ ಕೇಂದ್ರ ಸರ್ಕಾರ ಕೈಗೊಂಡಿದೆ. ಇದು ಸ್ವಾಗತಾರ್ಹ ಎಂದು ಪ್ರಶಂಸಿದೆ.

ದೇಶದಲ್ಲಿ ಆಂತರಿಕವಾಗಿ ವಿಧ್ವಂಸಕ ಕೃತ್ಯಗಳನ್ನು ಮಾಡುವ ದೇಶದ್ರೋಹಿ ಪ್ರಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ಕೇಂದ್ರ ಸರಕಾರ ನಿಷೇಧ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕದ ಸಮಸ್ತ ದೇಶಪ್ರೇಮಿಗಳ ಪರವಾಗಿ ಅಭಿನಂದನೆಗಳು ಎಂದು ಬಿಜೆಪಿ ಟ್ವೀಟ್ ಮಾಡಿದೆ.

Articles You Might Like

Share This Article