ಬೆಂಗಳೂರು, ಜೂ.4 – ಶ್ರೀರಾಮ ಜನ್ಮ ಭೂಮಿ ಅಯೋಧ್ಯೆ ವ್ಯಾಪ್ತಿಯ ೈಜಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆಯಾಗಿರುವುದು ಅಚ್ಚರಿ ಮೂಡಿಸಿದೆ.ಶ್ರೀರಾಮ ಮಂದಿರ ನಿರ್ಮಿಸಿ, ರಾಮನ ಪ್ರತಿಷ್ಠಾಪನೆ ಮಾಡುವ ಮೂಲಕ ಉತ್ತರ ಪ್ರದೇಶ ಸೇರಿದಂತೆ ದೇಶ ಹಾಗೂ ದೇಶಾದ್ಯಂತ ಪ್ರಸಿದ್ಧಿಯಾಗಿದ್ದ ಅಯೋಧ್ಯೆಯನ್ನೊಳಗೊಂಡ ಫೈಜಾಬಾದ್ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಸಮಾಜವಾದಿ ಪಾರ್ಟಿ ಮುನ್ನಡೆ ಸಾಧಿಸಿದೆ.
ಬಿಜೆಪಿಯ ಅಭ್ಯರ್ಥಿ ಲಾಲು ಸಿಂಗ್ ಅವರು ಸಮಾಜವಾದಿ ಪಾರ್ಟಿಯ ಅಭ್ಯರ್ಥಿ ಅವದೇಶ್ ಪ್ರಸಾದ್ ಅವರ ರುದ್ಧ 10 ಸಾರಕ್ಕೂ ಹೆಚ್ಚು ಮತಗಳ ಅಂತರದಿಂದ ಹಿನ್ನಡೆ ಅನುಭವಿಸಿದರು.ಮತ ಏಣಿಕೆ ಆರಂಭದಿಂದಲೂ ಬಿಜೆಪಿ ನ್ನೆಡೆ ಅನುಭಸಿದ್ದು ಗಮನ ಸೆಳೆದಿತ್ತು. ಉತ್ತರ ಪ್ರದೇಶದ 80 ಸ್ಥಾನಗಳ ಪೈಕಿ 40 ಸ್ಥಾನಗಳಲ್ಲಿ ಇಂಡಿ ಒಕ್ಕೂಟದ ಅಭ್ಯರ್ಥಿಗಳು ಮುನ್ನಡೆ ಸಾಧಿಸಿ, ಹಲವು ಕ್ಷೇತ್ರಗಳಲ್ಲಿ ಜಯದ ನಗೆ ಬೀರಿದರು.
ದೇಶಾದ್ಯಂತ ಗಮನ ಸೆಳೆದಿದ್ದ ಉತ್ತರ ಪ್ರದೇಶದ ಚುನಾವಣೆಯಲ್ಲಿ ಬಿಜೆಪಿ ಅತೀ ಹೆಚ್ಚು ಸ್ಥಾನಗಳ ಗೆಲುನ ನಿರೀಕ್ಷೆಯಲ್ಲಿತ್ತು. ರಾಮ ಮಂದಿರ ನಿರ್ಮಾಣದ ಹಿನ್ನಲೆಯಲ್ಲಿ 80 ಸ್ಥಾನಗಳಲ್ಲಿ ಕನಿಷ್ಠ 70 ಸ್ಥಾನಗಳನ್ನ ಗೆಲುವುದಾಗಿ ನಾಯಕರು ಹೇಳಿಕೊಂಡಿದ್ದರು.
ಪ್ರಧಾನಿ ಮೋದಿ, ಅಮಿತ್ ಷಾ, ಮುಖ್ಯಮಂತ್ರಿ ಆದಿತ್ಯನಾಥ್ ಯೋಗಿ ಅವರು ಭರ್ಜರಿ ರೋಡ್ ಶೋ ನಡೆಸಿ ಪ್ರಚಾರ ನಡೆಸಿದ್ದರಾದರೂ, ನಿರೀಕ್ಷಿತ ಲಿತಾಂಶ ಬಂದಿಲ್ಲ.