ನವದೆಹಲಿ,ಮಾ.2- ಭಾರತದ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ದುರ್ಬಲಗೊಳಿಸುವ ಬಿಜೆಪಿಯ ಯಾವುದೇ ಪಿತೂರಿ ಯಶಸ್ವಿಯಾಗುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.
ಪ್ರಧಾನ ಮಂತ್ರಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಒಳಗೊಂಡ ಸಮಿತಿಯ ಸಲಹೆಯ ಮೇರೆಗೆ ರಾಷ್ಟ್ರಪತಿಗಳು ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರ ನೇಮಕಾತಿಗಳನ್ನು ಮಾಡುತ್ತಾರೆ ಎಂದು ಸುಪ್ರೀಂ ಕೋರ್ಟ್ ಗುರುವಾರ ತೀರ್ಪು ನೀಡಿದ ಬಳಿಕ ಪ್ರತಿಕ್ರಿಯಿಸಿದ ಅವರು, ಪ್ರಜಾಪ್ರಭುತ್ವ ಮತ್ತು ಸಂವಿಧಾನದ ವಿರುದ್ಧ ಬಿಜೆಪಿಯ ಹುನ್ನಾರಗಳ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ತೀರ್ಪು ನೀಡಿದೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ವಿಡಿಯೋ ವೈರಲ್, ರೊಚ್ಚಿಗೆದ್ದ ಬಿಜೆಪಿ
ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಬಹಳ ಮಹತ್ವದ್ದಾಗಿದೆ. ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ದುರ್ಬಲಗೊಳಿಸುವ ಬಿಜೆಪಿಯ ಪಿತೂರಿ ಎಂದಿಗೂ ಯಶಸ್ವಿಯಾಗುವುದಿಲ್ಲ ಎಂದು ಟ್ವೀಟ್ ಮಾಡಿದೆ.
ತೀರ್ಪಿನ ಕುರಿತು ಕಾಂಗ್ರೆಸ್ ಸಂಸದ ಮನೀಶ್ ತಿವಾರಿ, ನನ್ನ ಖಾಸಗಿ ಸದಸ್ಯರ ಮಸೂದೆಯ ಪ್ರಕಾರ ನೋಂದಾಯಿತ ರಾಷ್ಟ್ರೀಯ ಮತ್ತು ರಾಜ್ಯ ರಾಜಕೀಯ ಪಕ್ಷಗಳ ಆಂತರಿಕ ಪ್ರಕ್ರಿಯೆಗಳ ಮೇಲೆ ನಿಷ್ಪಕ್ಷಪಾತ ಚುನಾವಣಾ ಆಯೋಗದ ಮೇಲ್ವಿಚಾರಣೆಯನ್ನು ನೀಡಲು 324 ನೇ ವಿಧಿಗೆ ತಿದ್ದುಪಡಿ ತರಬೇಕು ಎಂದಿದ್ದಾರೆ.
ನ್ಯಾಯಮೂರ್ತಿ ಕೆ.ಎಂ.ಜೋಸೆಫ್ ನೇತೃತ್ವದ ಐವರು ನ್ಯಾಯಾೀಧಿಶರ ಸಂವಿಧಾನ ಪೀಠವು ಸರ್ವಾನುಮತದ ತೀರ್ಪಿನಲ್ಲಿ, ಸಂಸತ್ತಿನಲ್ಲಿ ಈ ವಿಷಯದ ಬಗ್ಗೆ ಕಾನೂನು ಮಾಡುವವರೆಗೆ ನಿಯಮವು ಯಥಾರೀತಿ ಮುಂದುವರಿಯುತ್ತದೆ ಎಂದು ತಿಳಿಸಿದೆ.
ಕಟ್ಟಣ ನಿರ್ಮಾಣ ಪರವಾನಗಿ ಸಂಪೂರ್ಣ ಗಣಕೀಕರಣ
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಇಲ್ಲದಿದ್ದರೆ, ಮುಖ್ಯ ಚುನಾವಣಾ ಆಯುಕ್ತ ಮತ್ತು ಚುನಾವಣಾ ಆಯುಕ್ತರನ್ನು ನೇಮಿಸುವ ಸಮಿತಿಯಲ್ಲಿ ಏಕೈಕ ದೊಡ್ಡ ವಿರೋಧ ಪಕ್ಷದ ನಾಯಕರಿರುತ್ತಾರೆ ಎಂದು ಸುಪ್ರೀಂಕೋರ್ಟ್ ಹೇಳಿದೆ.
BJP, undermine, democracy, Congress,