ಪರಿಷತ್ ಕದನದಲ್ಲಿ ಸೋಲು : ಸಚಿವರು, ಶಾಸಕರ ವಿರುದ್ಧ ಶಿಸ್ತು ಸಮಿತಿಗೆ ದೂರು..!

Social Share

ಬೆಂಗಳೂರು,ಜ.21- ಪರಿಷತ್ ಚುನಾವಣೆಯಲ್ಲಿ ಪಕ್ಷದ ಹಿನ್ನಡೆಗೆ ಸಚಿವರು ಹಾಗೂ ಶಾಸಕರು ಪಕ್ಷದ ಶಿಸ್ತು ಉಲ್ಲಂಘನೆ ಮಾಡಿರುವುದು ಕಾರಣ ಎಂದು ಮೇಲ್ನೋಟಕ್ಕೆ ಕಂಡು ಬಂದರೆ, ಅಂತವರ ವಿರುದ್ಧ ಕ್ರಮ ಕೈಗೊಳ್ಳಲು ಕೇಂದ್ರ ಶಿಸ್ತು ಸಮಿತಿಗೆ ಶಿಫಾರಸ್ಸು ಮಾಡಲು ಬಿಜೆಪಿ ರಾಜ್ಯ ಶಿಸ್ತು ಸಮಿತಿ ನಿರ್ಧರಿಸಿದೆ.
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಶಿಸ್ತು ಸಮಿತಿ ಸಭೆ ನಡೆಯಿತು. ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಸಷತ್ತಿಗೆ ನಡೆದ ಚುನಾವಣೆ ಸಂದರ್ಭದಲ್ಲಿ ಕೆಲವು ಸಚಿವರು ಪಕ್ಷದ ಅಕೃತ ಅಭ್ಯರ್ಥಿಗಳ ವಿರುದ್ಧ ಕೆಲಸ ಮಾಡಿ, ಬೇರೆ ಅಭ್ಯರ್ಥಿಗಳಿಗೆ ಅನುಕೂಲಕರ ಕೆಲಸ ಮಾಡಿದ್ದಾರೆ ಎಂದು ಪರಿಷತ್ ಚುನಾವಣೆಗೆ ಸ್ರ್ಪಸಿದ್ದ ಕೆಲವು ಅಭ್ಯರ್ಥಿಗಳು ಶಿಸ್ತು ಸಮಿತಿಗೆ ದೂರು ಸಲ್ಲಿಸಿದ್ದು, ಈ ಸಂಬಂಧ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.
ಕೆಲವು ಜಿಲ್ಲೆಗಳಲ್ಲಿ ಪಕ್ಷದ ಶಾಸಕರೂ ಕೂಡ ಪಕ್ಷದ ಅಭ್ಯರ್ಥಿಗಳ ವಿರುದ್ಧ ಕೆಲಸ ಮಾಡಿರುವ ಬಗ್ಗೆಯೂ ದೂರು ಸಲ್ಲಿಕೆಯಾಗಿದೆ ಎಂದು ತಿಳಿದು ಬಂದಿದ್ದು, ಈ ಬಗ್ಗೆಯೂ ಶಿಸ್ತು ಸಮಿತಿ ಸಭೆಯಲ್ಲಿ ಚರ್ಚಿಸಲಾಗಿದೆ, ಬೆಳಗಾವಿ ಮತ್ತು ಮೈಸೂರು ಎರಡೂ ದ್ವಿ ಸದಸ್ಯ ಕ್ಷೇತ್ರವಾಗಿದ್ದು, ಬಿಜೆಪಿ ಜನಪ್ರತಿನಿಗಳೇ ಹೆಚ್ಚಾಗಿದ್ದರೂ ಎರಡೂ ಕಡೆ ಪಕ್ಷ ಸೋತಿರುವ ಬಗ್ಗೆಯೂ ಚರ್ಚೆ ನಡೆದಿದೆ. ನಿರ್ದಿಷ್ಟವಾಗಿ ಈ ಎರಡು ಜಿಲ್ಲೆಗಳಿಂದಲೂ ದೂರು ಬಂದಿವೆ ಎಂದು ತಿಳಿದು ಬಂದಿದೆ.
ಮೊದಲ ಹಂತದಲ್ಲಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಅವರು ದೂರು ಬಂದ ಜಿಲ್ಲೆಗಳಿಗೆ ಭೇಟಿ ನೀಡಿ, ಸ್ಥಳೀಯ ಮುಖಂಡರ ಅಭಿಪ್ರಾಯ ಪಡೆಯಬೇಕು, ನಂತರ ದೂರು ಬಂದಿರುವವರಿಗೆ ಕಾರಣ ಕೇಳಿ ನೋಟಿಸ್ ನೀಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ.
ಒಂದು ವೇಳೆ ಮೇಲ್ನೋಟಕ್ಕೆ ಪಕ್ಷದ ಅಕೃತ ಅಭ್ಯರ್ಥಿಗಳ ಸೋಲಿಕೆ ಕಾರಣವಾಗಿದ್ದು ಕಂಡು ಬಂದಲ್ಲಿ ಅಂತವರ ವಿರುದ್ಧ ಕ್ರಮಕ್ಕೆ ಪಕ್ಷದ ಕೇಂದ್ರ ಶಿಸ್ತು ಸಮಿತಿಗೆ ಕಳುಹಿಸಿ ಕೊಡಲು ಇಂದಿನ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿದು ಬಂದಿದೆ.

Articles You Might Like

Share This Article