ವಿಜಯ ಸಂಕಲ್ಪ ಅಭಿಯಾನಕ್ಕೆ ಬಿಜೆಪಿ ಚಾಲನೆ

Social Share

ಬೆಂಗಳೂರು, ಜ.21- ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಶತಾಯ- ಗತಾಯ ಮತ್ತೆ ಅಧಿಕಾರಕ್ಕೆ ಬರಲೇಬೇಕೆಂದು ಪಣ ತೊಟ್ಟಿರುವ ಆಡಳಿತಾರೂಢ ಬಿಜೆಪಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ವಿಜಯ ಸಂಕಲ್ಪ ಅಭಿಯಾನಕ್ಕೆ ರಾಜ್ಯಾದ್ಯಾಂತ ಇಂದು ಚಾಲನೆ ನೀಡಿತು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಬಿಜಾಪುರದ ನಾಗಠಾಣಾದಲ್ಲಿ ಚಾಲನೆ ಕೊಟ್ಟರೆ, ಸಿಂಧಗಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ದಾವಣಗೆರೆಯಲ್ಲಿ ಕೇಂದ್ರ ಗಣಿ ಇಲಾಖೆಯ ಸಚಿವ ಪ್ರಹ್ಲಾದ್ ಜೋಶಿ, ದಾಬಸ್ ಪೇಟೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಯನಗರ, ಬಿಟಿಎಂ ಲೇಔಟ್‍ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲï, ಬಿಜೆಪಿ ರಾಜ್ಯ ಸಹ ಉಸ್ತುವಾರಿ ಡಿ.ಕೆ.ಅರುಣಾ ಮಹಾಲಕ್ಷ್ಮಿ ಲೇಔಟ್‍ನಲ್ಲಿ ಚಾಲನೆ ಕೊಟ್ಟರು.

ಕೇಂದ್ರ, ರಾಜ್ಯ ಸರ್ಕಾರಗಳ ಕೊಡುಗೆಯನ್ನು ಜನರಿಗೆ ತಿಳಿಸುವುದು, ಕರಪತ್ರ ಮುದ್ರಿಸಿ 2 ಕೋಟಿ ಮತದಾರರ ಮನೆಗೆ ತಲುಪಿಸುವುದು, ಸರ್ಕಾರದ 1 ಕೋಟಿ ಫಲಾನುಭವಿ ಕುಟುಂಬಗಳನ್ನು ಸಂಪರ್ಕಿಸುವುದು ಹಾಗೂ ಬಿಜೆಪಿ ಸರ್ಕಾರದಿಂದಾದ ಸಬಲೀಕರಣದ ಬಗ್ಗೆ ಮಾಹಿತಿ ನೀಡುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ.

ಅದ್ಧೂರಿ ಗಣರಾಜ್ಯೋತ್ಸವಕ್ಕೆ ಎಲ್ಲೆಡೆ ಭದ್ರತೆ

ಬಿಜೆಪಿ ಸರ್ಕಾರಗಳ ಯೋಜನೆಗಳಿಂದ ಈ ಕುಟುಂಬಗಳ ಸಬಲೀಕರಣ ಆದುದ್ದನ್ನು ತಿಳಿಸಲಾಗುವುದು. ವಾಹನಗಳ ಮೇಲೆ ಸ್ಟಿಕ್ಕರ್ ಅಂಟಿಸುವ ಕೆಲಸವೂ ನಡೆಯಲಿದೆ. ಕನಿಷ್ಠ ಮೂರು ಕೋಟಿ ಸ್ಟಿಕ್ಕರ್‍ಗಳನ್ನು ಹಂಚಲಾಗುವುದು. ಕಿಸಾನ್ ಸಮ್ಮಾನ್, ಉಜ್ವಲ, ಮುದ್ರಾ ಸೇರಿದಂತೆ ಸರ್ಕಾರ ಜಾರಿಗೊಳಿಸಿದ ಹತ್ತಾರು ಕಾರ್ಯಕ್ರಮಗಳ ಬಗ್ಗೆ ಜನಜಾಗೃತಿ ಮೂಡಿಸಲಾಗುವುದು. ಏಕಕಾಲದಲ್ಲಿ ಎಲ್ಲ ಬೂತ್‍ಗಳಲ್ಲಿ, ಮಂಡಲಗಳಲ್ಲಿ ಅಭಿಯಾನ ಮುಂದುವರಿಯಲಿದೆ.

ಮಿ¸್ಡïಕಾಲ್ ಅಭಿಯಾನ: ಇದೇ ವೇಳೆ ಮಿ¸್ಡïಕಾಲ್ ಕೊಡುವ ಮೂಲಕ ಸದಸ್ಯತ್ವ ನೋಂದಣಿ ಅಭಿಯಾನವೂ ನಡೆಯಲಿದೆ. ಒಂದು ಕೋಟಿಗೂ ಹೆಚ್ಚು ಸದಸ್ಯರನ್ನು ನೋಂದಾಯಿಸುವ ಗುರಿ ಹೊಂದಲಾಗಿದೆ. ಸಮಾಜದ ಸಮಸ್ತರನ್ನು ಪಕ್ಷದ ಜೊತೆ ಸೇರ್ಪಡೆ ಮಾಡಿ, ದೇಶ ಕಟ್ಟುವ ಕಾರ್ಯದಲ್ಲಿ ಎಲ್ಲರನ್ನೂ ಜೊತೆಗೂಡಿಸಲಾಗುವುದು. ಬಿಜೆಪಿ ನೇತೃತ್ವದ ಸರ್ಕಾರವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಈ ಅಭಿಯಾನ ನಡೆಸಲಾಗುತ್ತಿದೆ.

ಮೆಟ್ರೋ ಪಿಲ್ಲರ್ ಕುಸಿತಕ್ಕೆ ಗುತ್ತಿಗೆದಾರ ಎಂಜಿನಿಯರ್‌ಗಳೇ ಹೊಣೆ

ಬೂತ್ ಅಭಿಯಾನದ ನಂತರ ರಾಜ್ಯದ ನಾಲ್ಕು ದಿಕ್ಕುಗಳಿಂದ ರಥಯಾತ್ರೆಯನ್ನು ಫೆಬ್ರವರಿ ಅಂತ್ಯದಲ್ಲಿ ಆರಂಭಿಸಲು ಬಿಜೆಪಿ ಮುಂದಾಗಿದೆ. ಪಕ್ಷದ ಸಂಘಟನೆ, ಫೆಬ್ರವರಿ ಅಂತ್ಯದವರೆಗೆ ಜನ ಸಂಕಲ್ಪ ಯಾತ್ರೆ ಮುಂದುವರೆಸುವುದು. ಜಿಲ್ಲಾ ಹಾಗೂ ರಾಜ್ಯಮಟ್ಟದ ಪ್ರಣಾಳಿಕೆ ಸಿದ್ಧ ಪಡಿಸುವುದು, ರಾಷ್ಟ್ರೀಯ ನಾಯಕರ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಾರ್ಯಕ್ರಮಗಳ ಪಟ್ಟಿಯನ್ನು ಮನೆಮನೆಗೆ ತಲುಪಿಸುವುದು, ತಾಲೂಕುಮಟ್ಟದ ಸಮ್ಮೇಳನಗಳನ್ನು , ಹಲವು ಮೋರ್ಚಾಗಳ ಜಿಲ್ಲೆ ಮಟ್ಟದ ಸಮಾವೇಶವನ್ನು ಎಲ್ಲೆಡೆ ಏರ್ಪಡಿಸಲು ತೀರ್ಮಾನಿಸಲಾಗಿದೆ.

BJP, Vijaya Sankalp, Abhiyan, JP Nadda, inaugurate,VijayaSankalpaAbhiyana

Articles You Might Like

Share This Article