Tuesday, December 3, 2024
Homeರಾಜ್ಯಗೋಡೆ ಬರಹ ಅಭಿಯಾನಕ್ಕೆ ಬಿಜೆಪಿ ಚಾಲನೆ

ಗೋಡೆ ಬರಹ ಅಭಿಯಾನಕ್ಕೆ ಬಿಜೆಪಿ ಚಾಲನೆ

ಬೆಂಗಳೂರು,ಫೆ.8- ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಬಿಜೆಪಿ ಗೋಡೆ ಬರಹ ಅಭಿಯಾನಕ್ಕೆ ಇಂದು ರಾಜ್ಯಾದ್ಯಂತ ಚಾಲನೆ ನೀಡಿತು. ಮತ್ತೊಮ್ಮೆ ಮೋದಿ 2024 ಎಂಬ ಗೋಡೆಬರಹ ಅಭಿಯಾನಕ್ಕೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವರು ರಾಜ್ಯದ ವಿವಿಧ ಕಡೆ ಚಾಲನೆ ಕೊಟ್ಟಿದ್ದಾರೆ.

ಕಾಂಗ್ರೆಸ್‍ನತ್ತ ಕೆ.ಆರ್.ಪೇಟೆ ಮಾಜಿ ಶಾಸಕ ನಾರಾಯಣಗೌಡ..!?

ವಿಜಯೇಂದ್ರ ಅವರು ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಕೆಂಗೇರಿ ಹೋಬಳಿ ವ್ಯಾಪ್ತಿಗೆ ಬರುವ ಕೆ.ಎಚ್.ಗೊಲ್ಲಹಳ್ಳಿ ಗ್ರಾಮದಲ್ಲಿ ಮತ್ತೊಮ್ಮೆ ಮೋದಿ ಗೋಡೆ ಬರಹಕ್ಕೆ ಚಾಲನೆ ಕೊಟ್ಟರು. ಈ ವೇಳೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷ ಎಸ್.ಹರೀಶ್, ಬಿಜೆಪಿ ಮುಖಂಡ ಮಾರೇಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಆದರೆ ಯಶವಂತಪುರ ಶಾಸಕ ಎಸ್.ಟಿ.ಸೋಮಶೇಖರ್ ಅಭಿಯಾನಕ್ಕೆ ಗೈರು ಹಾಜರಾಗಿದದ್ದು ಎದ್ದು ಕಾಣುತ್ತಿತ್ತು. ಇನ್ನೊಂದೆಡೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೈಸೂರು ಜಿಲ್ಲೆ ಚಾಮರಾಜ ಕ್ಷೇತ್ರದ ಪಡುವಾರಹಳ್ಳಿಯಲ್ಲಿ ಮತ್ತೊಮ್ಮೆ ಮೋದಿ 2024 ಎಂಬ ಗೋಡೆಬರಹಕ್ಕೆ ಬಣ್ಣ ಹಚ್ಚುವ ಮೂಲಕ ಚಾಲನೆ ನೀಡಿದ್ದಾರೆ. ಈ ವೇಳೆ ಮಾಜಿ ಶಾಸಕರಾದ ಎಲ್.ನಾಗೇಂದ್ರ, ಎನ್.ಮಹೇಶ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ಎಂ.ರಾಜೇಂದ್ರ, ಮುಖಂಡರಾದ ಕವಿತಾ ಗೌಡ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಹಂತದಲ್ಲಿ ಜಿಲ್ಲಾಧ್ಯಕ್ಷರು, ತಾಲ್ಲೂಕು ಮಟ್ಟದಲ್ಲಿ ತಾಲ್ಲೂಕು ಅಧ್ಯಕ್ಷರು ಕೂಡ ಈ ಅಭಿಯಾನದಲ್ಲಿ ಭಾಗಿಯಾಗುವಂತೆ ಸೂಚನೆ ನೀಡಲಾಗಿದೆ. ಇದು ಗ್ರಾಮಪಂಚಾಯ್ತಿಯಿಂದ ಹಿಡಿದು, ಜಿಲ್ಲಾ ಹಂತದವರೆಗೂ ಈ ಅಭಿಯಾನ ನಡೆಯಲಿದ್ದು, ಪ್ರಮುಖ ಸ್ಥಳಗಳಲ್ಲಿ ಈ ಗೋಡೆ ಬರಹ ಅಭಿಯಾನ ನಡೆಯಲಿದೆ.

RELATED ARTICLES

Latest News