Sunday, September 8, 2024
Homeರಾಜ್ಯಕಲ್ಲಡ್ಕ ಪ್ರಭಾಕರ್ ಬಂಧನಕ್ಕೆ ಬಿ.ಕೆ.ಹರಿಪ್ರಸಾದ್ ಆಗ್ರಹ

ಕಲ್ಲಡ್ಕ ಪ್ರಭಾಕರ್ ಬಂಧನಕ್ಕೆ ಬಿ.ಕೆ.ಹರಿಪ್ರಸಾದ್ ಆಗ್ರಹ

ಬೆಂಗಳೂರು, ಡಿ.27- ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳ ಗೌರವಕ್ಕೆ ಧಕ್ಕೆಯಾಗುವಂತಹ ಹೇಳಿಕೆ ನೀಡಿರುವ ಸಂಘ ಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸಿಗ ಬಿ.ಕೆ.ಹರಿಪ್ರಸಾದ್ ಒತ್ತಾಯಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಸಂಘ ಪರಿವಾರದ ನಾಯಕರು ಸಂಸ್ಕøತಿ ರಕ್ಷಣೆ ಬಗ್ಗೆ ದೊಡ್ಡ ದೊಡ್ಡ ಮಾತುಗಳಲ್ಲಿ ಭಾಷಣ ಬಿಗಿಯುತ್ತಾರೆ. ಆದರೆ ಕಲ್ಲಡ್ಕ ಪ್ರಭಾಕರ್ ಮೈಸೂರು ಮತ್ತು ಶ್ರೀರಂಗಪಟ್ಟಣದಲ್ಲಿ ನೀಡಿರುವ ಹೇಳಿಕೆ ಕೀಳು ಅಭಿವ್ಯಕ್ತಿಯಿಂದ ಕೂಡಿದ್ದಾಗಿದೆ. ಸರ್ಕಾರ ತಕ್ಷಣವೇ ಅವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಬೇಕಿತ್ತು ಎಂದು ಹೇಳಿದರು.

ಸಮುದಾಯದವರು ಒಟ್ಟಾಗಿ ದೂರು ನೀಡುವ ಮೂಲಕ ಎಫ್‍ಐಆರ್ ದಾಖಲಿಸಲಾಗಿದೆ. ಇದರ ಆಧಾರದ ಮೇಲೆ ಕೂಡಲೇ ಕಲ್ಲಡ್ಕ ಪ್ರಭಾಕರ್ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು. ಕಾಂಗ್ರೆಸ್ ಪಕ್ಷ ಸರ್ವಜನಾಂಗದ ಶಾಂತಿಯ ತೋಟ ಎಂಬ ಶೀರ್ಷಿಕೆಯ ಪ್ರಣಾಳಿಕೆಯನ್ನು ಜನರ ಮುಂದಿಟ್ಟು, ಮತ ಪಡೆದು ಅಧಿಕಾರಕ್ಕೆ ಬಂದಿದೆ. ಅದರಂತೆ ಕೋಮು ದ್ವೇಷ ಹರಡುವ, ಶಾಂತಿ ಕದಡುವ ವಿಚ್ಛಿದ್ರಾಕಾರಿ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕಿದೆ ಎಂದು ಪ್ರತಿಪಾದಿಸಿದರು.

ಜ.14 ರಿಂದ ರಾಹುಲ್ ಗಾಂಧಿ ಭಾರತ್ ನ್ಯಾಯ ಯಾತ್ರೆ

ಕರ್ನಾಟಕ ರಾಜ್ಯದಲ್ಲಿ ಕನ್ನಡದಲ್ಲೇ ನಾಮಫಲಕ ಇರಬೇಕೆಂಬುದು ಸ್ವಾಗತಾರ್ಹ. ಆದರೆ ಈ ಹಂತದಲ್ಲಿ ಹೋರಾಟ ಮಾಡುವಾಗ ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಮನವಿ ಮಾಡಿದರು. ಕನ್ನಡ ಹೋರಾಟಗಾರರ ಮೇಲೆ ಬಹಳಷ್ಟು ಪ್ರಕರಣಗಳು ಬಾಕಿ ಇವೆ. ನೆಲ, ಜಲ, ಭಾಷೆ ವಿಷಯವಾಗಿ ಪ್ರತಿಭಟನೆ ನಡೆಸಿ ಕಾನೂನಿನ ಇಕ್ಕಟ್ಟಿಗೆ ಸಿಲುಕಿದವರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು ಎಂದರು.

RELATED ARTICLES

Latest News