“ಸಂಸ್ಕೃತ ಭಾಷೆ ಮೇಲಿನ ಮಮತೆಯನ್ನು ತುಳು, ಕೊಡವ ಭಾಷೆಗಳ ಮೇಲೂ ತೋರಿಸಿ”

Social Share

ಬೆಂಗಳೂರು, ಜ.18- ಬಿಜೆಪಿ ರಾಜ್ಯದ ಕೇವಲ 24,821 ಸಂಸ್ಕøತ ಭಾಷಿಗರ ಮೇಲೆ ತೋರಿಸುತ್ತಿರುವ ಅಗಾಧ ಮಮತೆಯನ್ನು ನಮ್ಮ ರಾಜ್ಯದಲ್ಲಿ ಮೂಲೆಗುಂಪಾಗಿರುವ ತುಳು ಮತ್ತು ಕೊಡವ ಭಾಷೆಗಳ ಮೇಲೆ ತೋರಿಸಲಿ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, 2011ರ ಜನಗಣತಿ ಪ್ರಕಾರ, ರಾಜ್ಯದಲ್ಲಿರುವ ಒಟ್ಟು ತುಳುವರ ಸಂಖ್ಯೆ 18,46,427 ಹಾಗೆಯೇ ಕೊಡವ ಭಾಷೆಯನ್ನಾಡುವವರ ಸಂಖ್ಯೆ 1,13,857. ಆದರೆ, ಸಂಸ್ಕøತ ಭಾಷೆಯನ್ನು ತಮ್ಮ ಮಾತೃಭಾಷೆಯೆಂದು ದಾಖಲಿಸಿದವರ ಸಂಖ್ಯೆ 24,821 ಮಾತ್ರ.
ಇಷ್ಟು ಕಡಿಮೆ ಜನಸಂಖ್ಯೆಯ ಮೇಲೆ ಬಿಜೆಪಿ ತನ್ನ ಅಗಾಧ ಪ್ರೀತಿ ತೋರಿಸುತ್ತ ಬಂದಿದೆ. ಈಗಾಗಲೇ ರಾಜ್ಯದಲ್ಲಿ ಸಂಸ್ಕøತ ವಿಶ್ವವಿದ್ಯಾಲಯವಿದೆ. ಅದಕ್ಕೆ ಬೇಕಾದ ಎಲ್ಲಾ ಸೌಕರ್ಯಗಳನ್ನು ನೀಡಲಾಗಿದೆ. ಆದರೆ, ನಮ್ಮ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ತುಳು ಮತ್ತು ಕೊಡವ ಭಾಷೆಗಳ ಅಭಿವೃದ್ಧಿಯತ್ತ ಮಾತ್ರ ದಿವ್ಯ ನಿರ್ಲಕ್ಷ್ಯ ತೋರಿಸುತ್ತಿದೆ ಎಂದು ಹೇಳಿದ್ದಾರೆ.
ಭಾಷಾವಾರು ಪ್ರಾಂತ್ಯಗಳು ರಚನೆಯಾದಾಗ ಪ್ರಭಾವೀ ಪ್ರಾದೇಶಿಕ ಭಾಷೆಗಳಿಗೆ ಮಹತ್ವ ಬಂದವು. ಆದರೆ, ಈ ಹಂತದಲ್ಲಿ ಪ್ರಾದೇಶಿಕ ಭಾಷೆಗಳ ಆಶ್ರಯದಲ್ಲಿರುವ, ಆದರೆ ಯಾವುದೇ ರಾಜ್ಯದ ಅಕೃತ ಭಾಷೆಗಳಲ್ಲದ ಸಣ್ಣ ಭಾಷೆಗಳು ತೀವ್ರ ಉಪೇಕ್ಷೆಗೆ ಒಳಗಾಗಿವೆ. ದೇಶದಲ್ಲಿ ಹಲವಾರು ರಾಜ್ಯಗಳು ತಮ್ಮ ಒಂದಕ್ಕೂ ಹೆಚ್ಚು ಭಾಷೆಗಳನ್ನು ಅಧಿಕೃತವಾಗಿ ಘೋಷಿಸಿಕೊಂಡಿವೆ.
ಆದರೆ, ಕರ್ನಾಟಕ ರಾಜ್ಯ ಕನ್ನಡವನ್ನು ಹೊರತುಪಡಿಸಿ ಬೇರೆ ಭಾಷೆಗಳಿಗೆ ಅಧಿಕೃತ ಸ್ಥಾನ ನೀಡಿಲ್ಲ. ಬಹುಜನರು ದಿನನಿತ್ಯ ಉಪಯೋಗಿಸುವ ಕೊಡವ, ತುಳು ಭಾಷೆಗಳನ್ನು ಕರ್ನಾಟಕದ ಅಕೃತ ಭಾಷೆಗಳೆಂದು ಮಾನ್ಯ ಮಾಡಬಹುದಾಗಿದೆ. ಆದರೆ, ಮಾನ್ಯ ಮಾಡದೆ ಇರುವುದರಿಂದ ಕೇಂದ್ರ ಸರ್ಕಾರ ಸುಲಭವಾಗಿ ನುಣುಚಿಕೊಳ್ಳುತ್ತಿದೆ. ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಭಾಷೆಗಳಾದ ತುಳು ಮತ್ತು ಕೊಡವ ಭಾಷೆಗಳನ್ನು ರಾಜ್ಯ ಸರ್ಕಾರ ಮೊದಲು ತನ್ನ ಅಧಿಕೃತ ಭಾಷೆಗಳೆಂದು ಘೋಷಿಸಬೇಕು ಎಂದು ಆಗ್ರಹಿಸಿದರು.
ಸಂಸ್ಕøತಕ್ಕೆ ನೀಡುತ್ತಿರುವಷ್ಟೇ ಮಹತ್ವವನ್ನು ನಮ್ಮ ಕನ್ನಡ, ತುಳು ಹಾಗೂ ಕೊಡವ ಭಾಷೆಗೂ ನೀಡುವ ಮೂಲಕ ಒಂದು ಕಣ್ಣಿಗೆ ಸುಣ್ಣ ಒಂದು ಕಣ್ಣಿಗೆ ಬೆಣ್ಣೆ ಎನ್ನುವ ನೀತಿಯನ್ನು ಬಿಡಬೇಕು. ಹಾಗೆಯೇ ನಮ್ಮ ಭಾಷೆಗಳ ಅಭಿವೃದ್ಧಿಗೆ ಪ್ರೋತ್ಸಾಹ ನೀಡಬೇಕು ಎಂದು ಒತ್ತಾಯಿಸಿದರು.

Articles You Might Like

Share This Article