Saturday, September 14, 2024
Homeರಾಷ್ಟ್ರೀಯ | Nationalಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಪೋಟ, ಅಪರಿಚಿತ ವ್ಯಕ್ತಿಗಳ ವಿರುದ್ದ ಎಫ್‍ಐಆರ್

ಇಸ್ರೇಲ್ ರಾಯಭಾರ ಕಚೇರಿ ಬಳಿ ಸ್ಪೋಟ, ಅಪರಿಚಿತ ವ್ಯಕ್ತಿಗಳ ವಿರುದ್ದ ಎಫ್‍ಐಆರ್

ನವದೆಹಲಿ,ಡಿ.30- ಇಸ್ರೇಲಿ ರಾಯಭಾರಿ ಕಚೇರಿ ಬಳಿ ಕಡಿಮೆ ತೀವ್ರತೆಯ ಸ್ಪೋಟ ಸಂಭವಿಸಿದ ಕೆಲವೇ ದಿನಗಳ ನಂತರ, ದಿಲ್ಲಿ ಪೊಲೀಸರು ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ತುಘಲಕ್ ರಸ್ತೆ ಪೊಲೀಸ್ ಠಾಣೆಯಲ್ಲಿ ಸ್ಪೋಟಕ ವಸ್ತುಗಳ ಕಾಯ್ದೆಯ ಸೆಕ್ಷನ್ 3 (ಸ್ಪೋಟಕ್ಕೆ ಜೀವ ಅಥವಾ ಆಸ್ತಿಗೆ ಅಪಾಯವನ್ನುಂಟುಮಾಡುವ ಶಿಕ್ಷೆ) ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ.

ಪೃಥ್ವಿರಾಜ್ ರಸ್ತೆಯಲ್ಲಿರುವ ಪ್ಲಾಟ್ ಸಂಖ್ಯೆ 4, ನಂದಾಸ್ ಹೌಸ್ ಮತ್ತು ಸೆಂಟ್ರಲ್ ಹಿಂದಿ ಟ್ರೈನಿಂಗ್ ಇನ್‍ಸ್ಟಿಟ್ಯೂಟ್ ಪ್ಲಾಟ್ ಸಂಖ್ಯೆ 2 ಎ ನಲ್ಲಿರುವ ಮನೆಯ ಗಡಿ ಗೋಡೆಗಳ ನಡುವಿನ ಪ್ರದೇಶದಲ್ಲಿ ಮಂಗಳವಾರ ಸಂಜೆ ಸ್ಪೋಟ ಸಂಭವಿಸಿತ್ತು. ಈ ಪ್ರದೇಶದಲ್ಲಿ ಪೆಪೊದೆಗಳು, ಗಿಡಗಳು ಮತ್ತು ಮರಗಳು ಮತ್ತು ಸಿಸಿಟಿವಿ ಕ್ಯಾಮೆರಾ ಇಲ್ಲದಿರುವುದರಿಂದ ಆರೋಪಿಗಳ ಸುಳಿವು ಇದುವರೆಗೂ ಪತ್ತೆಯಾಗಿಲ್ಲ.

ಅಬುಧಾಬಿಯಲ್ಲಿ ಹಿಂದೂ ದೇವಾಲಯ ಉದ್ಘಾಟನೆಗೆ ಮೋದಿಗೆ ಆಹ್ವಾನ

ಇದು ಡಾ ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿರುವ ಇಸ್ರೇಲಿ ರಾಯಭಾರ ಕಚೇರಿಯ ಹಿಂದೆ, ಪೃಥ್ವಿರಾಜ್ ರಸ್ತೆಗೆ ಸಮಾನಾಂತರವಾಗಿ ಚಲಿಸುತ್ತದೆ. ಸೋಟದಲ್ಲಿ ಯಾರಿಗೂ ಗಾಯಗಳಾಗಿಲ್ಲ. ಸೋಟದ ಸ್ಥಳದ ಬಳಿ ಪೊಲೀಸರು ಇಸ್ರೇಲಿ ರಾಯಭಾರಿಯನ್ನು ಉದ್ದೇಶಿಸಿ ನಿಂದನೀಯ ಪತ್ರವನ್ನು ಕಂಡುಕೊಂಡಿದ್ದಾರೆ.

RELATED ARTICLES

Latest News