ಬಿಎಂಟಿಸಿ ಬಸ್ ಹರಿದು ಸಾವನ್ನಪ್ಪಿದ ವಿದ್ಯಾರ್ಥಿನಿ ಕುಟುಂಬಕ್ಕೆ ಒಂದೂವರೆ ಕೋಟಿ ರೂ.ಪರಿಹಾರ ನೀಡಿ

Social Share

ಬೆಂಗಳೂರು, ಅ.24-ಬಿಎಂಟಿಸಿ ಬಸ್ ಹರಿದು ಮೃತಪಟ್ಟ ವಿದ್ಯಾರ್ಥಿನಿ ಕುಟುಂಬಕ್ಕೆ ಒಂದೂವರೆ ಕೋಟಿ ರೂ. ಪರಿಹಾರ ನೀಡಬೇಕು ಎಂದು ಬೆಂಗಳೂರು ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ. ಕೆಲ ದಿನಗಳ ಹಿಂದೆ ವಿವಿ ಕ್ಯಾಂಪಸ್‍ನಲ್ಲಿ ಬಸ್ ಹತ್ತುತ್ತಿದ್ದ ವಿದ್ಯಾರ್ಥಿನಿ ಶಿಲ್ಪಾ ಎಂಬುವರ ಮೇಲೆ ಬಿಎಂಟಿಸಿ ಬಸ್ ಹರಿದು ತೀವ್ರವಾಗಿ ಗಾಯಗೊಂಡಿದ್ದರು.

ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿಲ್ಪಾ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಮೃತಪಟ್ಟಿದ್ದರು. ಶಿಲ್ಪಾ ಅವರ ಮೇಲೆ ಬಸ್ ಹರಿದಾಗಲೇ ರೊಚ್ಚಿಗೆದ್ದಿದ್ದ ವಿವಿ ವಿದ್ಯಾರ್ಥಿಗಳು ಕ್ಯಾಂಪಸ್ ಒಳಗೆ ಸಾರ್ವಜನಿಕ ವಾಹನ ಸಂಚಾರ ರದ್ದುಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು.

ವಿವಾದಕ್ಕೀಡಾಯ್ತು ಭಾರತ ಗೆಲುವಿಗೆ ಕಾರಣವಾದ ನೋ ಬಾಲ್

ಇದೀಗ ಶಿಲ್ಪಾ ಮೃತಪಟ್ಟಿರುವುದರಿಂದ ಮತ್ತೆ ಕೆರಳಿರುವ ವಿದ್ಯಾರ್ಥಿಗಳು ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ಒಂದೂವರೆ ಕೋಟಿ ರೂ.ಗಳ ಪರಿಹಾರ ನೀಡುವಂತೆ ಒತ್ತಾಯಿಸಿ ಸರ್ಕಾರಕ್ಕೆ ಮೂರು ದಿನಗಳ ಗಡವು ನೀಡಿದ್ದಾರೆ.

ಕಾರ್ಗಿಲ್‍ನಲ್ಲಿ ಯೋಧರೊಂದಿಗೆ ದೀಪಾವಳಿ ಆಚರಿಸಿದ ಪ್ರಧಾನಿ ಮೋದಿ

ಮಾತ್ರವಲ್ಲಿ ವಿದ್ಯಾರ್ಥಿನಿ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಬೇಕು ಒಂದು ವೇಳೆ ನಮ್ಮ ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ.

Articles You Might Like

Share This Article