ಬೆಂಗಳೂರು,ಡಿ.31- ಸಿಹಿ-ಕಹಿ ನೆನಪುಗಳೊಂದಿಗೆ 2023ಕ್ಕೆ ವಿದಾಯ ಹೇಳಿ 2024ನ್ನು ಸ್ವಾಗತಿಸಲು ಸಿಲಿಕಾನ್ ಸಿಟಿ ಸಜ್ಜಾಗಿದ್ದು, ಪ್ರಯಾಣಿಕರ ಹಿತದೃಷ್ಟಿಯಿಂದ ಬಿಎಂಟಿಸಿ ಇಂದು ಮಧ್ಯರಾತ್ರಿ 2 ಗಂಟೆವರೆಗೂ ಸಂಚಾರದ ಅವಧಿಯನ್ನು ವಿಸ್ತರಣೆ ಮಾಡಿದೆ.
ಹೊಸ ವರ್ಷಾಚರಣೆ ಹಿನ್ನಲೆಯಲ್ಲಿ ನಗರದ ವಿವಿಧೆಡೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಸಂಭ್ರಮಾಚರಣೆಯಲ್ಲಿ ಜನರು ಪಾಲ್ಗೊಂಡು ತಮ್ಮ ಮನೆಗಳಿಗೆ ಸುರಕ್ಷಿತವಾಗಿ ತಲುಪಿಸಲು ಅನುವಾಗುವಂತೆ ಬಿಎಂಟಿಸಿ ಬಸ್‍ಗಳು ಸಂಚಾರ ಅವಧಿಯನ್ನು ವಿಸ್ತರಣೆ ಮಾಡಿದೆ. ಜೊತೆಗೆ ಹೆಚ್ಚುವರಿ ಬಸ್‍ಗಳನ್ನು ಸಹ ನಿಯೋಜನೆ ಮಾಡಲಾಗಿದ್ದು, ಬೇಡಿಕೆಗೆ ಅನುಗುಣವಾಗಿ ಬಿಎಂಟಿಸಿ ಸಂಚಾರಕ್ಕೆ ನಿಗಮದಿಂದ ಸಿದ್ದತೆ ಮಾಡಿಕೊಳ್ಳಲಾಗಿದೆ.
ಆಸ್ಕರ್ ಪ್ರಶಸ್ತಿ ಗೆದ್ದ ನಾಟು ನಾಟು ಸಾಂಗ್ ಮತ್ತು ಸಾಕ್ಷ್ಯಚಿತ್ರಕ್ಕೆ ಮೋದಿ ಮೆಚ್ಚುಗೆ
ಎಂಜಿರಸ್ತೆ, ಬ್ರಿಗೇಡ್ ರಸ್ತೆ, ಕಾಡುಗೋಡಿ, ಎಲೆಕ್ಟ್ರಾನಿಕ್ ಸಿಟಿ, ಸರ್ಜಾಪುರ, ಬನ್ನೇರುಘಟ್ಟ, ಕೆಂಗೇರಿ, ಮಾಗಡಿ ರಸ್ತೆ, ಹೆಣ್ಣೂರು ಸೇರಿದಂತೆ ವಿವಿಧ ಪ್ರದೇಶಗಳಿಗೆ ಬಿಎಂಟಿಸಿ ಬಸ್ ಸಂಚಾರ ಇರಲಿದೆ. ಜನ ದಟ್ಟಣೆ ಅಕವಾಗಿರುವ ಯಲಹಂಕ, ಇಂದಿರಾನಗರ, ಕೋರಮಂಗಲ, ಬನಶಂಕರಿ, ಗೊರಗುಂಟೆಪಾಳ್ಯ ಸೇರಿದಂತೆ ಮತ್ತಿತರ ಕಡೆಗೂ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಬಸ್‍ಗಳು ಸಂಚರಿಸಲಿವೆ ಎಂದು ಬಿಎಂಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರತಿನಿತ್ಯ ರಾತ್ರಿ 11 ಗಂಟೆವರೆಗೂ ಮಾತ್ರ ಬಿಎಂಟಿಸಿ ಬಸ್ ಸಂಚಾರ ಇರುತ್ತಿತ್ತು. ವರ್ಷಾಚರಣೆ ಹಿನ್ನಲೆಯಲ್ಲಿ ಸೇವೆಯನ್ನು 2 ಗಂಟೆವರೆಗೂ ವಿಸ್ತರಿಸಲಾಗಿದೆ.