Wednesday, February 28, 2024
Homeಬೆಂಗಳೂರುಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ನಿಂದ ಬಸ್ ಸೇವೆ ಆರಂಭ

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ನಿಂದ ಬಸ್ ಸೇವೆ ಆರಂಭ

ಬೆಂಗಳೂರು, ಡಿ.29- ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ನಿಂದ ಬೆಂಗಳೂರು ಮಹಾನಗರದ ವಿವಿಧ ಸ್ಥಳಗಳಿಗೆ ತಲುಪುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಯುವಜ್ರ ಹಾಗೂ ವಿವಿಧ ನಗರಗಳಿಗೆ ತಲುಪುವ ಕರ್ನಾಟಕ ರಾಜ್ಯರಸ್ತೆ ಸಾರಿಗೆ ನಿಗಮದ ಫ್ಲೈಬಸ್‍ಗಳಿಗೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಮುನಿಯಪ್ಪ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು.

ಪ್ರಸ್ತುತ ವಿಮಾನ ನಿಲ್ದಾಣದಿಂದ ಕೆಎಸ್‍ಆರ್‍ಟಿಸಿ ಒಟ್ಟು 13 ಫ್ಲೈಬಸ್‍ಸೇವೆಗಳನ್ನು 42 ಟ್ರಿಪ್‍ಗಳ ಮುಖಾಂತರ ಪ್ರತಿನಿತ್ಯ ಮೈಸೂರು, ಕುಂದಾಪುರ ಹಾಗೂ ಮಡಿಕೇರಿ ಮಾರ್ಗಗಳಲ್ಲಿ ಆಚರಿಸಲಾಗುತ್ತದೆ. ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮತ್ತು ನಿಲ್ದಾಣದಿಂದ ನಿರ್ಗಮಿಸುವ ಪ್ರಯಾಣಿಕರ ಸೌಲಭ್ಯಕ್ಕಾಗಿ ಪ್ರತಿಷ್ಠಿತ ಫ್ಲೈಬಸ್ ಸಾರಿಗೆ ಸೇವೆಯನ್ನು 2013ರ ಆಗಸ್ಟ್ 13ರಿಂದ ಪ್ರಾರಂಭಿಸಲಾಗಿತ್ತು.

ಹತ್ತು ವರ್ಷಗಳು ಪೂರ್ಣಗೊಂಡಿದ್ದು, ಈಗ ದಶಕದ ವರ್ಷದಲ್ಲಿ ಕಾರ್ಯಾಚರಣೆ ಮಾಡಲಾಗುತ್ತಿದೆ. ಫ್ಲೈಬಸ್ ಸಾರಿಗೆಗಳನ್ನು ಹಂತ ಹಂತವಾಗಿ ಪ್ರಾರಂಭಿಸಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ 9 ಫ್ಲೈಬಸ್, ಮಡಿಕೇರಿಗೆ 2 ಫ್ಲೈಬಸ್ ಹಾಗೂ ಕುಂದಾಪುರಕ್ಕೆ 2 ಫ್ಲೈಬಸ್ ಸಾರಿಗೆಯನ್ನು ಕಾರ್ಯಾಚರಣೆಯನ್ನು ಮಾಡಲಾಗುತ್ತಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಪ್ರತಿ ದಿನ 137 ಹವಾನಿಯಂತ್ರಿತ ಬಸ್‍ಗಳ ಮೂಲಕ 944 ಟ್ರಿಪ್ಪುಗಳಲ್ಲಿ ಕಾರ್ಯಾಚರಣೆ ನಡೆಸಿ 47907 ಕಿ.ಮಿಗಳನ್ನು ಕ್ರಮಿಸಿ 14000 ಪ್ರಯಾಣಿಕರಿಗೆ ಸೇವೆಯನ್ನು ಕಲ್ಪಿಸಲಾಗಿದೆ.

‘ಮೋದಿ ಮತ್ತೆ ಬರಲಿದ್ದಾರೆ’ ಎಂಬ ಘೋಷ ವಾಕ್ಯದೊಂದಿಗೆ ಅಖಾಡಕ್ಕೆ ಧುಮುಕಿದ ಬಿಜೆಪಿ

ವಿಮಾನ ನಿಲ್ದಾಣದ ಲಾಂಜ್‍ನಲ್ಲಿ ಸುಸಜ್ಜಿತ ನೀರಿನ, ಶೌಚಾಲಯದ ವ್ಯವಸ್ಥೆ ಕಲ್ಪಿಸಲಾಗಿದ್ದು, ಬಸ್ಸುಗಳ ಕಾರ್ಯಾಚರಣೆಯ ಸಮಯ, ಡಿಜಿಟಲ್ ಫಲಕಗಳು, ಸಾರ್ವಜನಿಕ ಉದ್ಘೋಷಣ ವ್ಯವಸ್ಥೆ ಕಲ್ಪಿಸಲಾಗಿದ್ದು, 40 ಸಿಬ್ಬಂದಿಗಳು ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಾರ್ವಜನಿಕರಿಗೆ ಮಾಹಿತಿಯನ್ನು ಕನ್ನಡ, ಇಂಗ್ಲೀಷ್ ಹಾಗೂ ಹಿಂದಿ ಭಾಷೆಗಳಲ್ಲಿ ಒದಗಿಸಲಾಗಿತ್ತಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಜಿ. ಸತ್ಯವತಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶಿವ ಶಂಕರ್, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಸತ್ಯಕಿ ರಘುನಾಥ್, ಮುಖ್ಯ ಮಾರುಕಟ್ಟೆ ಅಧಿಕಾರಿ ಶಾಲಿನಿ ರಾವ್, ಡೊಮಿನಿಕ್ ದೇವಸಿಯಾ, ವಿಶಾಲ್ ಕೆ, ಸಂಜಯ್ ಚಂದ್ರ, ಅಕಾರಿಗಳು ಮತ್ತು ಸಿಬ್ಬಂದಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

RELATED ARTICLES

Latest News