ನೇಣು ಬಿಗಿದುಕೊಂಡು ಬಾಡಿ ಬಿಲ್ಡರ್ ಆತ್ಮಹತ್ಯೆ

Social Share

ಬೆಂಗಳೂರು,ಜ.11- ಡಿ ಫಾರ್ಮ್ ವ್ಯಾಸಂಗ ಮಾಡುತ್ತಿದ್ದ ಬಾಡಿ ಬಿಲ್ಡರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂಲತಃ ಕೋಲಾರದ ಶ್ರೀನಿವಾಸಪುರ ನಿವಾಸಿ ಶ್ರೀನಾಥ್(25) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ.

ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಡಿ ಫಾರ್ಮ್ ವ್ಯಾಸಂಗ ಮಾಡುತ್ತಿದ್ದ ಶ್ರೀನಾಥ್ ವಿದ್ಯಾಭ್ಯಾಸದ ಜೊತೆಗೆ ದೇಹದಾಢ್ರ್ಯ ಸ್ಪರ್ಧೆಗಳಲ್ಲೂ ಭಾಗವಹಿಸುತ್ತಿದ್ದನು. ಕೆಆರ್‍ಪುರದ ಹೀರಂಡಹಳ್ಳಿಯಲ್ಲಿ ರೂಮ್ ಮಾಡಿಕೊಂಡು ವಾಸವಾಗಿದ್ದನು. ನಿನ್ನೆ ಶ್ರೀನಾಥ್ ತನ್ನ ರೂಮ್‍ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆತನ ಸ್ನೇಹಿತ ರೂಮ್ ಬಳಿ ಬಂದಾಗಲೇ ಈ ವಿಷಯ ಗೊತ್ತಾಗಿದೆ. ಶ್ರೀನಾಥ್ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ತಕ್ಷಣ ಸ್ನೇಹಿತ ಪೊಲೀಸರಿಗೆ ವಿಷಯ ತಿಳಿಸಿದ್ದಾನೆ. ಸ್ಥಳಕ್ಕೆ ಆಗಮಿಸಿದ ಆವಲಹಳ್ಳಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿ ಮೃತನ ಪೋಷಕರಿಗೆ ಸುದ್ದಿ ತಿಳಿಸಿದ್ದಾರೆ.

ಕಂದರಕ್ಕೆ ಜಾರಿ ಬಿದ್ದು ಮೂವರು ಸೈನಿಕರು ಹುತಾತ್ಮ

ಮೃತನ ಪೋಷಕರು, ಸಂಬಂಧಿಕರು ಶ್ರೀನಿವಾಸಪುರದಿಂದ ನಗರಕ್ಕೆ ಬಂದಿದ್ದು, ಶ್ರೀನಾಥ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಪೋಷಕರು ತಮ್ಮ ಮಗನನ್ನು ಕೊಲೆ ಮಾಡಿ ನೇಣು ಬಿಗಿಯಲಾಗಿದೆ ಎಂದು ಪೋಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೋಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Body builder, suicide, Bengaluru,

Articles You Might Like

Share This Article