Friday, October 11, 2024
Homeಇದೀಗ ಬಂದ ಸುದ್ದಿಸಮಾಜವಾದಿ ಪಕ್ಷದ ಶಾಸಕನ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿ ಶವವಾಗಿ ಪತ್ತೆ

ಸಮಾಜವಾದಿ ಪಕ್ಷದ ಶಾಸಕನ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಬಾಲಕಿ ಶವವಾಗಿ ಪತ್ತೆ

ಲಕ್ನೋ,ಸೆ.10- ಸಮಾಜವಾದಿ ಪಕ್ಷದ ಶಾಸಕರೊಬ್ಬರ ಮನೆಯಲ್ಲಿ ಕೆಲಸದಾಕೆ ಶವವಾಗಿ ಪತ್ತೆಯಾಗಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಭದೋಹಿ ಜಿಲ್ಲೆಯಲ್ಲಿ ನಡೆದಿದೆ. 17 ವರ್ಷದ ಬಾಲಕಿ ಶವ ಪತ್ತೆಯಾಗಿದ್ದು, ಆತಹತ್ಯೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಶಾಸಕ ಜಾಹಿದ್‌ ಬೇಗ್‌ ಅವರ ಮನೆಯ ಟೆರೇಸ್‌‍ನಲ್ಲಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಘಟನೆಯನ್ನು ದಢಪಡಿಸಿದ ಭದೋಹಿ ಪೊಲೀಸ್‌‍ ವರಿಷ್ಠಾಧಿಕಾರಿ ಮೀನಾಕ್ಷಿ ಕಾತ್ಯಾಯನ್‌ ಅವರು ಆತಹತ್ಯೆಯಿಂದ ಸಾವನ್ನಪ್ಪಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ. ಮಾಹಿತಿ ಪಡೆದ ತಕ್ಷಣ ವಿಧಿವಿಜ್ಞಾನ ತಂಡ ಮತ್ತು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತಲುಪಿದರು.

ಶವವನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ, ಬಾಲಕಿ ಇಂಥಾ ನಿರ್ಧಾರ ತೆಗೆದುಕೊಳ್ಳಲು ಕಾರಣವೇನಿರಬಹುದು ಎಂಬುದರ ಕುರಿತು ತನಿಖೆ ನಡೆಯುತ್ತಿದೆ ಎಂದರು.ರಾತ್ರಿ ಊಟ ಮುಗಿಸಿ ಮಲಗಿದ್ದಳು ಎಂದು ಸಂತ್ರಸ್ತೆಯ ಕುಟುಂಬದವರು ತಿಳಿಸಿದ್ದಾರೆ. ಕಳೆದ ಆರು ವರ್ಷಗಳಿಂದ ಶಾಸಕರ ನಿವಾಸದಲ್ಲಿ ಆಕೆ ಕೆಲಸ ಮಾಡುತ್ತಿದ್ದರು.

RELATED ARTICLES

Latest News