ದಾವಣಗೆರೆ,ಫೆ.26- ರಾಷ್ಟ್ರೀಯ ಹೆದ್ದಾರಿಯಲ್ಲಿ ಬೊಲೇರೊ ಟೆಂಪೊ ವಾಹನ ಹೋಗುತ್ತಿದ್ದಾಗ ಏಕಾಏಕಿ ಟೈರ್ ಸ್ಪೋಟಗೊಂಡು ವಾಹನ ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ಬಳಿ ತಡರಾತ್ರಿ ಸಂಭವಿಸಿದೆ. ಮೃತಪಟ್ಟವರನ್ನು ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆ ಮಂತ್ರಾಲಯಂ ತಾಲ್ಲೂಕಿನ ಸಿಂಗರಾಜನಹಳ್ಳಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದ್ದು, ಸದ್ಯಕ್ಕೆ ಇವರ ಹೆಸರು ತಿಳಿದುಬಂದಿಲ್ಲ.
ಘಟನೆಯಲ್ಲಿ ಗಾಯಗೊಂಡಿರುವ ಐದು ಮಂದಿಯನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಚಿಂತಾಜನಕವಾಗಿರುವ ಮತ್ತೊಬ್ಬರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂಭತ್ತು ಮಂದಿ ಬೊಲೇರೊ ಟೆಂಪೊ ವಾಹನದಲ್ಲಿ ಹಾವೇರಿ ಜಿಲ್ಲೆಯ ಬ್ಯಾಡಗಿಯಿಂದ ಮೆಣಸಿನಕಾಯಿಯನ್ನು ತೆಗೆದುಕೊಂಡು ತಮ್ಮೂರಿಗೆ ವಾಪಸ್ ಆಗುತ್ತಿದ್ದರು.
ಮಳೆ, ಬೆಳೆ ಜೊತೆ ಕಮಲ ಅರಳಲಿದೆ: ಮೈಲಾರ ಲಿಂಗೇಶ್ವರ ಭವಿಷ್ಯ..
ದಾವಣಗೆರೆ ನಗರ ಹೊರವಲಯದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48 ರ ಪಂಜಾಬಿ ಡಾಬಾ ಬಳಿ ರಾತ್ರಿ 11.30 ರ ಸುಮಾರಿನಲ್ಲಿ ಏಕಾಏಕಿ ವಾಹನದ ಟೈರ್ ಸ್ಪೋಟಗೊಂಡು ಉರುಳಿಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಸುದ್ದಿ ತಿಳಿದು ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.