ಜೈಪುರ, ಅ.19-ಬಾಂಬ್ ಬೆದರಿಕೆಯ ಕಾರಣ ಇಂದು ಮುಂಜಾನೆ ದುಬೈ-ಜೈಪುರ ಏರ್ ಇಂಡಿಯಾ ವಿಮಾನವು ಇಲ್ಲಿನ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಬಾಂಬ್ ಬೆದರಿಕೆಯ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ನೀಡಿದ ನಂತರ, ಜೈಪುರ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು.
189 ಪ್ರಯಾಣಿಕರಿದ್ದ ವಿಮಾನವು ಬೆಳಗಿನ ಜಾವ 1.20ಕ್ಕೆ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಯಿತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ವಿಮಾನವನ್ನು ಕೂಲಂಕಷವಾಗಿ ಪರಿಶೀಲಿಸಲಾಗಿತ್ತಾದರೂ ಯಾವುದೇ ಅನುಮಾನಾಸ್ಪದವಾಗಿ ಕಂಡುಬಂದಿಲ್ಲ ಎಂದು ಅವರು ಹೇಳಿದರು.
ದೇಶೀಯ ಮತ್ತು ಅಂತರಾಷ್ಟ್ರೀಯ ಮಾರ್ಗಗಳಲ್ಲಿ ವಿವಿಧ ವಿಮಾನಯಾನ ಸಂಸ್ಥೆಗಳು ಸ್ವೀಕರಿಸಿದ ಬಾಂಬ್ ಬೆದರಿಕೆಗಳ ಸರಣಿಯಲ್ಲಿ ಇದು ಇತ್ತೀಚಿನದು. ಸಾಮಾಜಿಕ ಮಾಧ್ಯಮಗಳ ಮೂಲಕ ಹೆಚ್ಚಿನ ಬೆದರಿಕೆಗಳನ್ನು ಸ್ವೀಕರಿಸಲಾಗಿದೆ ಮತ್ತು ಅವೆಲ್ಲವೂ ಸುಳ್ಳು ಎಂದು ತಿಳಿದುಬಂದಿದೆ.