Monday, March 31, 2025
Homeರಾಷ್ಟ್ರೀಯ | Nationalಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ, ತಿರುವನಂತಪುರಂನಲ್ಲಿ ತುರ್ತು ಪರಿಸ್ಥಿತಿ

ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ, ತಿರುವನಂತಪುರಂನಲ್ಲಿ ತುರ್ತು ಪರಿಸ್ಥಿತಿ

Bomb threat on Air India flight, Kerala airport declares full Emergency

ತಿರುವನಂತಪುರಂ, ಆ.22 – ಮುಂಬೈನಿಂದ ಬಂದ ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ ಬಂದ ಹಿನ್ನೆಲೆಯಲ್ಲಿ ತಿರುವನಂತಪುರಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಿಸಲಾಯಿತು.

ಒಟ್ಟು 135 ಪ್ರಯಾಣಿಕರಿದ್ದ ವಿಮಾನವನ್ನು ಬೆಳಿಗ್ಗೆ 8 ಗಂಟೆ ಸುಮಾರಿಗೆ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು ಮತ್ತು ಪ್ರತ್ಯೇಕ ಲಂಗರು ಜಾಗಕ್ಕೆ ಸ್ಥಳಾಂತರಿಸಲಾಯಿತು ಎಂದು ಅವರು ಹೇಳಿದರು. ನಂತರ ಬೆಳಗ್ಗೆ ಸುಮಾರು 8.44ರ ವೇಳೆಗೆ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಕಳಗಿಳಿಸಿ ಸಂಪೂರ್ಣ ತಪಾಸಣೆ ಮಾಡಲಾಯಿತು.

ವಿಮಾನವು ತಿರುವನಂತಪುರಂ ವಿಮಾನ ನಿಲ್ದಾಣವನ್ನು ಸಮೀಪಿಸುತ್ತಿದ್ದಂತೆ ಪೈಲಟ್‌ನಿಂದ ಬೆಳಿಗ್ಗೆ 7.30 ಕ್ಕೆ ಬಾಂಬ್‌ ಬೆದರಿಕೆ ಬಗ್ಗೆ ಮಾಹಿತಿ ತಿಳಿಸಲಾಯಿತು.ತರುವಾಯ, ಬೆಳಿಗ್ಗೆ 7.36 ಕ್ಕೆ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು ಎಂದು ಅವರು ಹೇಳಿದರು.

ಪ್ರಯಾಣಿಕರ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಆದರು ಮುನ್ನೆಚ್ಚರಿಕೆ ವಹಿಸಲಾಗಿತ್ತು.ವಿಮಾನ ನಿಲ್ದಾಣದ ಕಾರ್ಯಾಚರಣೆಗಳಲ್ಲಿ ಯಾವುದೇ ಅಡೆತಡೆಯಿಲ್ಲ, ಎಂದು ಮೂಲಗಳು ತಿಳಿಸಿವೆ.ಬೆದರಿಕೆಯ ಮೂಲದ ವಿವರಗಳು ಮತ್ತು ಇತರ ಮಾಹಿತಿ ಬಗ್ಗೆ ತನಿಖೆ ಆರಂಭಗೊಂಡಿದೆ.

RELATED ARTICLES

Latest News