ನವದೆಹಲಿ, ಅ.17- ಪರೀಕ್ಷೆಗಳನ್ನು ತಪ್ಪಿಸಲು ವಿದ್ಯಾರ್ಥಿಯೊಬ್ಬ ಶಾಲೆಯಲ್ಲಿ ಬಾಂಬ್ ಇಡಲಾಗಿದೆ ಎಂದು ಇ-ಮೇಲ್ ಕಳಿಸಿದ್ದ ಘಟನೆ ಇಲ್ಲಿ ನಡೆದಿದೆ. ದೆಹಲಿಯ ಹೊರವಲಯದ ಖಾಸಗಿ ಶಾಲೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಪೊಲೀಸರು ಪರಿಶೀಲನೆ ನಡೆಸಿದಾಗ ಅದು ಹುಸಿ ಬೆದರಿಕೆ ಎಂದು ಹೊತ್ತಾಗಿ ಕಳಿಸಿದವರು ಯಾರು ಎಂದು ತನಿಖೆ ನಡೆಸಿದಾಗ ಅದೆ ಶಾಲೆಯ ವಿದ್ಯಾರ್ಥಿ ಎಂದು ಗೊತ್ತಾಗಿದೆ.
ವಿಶಾಲ್ ಭಾರತಿ ಪಬ್ಲಿಕ್ ಶಾಲೆಯ ಪ್ರಾಂಶುಪಾಲರು ಪಶ್ಚಿಮ ವಿಹಾರ್ ಪೂರ್ವ ಪೊಲೀಸ್ ಠಾಣೆಗೆ ಮಹಿತಿ ನೀಡಿದಾಗ ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ ಮತ್ತು ಅಗ್ನಿಶಾಮಕ ದಳದ ತಂಡಗಳನ್ನು ಸಂಪೂರ್ಣ ಪರಿಶೀಲನೆ ನಡೆಸಲು ಕರೆಸಲಾಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶೋಧನೆಯ ಸಮಯದಲ್ಲಿ ಯಾವುದೇ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲವಾದ ನಂತರ, ಬೆದರಿಕೆಯನ್ನು ಸುಳು ಎಂದು ಘೋಷಿಸಲಾಯಿತು ಎಂದು ಅವರು ಹೇಳಿದರು.ಪ್ರಕರಣ ದಾಖಲಿಸಲಾಯಿತು ಮತ್ತು ತನಿಖೆಯ ಸಮಯದಲ್ಲಿ, ಸೈಬರ್ ತಂಡವು ಇ-ಮೇಲ್‌ನ ಮೂಲವನ್ನು ಬಾಲಾಪರಾಧಿಗೆ ಪತ್ತೆಹಚ್ಚಿತು.
ಬಾಲಾಪರಾಧಿಯನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಿದಾಗ, ಪರೀಕ್ಷೆಗಳಿಗೆ ಹೆದರಿ ಶಾಲೆಗೆ ರಜೆ ಘೋಷಿಸಬೇಕೆಂದು ಬೆದರಿಕೆ ಪತ್ರ ಕಳುಹಿಸಿದ್ದಾಗಿ ಒಪ್ಪಿಕೊಂಡಿದ್ದಾನೆ ಎಂದು ಅಧಿಕಾರಿ ಹೇಳಿದರು