ನವದೆಹಲಿ,ಜ.9- ಅವ್ಯವಹಾರ ಆರೋಪದಡಿ ಬಂಧನಕ್ಕೊಳಗಾಗಿದ್ದ ಐಸಿಐಸಿಐ ಬ್ಯಾಂಕ್ನ ಮಾಜಿ ಮುಖ್ಯಸ್ಥೆ ಚಂದಾ ಕೊಚ್ಚರ್ ಹಾಗೂ ಅವರ ಪತಿ ದೀಪಕ್ ಕೊಚ್ಚರ್ ಅವರನ್ನು ಬಿಡುಗಡೆ ಮಾಡಲಾಗಿದೆ. ಚಂದಾ ಕೊಚ್ಚರ್ ಹಾಗೂ ಆಕೆಯ ಪತಿಯ ಬಂಧನ ಕಾನೂನು ಪ್ರಕಾರ ನಡೆದಿಲ್ಲ ಎಂದು ಬಾಂಬೆ ಹೈಕೋರ್ಟ್ ತೀರ್ಪು ನೀಡಿದ ನಂತರ ಇಬ್ಬರನ್ನು ಬಿಡುಗಡೆಗೊಳಿಸಲಾಗಿದೆ.
ಚಂದಾ ಕೊಚ್ಚರ್ ಬ್ಯಾಂಕ್ ಮುಖ್ಯಸ್ಥರಾಗಿದ್ದ ಸಂದರ್ಭದಲ್ಲಿ ವಿಡಿಯೋಕಾನ್ ಗ್ರೂಫ್ಗೆ 3 ಸಾವಿರ ಕೋಟಿ ರೂ.ಗಳನ್ನು ಸಾಲವಾಗಿ ನೀಡಿ ಭಾರಿ ಪ್ರಮಾಣದ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪದ ಮೇಲೆ ಕಳೆದ ಡಿಸಂಬರ್ 23 ರಂದು ಅವರನ್ನು ಸಿಬಿಐ ಬಂಧಿಸಿತ್ತು.
ಭ್ರಷ್ಟಾಚಾರ ತಡೆ ಕಾಯ್ದೆಯಡಿಯಲ್ಲಿ ಅವರ ಬಂಧನ ಕಾನೂನುಬಾಹಿರವಾಗಿದೆ, ತನಿಖೆಯನ್ನು ಪ್ರಾರಂಭಿಸಲು ಕಾಯಿದೆಯ ಸೆಕ್ಷನ್ 17ಅ ಅಡಿಯಲ್ಲಿ ಅನುಮತಿ ಕಡ್ಡಾಯವಾಗಿದೆ ಮತ್ತು ಈ ತನಿಖೆಯನ್ನು ಪ್ರಾರಂಭಿಸಲು ಸಂಸ್ಥೆಯು ಅಂತಹ ಯಾವುದೇ ಅನುಮತಿಯನ್ನು ಪಡೆದಿಲ್ಲ ಎಂದು ಕೊಚ್ಚರ್ಗಳು ನ್ಯಾಯಾಲಯದ ಮುಂದೆ ವಾದಿಸಿದ್ದರು.
ಐಪಿಸಿ ಸೆಕ್ಷನ್ಗಳ ಅಡಿಯಲ್ಲಿ ದಾಖಲಾಗಿರುವ ಎಫ್ಐಆರ್ನಲ್ಲಿ ಸಿಬಿಐ ನವರು ಕ್ರಿಮಿನಲ್ ಪಿತೂರಿ ಮತ್ತು 2019 ರಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಚಂದಾ ಕೊಚ್ಚಾರ್ ವಿಡಿಯೋಕಾನ್ ಗ್ರೂಪ್ ಅಧ್ಯಕ್ಷ ವೇಣುಗೋಪಾಲ್ ಧೂತ್ ಮತ್ತು ದೀಪಕ್ ಕೊಚ್ಚರ್, ಸುಪ್ರೀಂ ಎನರ್ಜಿ, ವಿಡಿಯೋಕಾನ್ ಇಂಟರ್ನ್ಯಾಶನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ವಿಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ ಸಂಸ್ಥೆಗಳನ್ನು ಆರೋಪಿಗಳೆಂದು ಹೆಸರಿಸಲಾಗಿತ್ತು.
ದಾವಣಗೆರೆಯಲ್ಲಿ ಕನ್ನಡಪರ ಸಂಘಟನೆಯ ತಾಲೂಕು ಅಧ್ಯಕ್ಷನ ಭೀಕರ ಹತ್ಯೆ
ಕ್ವಿಡ್ ಪ್ರೋಕೋ ಭಾಗವಾಗಿ, ವೇಣುಗೋಪಾಲ್ ಧೂತ್ ಅವರು ಸುಪ್ರೀಮ್ ಎನರ್ಜಿ ಪ್ರೈವೇಟ್ ಲಿಮಿಟೆಡ್ (ಎಸ್ಇಪಿಎಲï) ಮೂಲಕ ನುಪವರ್ ರಿನ್ಯೂವಬಲ್ಸ್ನಲ್ಲಿ 64 ಕೋಟಿ ಹೂಡಿಕೆ ಮಾಡಿದರು ಮತ್ತು 2010 ರ ನಡುವೆ ಸಕ್ರ್ಯೂಟ್ ಮಾರ್ಗದ ಮೂಲಕ ಎಸ್ಇಪಿಎಲ್ ಅನ್ನು ದೀಪಕ್ ಕೊಚ್ಚರ್ ನಿರ್ವಹಿಸುತ್ತಿದ್ದ ಪಿನಾಕಲ್ ಎನರ್ಜಿ ಟ್ರಸ್ಟ್ಗೆ ವರ್ಗಾಯಿಸಿದ ಆರೋಪ ಎದುರಿಸುತ್ತಿದ್ದರು.
Bombay, High Court, orders, release, former, ICICI Bank, MD, Chanda Kochhar,