ಆರೋಗ್ಯ ಸಚಿವರ ಜತೆ ಚರ್ಚಿಸಿದ ಬಳಿಕ ಮಾರ್ಗಸೂಚಿ ಬಿಡುಗಡೆ : ಬೊಮ್ಮಾಯಿ

Spread the love

ಬೆಂಗಳೂರು, ಡಿ.28- ಹೊಸ ವರ್ಷಾಚರಣೆಗೆ ಸಂಬಂಧಿಸಿದ ಮಾರ್ಗಸೂಚಿಯನ್ನು ಆರೋಗ್ಯ ಸಚಿವರೊಂದಿಗೆ ಸಭೆ ನಡೆಸಿ ಚರ್ಚಿಸಿದ ಬಳಿಕ ಬಿಡುಗಡೆ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ವರ್ಷಾಚರಣೆಗೆ ಸಂಬಂಧಿಸಿದಂತೆ ಮಾರ್ಗ ಸೂಚಿ ರೂಪಿಸುವ ಸಂಬಂಧ ಅಧಿಕಾರಿಗಳ ಮಟ್ಟದಲ್ಲಿ ಈಗಾಗಲೇ ಹಲವು ಬಾರಿ ಸಭೆ ನಡೆದಿದೆ ಎಂದು ಹೇಳಿದರು.

ಐಪಿಎಸ್ ಅಧಿಕಾರಿಗಳ ನಡುವಿನ ಆರೋಪ-ಪ್ರತ್ಯಾರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು. ಮುಖ್ಯಕಾರ್ಯದರ್ಶಿಯವರು ಐಪಿಎಸ್ ಅಧಿಕಾರಿಗಳೊಂದಿಗೆ ಮಾತನಾಡಿದ್ದು , ಸೇವಾ ನಿಯಮಗಳಿಗೆ ಅನುಗುಣವಾಗಿ ಸೂಚನೆ ಕೊಡಲಿದ್ದಾರೆ ಎಂದು ಹೇಳಿದರು.

Facebook Comments