Wednesday, January 15, 2025
Homeರಾಷ್ಟ್ರೀಯ | Nationalಬಜೆಟ್‍ನಲ್ಲಿ ನಾರಿಶಕ್ತಿಗೆ ಹೆಚ್ಚಿನ ಒತ್ತು

ಬಜೆಟ್‍ನಲ್ಲಿ ನಾರಿಶಕ್ತಿಗೆ ಹೆಚ್ಚಿನ ಒತ್ತು

ನವದೆಹಲಿ,ಫೆ.1- ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ಮಧ್ಯಂತರ ಬಜೆಟ್‍ನಲ್ಲಿ ನಾರಿ ಶಕ್ತಿಯ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ನಾರಿಶಕ್ತಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದ ಅವರು, ಕಳೆದ 10 ವರ್ಷಗಳಲ್ಲಿ ಉನ್ನತ ಶಿಕ್ಷಣದಲ್ಲಿ ಮಹಿಳೆಯರ ದಾಖಲಾತಿ ಶೇ.28ರಷ್ಟು ಹೆಚ್ಚಾಗಿದೆ.

ವಿಜ್ಞಾನ, ತಂತ್ರಜ್ಞಾನ, ಎಂಜಿನಿಯರಿಂಗ್ ಮತ್ತು ಗಣಿತ ಕೋರ್ಸ್‍ಗಳಲ್ಲಿ ಹುಡುಗಿಯರು ಮತ್ತು ಮಹಿಳೆಯರು ಶೇ.43ರಷ್ಟು ದಾಖಲಾತಿಯನ್ನು ಮಾಡುತ್ತಾರೆ. ಇದು ವಿಶ್ವದಲ್ಲೇ ಅತಿ ಹೆಚ್ಚು ಎಂದು ತಿಳಿಸಿದ್ದಾರೆ.

2024-25ನೇ ಸಾಲಿನ ಕೇಂದ್ರ ಬಜೆಟ್‌ನ ಮುಖ್ಯಾಂಶಗಳು

ತ್ರಿವಳಿ ತಲಾಖ್ ನಿಷೇಧ, ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ 1/3 ಸ್ಥಾನಗಳನ್ನು ಮೀಸಲಿಡುವುದು. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಶೇ.70ರಷ್ಟು ಮನೆಗಳು ಮಹಿಳೆಯರ ಘನತೆಯನ್ನು ಹೆಚ್ಚಿಸಿವೆ ಎಂದರು.

RELATED ARTICLES

Latest News