ಕಲಬುರಗಿ,ಆ.24- ಗುಟ್ಕಾ ತಿನ್ನಬೇಡ… ಆರೋಗ್ಯ ಹಾಳಾಗುತ್ತೆ… ಎಂದು ಅಜ್ಜಿ ಬುದ್ಧಿವಾದ ಹೇಳಿದ್ದಕ್ಕೆ ಮೊಮಗ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿರುವ ಘಟನೆ ಅಫ್ಜಲ್‌ಪುರ ತಾಲ್ಲೂಕಿನ ಕರ್ಜಗಿ ಗ್ರಾಮದಲ್ಲಿ ನಡೆದಿದೆ.ರೋಹಿತ್ ಮಣ್ಣಾಂಕಲಗಿ ಆತಹತ್ಯೆ ಮಾಡಿಕೊಂಡ ಬಾಲಕ.
9ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ ರೋಹಿತ್‌ನನ್ನು ತನ್ನ ಅಜ್ಜಿಯೇ ಕಳೆದ ಏಳೆಂಟು ವರ್ಷಗಳಿಂದ ಸಾಕಿ ಸಲುಹಿ ವಿದ್ಯಾಭ್ಯಾಸ ಕೊಡಿಸುತ್ತಿದ್ದರು. ಆದರೆ ಗುಟ್ಕಾ ತಿನ್ನುವ ಅಭ್ಯಾಸ ಮಾಡಿಕೊಂಡಿದ್ದ. ಈ ವಿಚಾರ ಅಜ್ಜಿಗೆ ತಿಳಿದು ಹಲವು ಬಾರಿ ಬುದ್ದಿವಾದ ಹೇಳಿದ್ದರು.
ಅಜ್ಜಿಯ ಮಾತನ್ನು ಕೇಳದೇ ತನ್ನ ದುಶ್ಚಟವನ್ನು ಮುಂದುವರೆಸಿಕೊಂಡು ಬಂದಿದ್ದ. ಇದರಿಂದ ಬೇಸತ್ತ ಅಜ್ಜಿ ಅಂತಿಮವಾಗಿ ಖಡಕ್ ವಾರ್ನಿಂಗ್ ಮಾಡಿದ್ದರು. ಇದರಿಂದ ಮನನೊಂದು ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿದ್ದಾನೆ. ಸುದ್ದಿ ತಿಳಿದ ಕೂಡಲೇ ಅಫ್ಜಲ್‌ಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.