ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವವರಿಗೆ ಗುಡ್ ನ್ಯೂಸ್

Social Share

ಬೆಂಗಳೂರು,ಜ.3- ಬಡತನ ರೇಖೆಗಿಂತ(ಬಿಪಿಎಲ್) ಕೆಳಗಿರುವ ಕುಟುಂಬದವರಿಗೆ ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ 5 ಕೆಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ನೀಡಲು ಸರ್ಕಾರ ಅಧಿಸೂಚನೆ ನಡೆಸಿದೆ.

ಕಳೆದ ಬಜೆಟ್‍ನಲ್ಲಿ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಜೊತೆಗೆ ಒಂದು ಕೆಜಿ ಹೆಚ್ಚುವರಿ ಅಕ್ಕಿಯನ್ನು ನೀಡುವುದಾಗಿ ಘೋಷಿಸಿದರು.
ಅದರಂತೆ ಈ ತಿಂಗಳಿನಿಂದಲೇ ಅನ್ವಯವಾಗುವಂತೆ 5 ಕೆಜಿ ಅಕ್ಕಿ ಜೊತೆಗೆ ಹೆಚ್ಚುವರಿಯಾಗಿ ವಿತರಣೆ ಮಾಡಲು ಸೂಚನೆ ನೀಡಲಾಗಿದೆ.

ಈ ಸಂಬಂಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅೀಧಿನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ.

ಪರಮಪೂಜ್ಯರ ಇಚ್ಚೆಯಂತೆಯೇ ಅಂತಿಮ ವಿಧಿವಿಧಾನ : ಸಿಎಂ

ಆದೇಶದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಡಿಸೆಂಬರ್ 2022ಕ್ಕೆ ಅಂತ್ಯಗೊಂಡ ಹಿನ್ನಲೆಯಲ್ಲಿ ರಾಜ್ಯದಲ್ಲಿರುವ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲಾಗುತ್ತಿರುವ 5 ಕೆಜಿ ಆಹಾರ ಧಾನ್ಯದೊಂದಿಗೆ ಪ್ರತಿ ತಿಂಗಳು 1 ಕೆಜಿ ಅಕ್ಕಿಯನ್ನು ಹೆಚ್ಚುವರಿಯಾಗಿ ವಿತರಿಸಲು ಉದ್ದೇಶಿಸಿದೆ ಎಂದಿದ್ದಾರೆ.

ಮಹಿಳೆಯರಿಗೆ ದೆಹಲಿ ಸುರಕ್ಷಿತವಲ್ಲ ಎಂಬ ಮತ್ತೊಮ್ಮೆ ಸಾಬೀತು

ಈ ಹಿನ್ನಲೆಯಲ್ಲಿ ಜನವರಿ 2023ರಿಂದ ಜಾರಿಗೆ ಬರುವಂತೆ ಐದು ಕೆಜಿ ಆಹಾರ ಧಾನ್ಯದೊಂದಿಗೆ ಹೆಚ್ಚುವರಿಯಾಗಿ ಪ್ರತಿ ತಿಂಗಳು 1 ಕೆಜಿ ಅಕ್ಕಿಯನ್ನು ಹೆಚ್ಚುವರಿಯಾಗಿ ವಿತರಿಸಲು ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಆದೇಶದ ಹಿನ್ನಲೆಯಲ್ಲಿ ಈ ತಿಂಗಳಿನಿಂದಲೇ ಪಡಿತರ ಚೀಟಿದಾರರ ಪ್ರತಿ ವ್ಯಕ್ತಿಗೆ ಐದು ಕೆಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಣೆ ಆರಂಭವಾಗಲಿದೆ.

bpl, ration card, anna bhagya, rice,

Articles You Might Like

Share This Article