ಬೆಂಗಳೂರು,ಜ.5- ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ನೀಡಲಾಗಿರುವ ಮೀಸಲಾತಿಯನ್ನು ಬೇರೆ ಸಮುದಾಯಕ್ಕೆ ವರ್ಗಾವಣೆಗೊಳಿಸಬಾರದು ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಒತ್ತಾಯಿಸಿದೆ.
ಬೇರೆ ಸಮುದಾಯದವರಿಗೆ ಮೀಸಲಾತಿ ನೀಡಲು ನಾವು ವಿರೋಧಿಸುವುದಿಲ್ಲ. ಆದರೆ, ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾಗಿರುವ ಶೇ.10ರಷ್ಟು ಮೀಸಲಾತಿಯನ್ನು ಕಡಿತಗೊಳಿಸಿ ಬೇರೆ ಸಮುದಾಯಕ್ಕೆ ನೀಡಲು ಒಪ್ಪುವುದಿಲ್ಲ ಎಂದು ಮಹಾಸಭಾದ ಅಧ್ಯಕ್ಷ ಅಶೋಕ್ ಹಾರನಹಳ್ಳಿ ಹೇಳಿದ್ದಾರೆ.
ಸರ್ಕಾರ ಯಾವುದೇ ಸಮುದಾಯಕ್ಕೆ ಮೀಸಲಾತಿ ನೀಡುವುದನ್ನು ನಾವು ವಿರೋಧಿಸುವುದಿಲ್ಲ. ಆರ್ಥಿಕವಾಗಿ ದುರ್ಬಲರಾಗಿರುವವರಿಗೆ ಶೇ.10ರಷ್ಟು ಮೀಸಲಾತಿ ನೀಡುವ ಕೇಂದ್ರ ಸರ್ಕಾರಕ್ಕೆ ನಿರ್ಧಾರವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಇದನ್ನು ತಿರುಚುವ ಪ್ರಯತ್ನ ಮಾಡಬಾರದು ಎಂದು ಅವರು ಮನವಿ ಮಾಡಿದ್ದಾರೆ.
ಕೊರೊನಾ ಉಪತಳಿ ಕ್ರಾಕೆನ್ ಕುರಿತು ಇಸ್ರೆಲ್ ತಜ್ಞ ವೈದ್ಯರ ಎಚ್ಚರಿಕೆ
ಇದೇ ಸಂದರ್ಭದಲ್ಲಿ ಮಹಾಸಭಾ ಕೆಲವು ನಿರ್ಣಯಗಳನ್ನು ತೆಗೆದುಕೊಂಡಿದೆ. ಒಂದು ವೇಳೆ ರಾಜ್ಯ ಸರ್ಕಾರ ಮೀಸಲಾತಿಯನ್ನು ವರ್ಗಾಯಿಸಲು ಮುಂದಾದರೆ ರಾಜ್ಯಮಟ್ಟದಲ್ಲಿ ವಿಪ್ರ ಮುಖಂಡರನ್ನೊಳಗೊಂಡಂತೆ ಒಂದು ಕ್ರಿಯಾ ಸಮಿತಿ ರೂಪಿಸಲು ತೀರ್ಮಾನಿಸಲಾಗಿದೆ.
ಈ ಕ್ರಿಯಾ ಸಮಿತಿಯು ಪ್ರತಿಭಟನಾ ನಿರ್ಣಯವನ್ನು ಸಿದ್ಧಪಡಿಸಿ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಹೋರಾಟ ನಡೆಸಿ ತಹಸೀಲ್ದಾರ್ ಮತ್ತು ಜಿಲ್ಲಾಕಾರಿಗೆ ಮನವಿ ಪತ್ರ ನೀಡುವುದು, ರಾಜ್ಯಪಾಲರು, ಮುಖ್ಯಮಂತ್ರಿಗೂ ಕೂಡ ಮನವಿ ಪತ್ರ ಕೊಡಲು ಸಭೆ ಒಮ್ಮತದ ತೀರ್ಮಾನ ತೆಗೆದುಕೊಂಡಿದೆ.
#BrahmanaMahasabha, #Bangalore, #EWS, #Reservation,