ಗೋಕರ್ಣ,ಫೆ.8- ಬ್ರಾಹ್ಮಣ ಸಮುದಾಯಕ್ಕೆ ಆಡಳಿತಾರೂಢ ಬಿಜೆಪಿ ಏನು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು. ಉತ್ತರಕನ್ನಡ ಜಿಲ್ಲೆಯ ಕುಮಟಾ ವಿಧಾನಸಭಾ ಕ್ಷೇತ್ರದಲ್ಲಿ ಮೂರನೇ ಹಂತದ ಪಂಚರತ್ನ ರಥಯಾತ್ರೆ ಪ್ರಾರಂಭಿಸುವ ಮುನ್ನ ಗೋಕರ್ಣದಲ್ಲಿರುವ ಶ್ರೀ ಮಹಾಬಲೇಶ್ವರ ದೇವರಿಗೆ ಹಾಗೂ ಮಹಾಗಣಪತಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ನಾವು ಬ್ರಾಹ್ಮಣ ವಿರೋಧಿಯಲ್ಲ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ರಾಮಕೃಷ್ಣ ಹೆಗಡೆ ಅವರನ್ನು ಮುಖ್ಯಮಂತ್ರಿ ಮಾಡಿದ್ದರು. ನಾನು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿ ನಲ್ಲಿ ಬ್ರಾಹ್ಮಣ ಸಮುದಾಯ ಭವನಕ್ಕೆ ಜಾಗ ಮಂಜೂರು ಮಾಡಿಕೊಟ್ಟಿದ್ದೆ. ಜೊತೆಗೆ ಬ್ರಾಹ್ಮಣ ಪ್ರಾಧಿಕಾರವನ್ನೂ ರಚನೆ ಮಾಡಲಾಗಿತ್ತು.
ಬಿಜೆಪಿಯವರು ಏನು ಮಾಡಿದ್ದಾರೆ ಎಂಬುದನ್ನು ಹೇಳಲಿ. ನಮಗೆ ಸಾವರ್ಕರ್ ಸಂಸ್ಕøತಿ ಬೇಕಾಗಿಲ್ಲ. ಸರ್ವಜನ ಸುಖೀನೋ ಭವಂತು ಎನ್ನುವ ಬ್ರಾಹ್ಮಣರು ಬೇಕಿದೆ ಎಂದು ಹೇಳಿದರು.
ಮಾರ್ಚ್ 23ರಿಂದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
ಹಿಂದೂ ಧರ್ಮವನ್ನು ನಾವು ರಕ್ಷಣೆ ಮಾಡುತ್ತೇವೆ. ಆದರೆ ಹಿಂದೂ ಧರ್ಮದ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಏನು ಮಾಡಿದ್ದಾರೆ ಎಂಬುದು ನಾಡಿನ ಜನರಿಗೆ ಗೊತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರಿಗೆ ರಾಜಕೀಯ ಎಲ್ಲಿ ಗೊತ್ತಿದೆ? ಎಂದ ಅವರು, ಕಟೀಲ್ ಎಂಬ ಹೆಸರಿಗೆ ಬದಲಿಗೆ ಪಿಟೀಲು ಎಂದು ಇಟ್ಟುಕೊಳ್ಳಿ ಎಂದು ಟೀಕಿಸಿದರು.
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಎಷ್ಟು ಸ್ಥಾನ ಗೆಲ್ಲುತ್ತಾರೆ ಎಂಬುದನ್ನು ನಾಡಿ ಜನರು ನಿರ್ಧರಿಸುತ್ತಾರೆಯೇ ಹೊರತು ಬಿಜೆಪಿ ನಾಯಕರಲ್ಲ. ಉತ್ತರಕನ್ನಡ ಜಿಲ್ಲೆಯಲ್ಲಿ ನಾವು ಎರಡರಿಂದ ಮೂರು ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದರು.
6 ದಿನದಲ್ಲಿ 50 ಕೋಟಿ ಟ್ರಾಫಿಕ್ ದಂಡ ಸಂಗ್ರಹ
ಉತ್ತರಕನ್ನಡ ಜಿಲ್ಲೆಯಲ್ಲಿ ಎರಡು ಹಂತದಲ್ಲಿ ರಥಯಾತ್ರೆ ಮಾಡಲಾಗುವುದು ಈ ಯಾತ್ರೆ ಸಂದರ್ಭದಲ್ಲಿ ಜನರಿಂದ ದೊರೆತಿರುವ ಪ್ರೋತ್ಸಾಹ ನೀಡಿದರೆ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಚುನಾವಣೆ ಸಂದರ್ಭದಲ್ಲಿ ಕೆಲವರು ಪಕ್ಷ ಬಿಟ್ಟು ಹೋಗುವುದು, ಮತ್ತೆ ಕೆಲವರು ಪಕ್ಷಕ್ಕೆ ಸೇರ್ಪಡೆಯಾಗುವುದು ಸಾಮಾನ್ಯ ಎಂದರು.
ಕಾನೂನು ಮಾಪಕ ಇಲಾಖೆಯ ಅಧಿಕಾರಿ ಲೋಕಾಯುಕ್ತ ಬಲೆಗೆ
ಉತ್ತರಕನ್ನಡ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ, ವಿಧಾನಪರಿಷತ್ ಮಾಜಿ ಸದಸ್ಯ ಎಚ್.ಎಂ.ರಮೇಶ್ ಗೌಡ, ಕುಮುಟಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಿದ್ದು ಸೂರಜ್ ನಾಯಕ ಮತ್ತಿತರರು ಇದ್ದರು.
Brahmin, community, BJP, Govt, hd kumaraswamy,