Monday, May 13, 2024
Homeಬೆಂಗಳೂರುಬ್ರಾಂಡ್ ಬೆಂಗಳೂರಿಗಾಗಿ ಮಹತ್ವದ ಕಾರ್ಯಾಗಾರ

ಬ್ರಾಂಡ್ ಬೆಂಗಳೂರಿಗಾಗಿ ಮಹತ್ವದ ಕಾರ್ಯಾಗಾರ

ಬೆಂಗಳೂರು,ಅ.9- ಉತ್ತಮ ಬೆಂಗಳೂರು, ಅಂತರಾಷ್ಟ್ರೀಯ ಮಟ್ಟದ ಬ್ರಾಂಡ್ ಬೆಂಗಳೂರಿಗಾಗಿ ಮಹಾನಗರಿಯನ್ನು ಪುನಶ್ಚೇತನಗೊಳಿಸುವ ನಿಟ್ಟಿನಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಅಂತಿಮ ಸುತ್ತಿನ ಸಮಾಲೋಚನಾ ಸಭೆ ನಡೆಸಿದರು. ವಿವಿಧ ಶೈಕ್ಷಣಿಕ ಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು, ತಜ್ಞರು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗನ್ನೊಳಗೊಂಡ ಮಹತ್ವದ ಕಾರ್ಯಾಗಾರ ಬೆಂಗಳೂರಿನ ಜ್ಞಾನಜ್ಯೋತಿ ಆಡಿಟೋರಿಯಂನಲ್ಲಿ ನಡೆಯಿತು.

ಇಸ್ರೇಲ್‍ನಲ್ಲಿ 18,000 ಭಾರತೀಯರು ಸುರಕ್ಷಿತ

ಬ್ರಾಂಡ್ ಬೆಂಗಳೂರು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕನಸಿನ ಯೋಜನೆಯಾಗಿದ್ದು, ಅದಕ್ಕಾಗಿ ಈ ಮೊದಲು ವೆಬ್ ಪೋರ್ಟಲ್ ಮೂಲಕ ಸಾರ್ವಜನಿಕರಿಂದ ಸಲಹೆ ಹಾಗೂ ಅಭಿಪ್ರಾಯಗಳನ್ನು ಆಹ್ವಾನಿಸಲಾಗಿತ್ತು. ಸುಮಾರು 70 ಸಾವಿರಕ್ಕೂ ಹೆಚ್ಚು ಅಭಿಪ್ರಾಯಗಳು ಸಂಗ್ರಹವಾಗಿದ್ದವು. ಅವುಗಳನ್ನು ಕ್ರೂಢಿಕರಿಸಿ 8 ವಿಭಾಗಗಳಿಗೆ ವಿಂಗಡಿಸಲಾಗಿದ್ದು, ಪ್ರತಿಯೊಂದು ಕ್ಷೇತ್ರದಲ್ಲೂ ಅಧ್ಯಯನ ನಡೆಸಿ ವರದಿ ನೀಡಲು ವಿವಿಧ ವಿಶ್ವವಿದ್ಯಾಲಯಗಳಿಗೆ ಜವಾಬ್ದಾರಿ ನೀಡಲಾಗಿತ್ತು.

ಖಾಸಗಿ ವಿಶ್ವವಿದ್ಯಾಲಯಗಳು ಹಾಗೂ ಇತರ ತಜ್ಞ ಸಂಸ್ಥೆಗಳು ವರದಿ ಸಲ್ಲಿಸಿವೆ. ಅದನ್ನು ಕ್ರೂಢೀಕರಿಸಿ ಅಂತಿಮ ವರದಿ ಸಲ್ಲಿಸಲು ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯಕ್ಕೆ ಜವಾಬ್ದಾರಿ ವಹಿಸಲಾಗಿದೆ. ಅದರಂತೆ ಹಲವು ಸುತ್ತಿನ ಕಾರ್ಯಾಗಾರಗಳ, ಸಮಾವೇಶಗಳ ಅಭಿಪ್ರಾಯ ಕ್ರೂಢೀಕರಣ ಪ್ರಯತ್ನಗಳು ನಡೆದಿವೆ. ಅಂತಿಮ ಹಂತವಾಗಿ ಇಂದು ಎಲ್ಲರನ್ನೂ ಒಳಗೊಂಡ ಕಾರ್ಯಾಗಾರ ನಡೆದಿದೆ.

ಅದರಲ್ಲಿ ಪ್ರಾಸ್ತವಿಕವಾಗಿ ಮಾತನಾಡಿದ ಬೆಂಗಳೂರು ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ.ಲಿಂಗರಾಜು ಗಾಂಧಿ ಬ್ರಾಂಡ್ ಬೆಂಗಳೂರಿಗೆ ಬೆಂಗಳೂರು ವಿಶ್ವವಿದ್ಯಾಲಯವನ್ನುಜ್ಞಾನದ ಪಾಲುದಾರರನ್ನಾಗಿ ನೇಮಿಸಲಾಗಿದೆ.

ಡಿಸಿಎಂ ಡಿಕೆಶಿ ವಿರುದ್ಧ ಜೆಡಿಎಸ್ ವಾಗ್ದಾಳಿ

ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಹೆಚ್ಚು ಅಭಿಪ್ರಾಯಗಳು ಸರ್ಕಾರಕ್ಕೆ ಸಲ್ಲಿಕೆಯಾಗಿವೆ. ಸಾರ್ವಜನಿಕರ, ತಜ್ಞರ ಅಭಿಪ್ರಾಯಗಳನ್ನು ಆಧರಿಸಿ ಕ್ರಿಯಾ ಯೋಜನೆ ತಯಾರಿಸುವ ಸಂಬಂಧಪಟ್ಟಂತೆ ಈಗಾಗಲೇ ವರದಿ ಸಿದ್ಧಪಡಿಸಲಾಗುತ್ತಿದೆ. ಮೂರ್ನಾಲ್ಕು ದಿನಗಳಲ್ಲಿ ಅಂತಿಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದರು.

RELATED ARTICLES

Latest News