ನವದೆಹಲಿ, ಮಾ. 12- ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ವರದಿಯಾಗಿದೆ. ದೆಹಲಿಯ ಮಹಿಪಾಲ್ದುರ ಪ್ರದೇಶದ ಹೋಟೆಲ್ ಒಂದರಲ್ಲಿ ಬ್ರಿಟಿಷ್ ಮಹಿಳೆ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪರಿಚಿತರಾಗಿದ್ದ ಬ್ರಿಟಿಷ್ ಮಹಿಳೆಯ ಸ್ನೇಹವನ್ನು ದುರುಪಯೋಗಪಡಿಸಿಕೊಂಡು ಇಬ್ಬರು ಅತ್ಯಾಚಾರ ನಡೆಸಿದ್ದಾರೆ. ಅತ್ಯಾಚಾರಿಗಳಿಬ್ಬರನ್ನು ಬಂಧಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬ್ರಿಟಿಷ್ ಪ್ರಜೆಯನ್ನು ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ಆರೋಪಿಗಳಲ್ಲಿ ಒಬ್ಬರು ಸ್ನೇಹ ಬೆಳೆಸಿದ್ದರು. ಆತನನ್ನು ಭೇಟಿಯಾಗಲು ಮಹಿಳೆ ಯುಕೆಯಿಂದ ದೆಹಲಿಗೆ ಪ್ರಯಾಣಿಸಿದ್ದರು.
ಭಾರತಕ್ಕೆ ಬಂದ ಬ್ರಿಟಿಷ್ ಮಹಿಳೆಯನ್ನು ಆತ ಮಹಿಪಾಲ್ದುರ ಪ್ರದೇಶದ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಆತನ ಜತೆಗಿದ್ದ ಸ್ನೇಹಿತನೂ ಬ್ರಿಟಿಷ್ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ್ದಾನೆ. ಈ ಕುರಿತಂತೆ ಮಹಿಳೆ ನೀಡಿರುವ ದೂರಿನ ಆಧಾರದ ಮೇಲೆ ಕಾಮುಕರಿಬ್ಬರನ್ನು ಬಂಧಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.