ದಾಯಾದಿಗಳ ಜಗಳ ಕೊಲೆಯಲ್ಲಿ ಅಂತ್ಯ

ಬೆಂಗಳೂರು, ಸೆ.9- ಕ್ಷುಲ್ಲಕ ಕಾರಣಕ್ಕೆ ಅಣ್ಣ ತಮ್ಮಂದಿರ ನಡುವೆ ಹೊಡೆದಾಟವಾಗಿದ್ದು, ತಮ್ಮ ಕೊಲೆಯಾಗಿರುವ ಘಟನೆ ಸಂಜಯನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ತಮ್ಮ ಸಲೀಂಪಾಷಾ (28)ಕೊಲೆಯಾಗಿದ್ದು, ಅಣ್ಣ ಅಪ್ಸರ್‍ಪಾಷಾ(32)ನನ್ನು ಪೊಲೀಸರು ಬಂಧಿಸಿದ್ದಾರೆ. ಅಣ್ಣ-ತಮ್ಮಂದಿರಿಬ್ಬರು ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು.

ಇಂದು ಬೆಳಗ್ಗೆ 8ಗಂಟೆಗೆ ಅಣ್ಣ-ತಮ್ಮಂದಿರ ನಡುವೆ ಜಗಳವಾಗಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಅಪ್ಸರ್‍ಪಾಷಾ ದೊಣ್ಣೆಯಿಂದ ಹಲ್ಲೆ ನಡೆಸಿದ್ದು, ಸಲೀಂಪಾಷಾನ ಮೂಗು, ಬಾಯಿಯಲ್ಲಿ ರಕ್ತ ಬಂದಿದೆ.

ಕೂಡಲೇ ಗಾಯಾಳುವನ್ನು ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.  ಸಂಜಯನಗರ ಪೊಲೀಸರು ಕೇಸು ದಾಖಲಿಸಿ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.