2.40 ಕೋಟಿ ರೂ.ಮೌಲ್ಯದ ಬ್ರೌನ್ ಶುಗರ್ ವಶ, ಮಹಿಳೆಯರು ಸೇರಿ ಮೂವರ ಬಂಧನ

Spread the love

ಬಾಲ್ಸೋರ್ ,ಅ.19-ಒಡಿಸ್ಸಾ ಪೊಲೀಸರು ಮಾದಕ ದ್ರವ್ಯ ಕಳ್ಳ ಸಾಗಾಣಿಕೆ ಜಾಲವನ್ನು ಬೇಧಿಸಿ 2.40 ಕೋಟಿ ರೂ.ಮೌಲ್ಯದ ಬ್ರೌನ್ ಶುಗರ್ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಡ್ರಗ್ಸ್ ಮಾರಾಟ ಪ್ರಕರಣಕ್ಕೆ ಸಂಬಂಸಿದಂತೆ ಇಬ್ಬರು ಮಹಿಳೆಯರು ಹಾಗೂ ಓರ್ವ ಆರೋಪಿಯನ್ನು ಬಂಧಿಸಲಾಗಿದೆ.

ಬಂದ ಖಚಿತ ಮಾಹಿತಿ ಮೇರೆಗೆ ಪೊಲೀಸರು ಹಾಗೂ ಅಬಕಾರಿ ದಳದ ಅಧಿಕಾರಿಗಳು ಹೋಟೆಲ್‍ವೊಂದರ ಮೇಲೆ ದಾಳಿ ನಡೆಸಿ ಭಾರಿ ಪ್ರಮಾಣದ ಮಾದಕ ದ್ರವ್ಯ ವಶಪಡಿಸಿಕೊಂಡಿದ್ದಾರೆ.ಜಲೇಶ್ವರ್ ರೈಲು ನಿಲ್ದಾಣಕ್ಕೆ ಹೊಂದಿಕೊಂಡಂತೆ ಇರುವ ಹೋಟೆಲ್ ಮೇಲೆ ದಾಳಿ ನಡೆಸಿದಾಗ ಪ್ಯಾಕೆಟ್‍ಗಳಲ್ಲಿ ಸಂಗ್ರಹಿಸಿಡಲಾಗಿದ್ದ 2.40 ಕೋಟಿ ರೂ.ಮೌಲ್ಯದ ಬ್ರೌನ್ ಶುಗರ್ ವಶಪಡಿಸಿಕೊಳ್ಳಲಾಗಿದೆ.

ಮೂವರು ಆರೋಪಿಗಳನ್ನು ಬಂಧಿಸಿ ಮಾದಕ ದ್ರವ್ಯ ಕಳ್ಳ ಸಾಗಾಣಿಕೆಯ ಮೂಲ ಪತ್ತೆ ಹಚ್ಚಲು ಕ್ರಮ ಕೈಗೊಳ್ಳಲಾಗಿದೆ.