Friday, May 24, 2024
Homeರಾಷ್ಟ್ರೀಯರಸ್ತೆ ಅಪಘಾತದಲ್ಲಿ ಬಿಆರ್‌ಎಸ್ ಶಾಸಕಿ ಲಾಸ್ಯ ನಂದಿತಾ ಸಾವು

ರಸ್ತೆ ಅಪಘಾತದಲ್ಲಿ ಬಿಆರ್‌ಎಸ್ ಶಾಸಕಿ ಲಾಸ್ಯ ನಂದಿತಾ ಸಾವು

ಹೈದರಾಬಾದ್, ಫೆ 23 : ಇಲ್ಲಿಗೆ ಸಮೀಪದ ಪತಂಚೇರು ಬಳಿ ನಡೆದ ರಸ್ತೆ ಅಪಘಾತದಲ್ಲಿ ಬಿಆರ್‍ಎಸ್ ಪಕ್ಷದ ಶಾಸಕಿ ಜಿ ಲಾಸ್ಯ ನಂದಿತಾ(36)ಸಾವನ್ನಪ್ಪಿದ್ದಾರೆ. ಇಂದು ಮುಂಜಾನೆ 5.30ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಆಕೆ ಪ್ರಯಾಣಿಸುತ್ತಿದ್ದ ಕಾರು ಹೊರ ವರ್ತುಲ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಘಟನೆಯಲ್ಲಿ ಕಾರಿನ ಚಾಲಕನಿಗೆ ಗಾಯಗಳಾಗಿವೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಪರಿಸ್ಥಿತಿ ಗಂಬೀರವಾಗಿದೆ. ಸಿಕಂದರಾಬಾದ್ ಕಂಟೋನ್ಮೆಂಟ್ (ಎಸ್‍ಸಿ) ಕ್ಷೇತ್ರದಿಂದ ಆಯ್ಕೆಯಾಗಿದ್ದ ಅವರು ಕ್ರಿಯಾಶೀಲ ಶಾಸಕಿಯಾಗಿದ್ದರು. ಆಕಲಿಕ ನಿಧನಕ್ಕೆ ಸಿಎಂ,ಸಚಿವರು,ವಿಪಕ್ಷ ನಾಯಕರು ಸೇರಿ ಆನೇಕ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಭಾರತವು 10 ಟ್ರಿಲಿಯನ್‍ಡಾಲರ್ ಆರ್ಥಿಕತೆಯ ಹಾದಿಯಲ್ಲಿದೆ-ಡಬ್ಲೂಇಎಫ್

ಅಪಘಾತ ನಡೆದ ಸುದ್ದಿ ತಿಳಿದು ಸ್ಥಳಕ್ಕೆ ವೈದ್ಯರು ಬರುವಾಗಲೇ ಅವರು ಸಾವನ್ನಪ್ಪಿದ್ದಾರೆ. ಪೊಲೀಸರು ಮೃತ ಶವವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.ಘಟನೆ ಕುರಿತು ತನಿಖೆ ಆರಂಭಿಸಿದ್ದಾರೆ. ಕಾರು ವೇಗವಾಗಿ ಚಲಿಸುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕಾರುಚಾಲಕ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕಬ್ಬಿಣದ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದಾನೆ ,ಇದರ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.

RELATED ARTICLES

Latest News