ಯಾವುದೇ ತಪ್ಪು ಮಾಡದ ನನಗೆ ನ್ಯಾಯ ಸಿಗುವ ವಿಶ್ವಾಸವಿದೆ : ಬಿಎಸ್‌ವೈ

Social Share

ಬೆಂಗಳೂರು,ಸೆ.19-ನನಗೆ ದೇಶದ ಕಾನೂನು ವ್ಯವಸ್ಥೆಯಲ್ಲಿ ನಂಬಿಕೆಯಿದ್ದು, ಯಾವುದೇ ತಪ್ಪು ಮಾಡದ ನನಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಹಾಗೂ ತಮ್ಮ ಕುಟುಂಬದವರ ಲೋಕಾಯುಕ್ತದಲ್ಲಿ ಎಫ್‍ಐಆರ್ ದಾಖಲಾಗಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನ್ಯಾಯಾಂಗದಲ್ಲಿ ತಮಗೆ ಅಪಾರ ನಂಬಿಕೆಯಿದೆ. ಖಂಡಿತವಾಗಿ ನನಗೆ ನ್ಯಾಯ ಸಿಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದೇಶದ ಕಾನೂನು ಎಲ್ಲರಿಗೂ ಒಂದೇ. ಇದರಲ್ಲಿ ಮೇಲು, ಕೀಳು ಎಂಬ ಬೇಧಭಾವ ಇಲ್ಲ. ನ್ಯಾಯಾಂಗದ ವ್ಯವಸ್ಥೆಯನ್ನು ನಾನು ಯಾವಾಗಲೂ ಗೌರವಿಸುತ್ತೇನೆ. ಈ ಪ್ರಕರಣದಲ್ಲಿ ನಾನು ಯಾವುದೇ ತಪ್ಪು ಮಾಡಿಲ್ಲ. ನ್ಯಾಯಾಲಯದ ತೀರ್ಪು ಏನು ಬರುತ್ತದೆಯೋ ನೋಡೋಣ ಎಂದರು.

ಇದನ್ನೂ ಓದಿ : ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (19-09-2022)

ಇಂದು ಸುಪ್ರೀಂಕೋರ್ಟ್‍ನಲ್ಲಿ ವಿಚಾರಣೆಗೆ ಬರುತ್ತದೆ. ನ್ಯಾಯಾೀಧಿಶರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೋ ನೋಡೋಣ. ಅಲ್ಲಿಯ ತನಕ ಇದರ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ಕೊಡುವುದಿಲ್ಲ ಎಂದು ಹೇಳಿದರು.

ಬಿಡಿಎ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಸೇರಿದಂತೆ ಮತ್ತಿತರರ ವಿರುದ್ಧ ಲೋಕಾಯುಕ್ತದಲ್ಲಿ ಎಫ್‍ಐಆರ್ ದಾಖಲಾಗಿದೆ.

Articles You Might Like

Share This Article