ಬಿಎಸ್‍ವೈಗೆ ಇದು ಕೊನೆ ಅಧಿವೇಶನ

Social Share

ಬೆಂಗಳೂರು,ಫೆ.11- ನಾಲ್ಕು ದಶಕದ ಚುನಾವಣಾ ರಾಜಕೀಯದಲ್ಲಿ ಹೋರಾಟದ ಮೂಲಕವೇ ಮನೆ ಮಾತಾಗಿರುವ ಬಿಎಸ್‍ವೈ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದು, ಪ್ರಸಕ್ತ ಅಧಿವೇಶನ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕೊನೆಯ ಅಧಿವೇಶನವಾಗಲಿದೆ.

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಅತ್ಯುತ್ತಮ ಶಾಸಕ ಪ್ರಶಸ್ತಿ ಪಡೆದಿದ್ದ ಯಡಿಯರೂಪ್ಪ, ಸದನದಲ್ಲಿ ಗೌರವಪೂರ್ವಕ ವಿದಾಯವನ್ನು ಎದುರು ನೋಡುತ್ತಿದ್ದಾರೆ.

ರಾಜ್ಯ ರಾಜಕೀಯ ಕಂಡ ಅಪರೂಪದ ರಾಜಕಾರಣಿಗಳಲ್ಲಿ ಒಬ್ಬರಾಗಿರುವ ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅವರಿಗಿದು ಕಡೆಯ ಅಧಿವೇಶನ. 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಈಗಾಗಲೇ ಅವರು ಘೋಷಣೆ ಮಾಡಿರುವುದರಿಂದ ನಾಳೆಯಿಂದ ಆರಂಭಗೊಳ್ಳಲಿರುವ ಅಧಿವೇಶನವೇ ಯಡಿಯೂರಪ್ಪ ಅವರಿಗೆ ಕಡೆಯ ಅಧಿವೇಶನವಾಗಲಿದೆ.

ಗುಜರಾತ್‍ನಲ್ಲಿ ಇಂದು ಮುಂಜಾನೆ 3.8 ತೀವ್ರತೆಯ ಭೂಕಂಪ

ಹಾಗಾಗಿ ಯಡಿಯೂರಪ್ಪ ಅವರಿಗೆ ಸದನದಲ್ಲಿ ಅಭಿನಂದನಾ ನುಡಿಗಳನ್ನಾಡಿ ಗೌರವಪೂರ್ವಕ ವಿದಾಯ ಹೇಳುವ ಸಾಧ್ಯತೆ ಹೆಚ್ಚಾಗಿದೆ. ಈ ಬಗ್ಗೆ ಈಗಾಗಲೇ ಬಿಜೆಪಿ ನಾಯಕರು ಒಲವು ವ್ಯಕ್ತಪಡಿಸಿದ್ದು, ಬಜೆಟ್ ಮೇಲಿನ ಚರ್ಚೆ ವೇಳೆ ಯಡಿಯೂರಪ್ಪ ಅವರಿಗೆ ವಿದಾಯದ ನುಡಿಗಳನ್ನಾಡಿ ಗೌರವ ಸಲ್ಲಿಸಲಾಗುತ್ತದೆ.

1983ರಲ್ಲಿ ಮೊದಲ ಬಾರಿ ಶಾಸನ ಸಭೆ ಪ್ರವೇಶಿಸಿದ್ದ ಯಡಿಯೂರಪ್ಪ 1999ರ ಚುನಾವಣೆ ಹೊರತುಪಡಿಸಿ 2018ರವರೆಗೆ ನಡೆದ ಎಲ್ಲ ಚುನಾವಣೆಗಳಲ್ಲಿ ಶಿಕಾರಿಪುರ ಕ್ಷೇತ್ರದಿಂದ ಆಯ್ಕೆಯಾಗುತ್ತಲೇ ಬಂದಿದ್ದಾರೆ. 1983, 1985, 1989, 1994 ರವರೆಗೆ ಸತತವಾಗಿ ನಾಲ್ಕು ಬಾರಿ ಗೆದ್ದು ಜನಪ್ರಿಯತೆ ಗಳಿಸಿದ್ದಾರೆ. ಮೊದಲ ಬಾರಿ ಬಿಜೆಪಿ ಪ್ರತಿಪಕ್ಷದ ಸಾಲಿಗೆ ಬರುವಂತೆ ಮಾಡುವಲ್ಲಿ ಅವರು ಸಫಲರಾಗಿದ್ದರು. ಅಲ್ಲದೇ, ಪ್ರತಿಪಕ್ಷದ ನಾಯಕರಾಗಿಯೂ ಸಾಕಷ್ಟು ಸದ್ದು ಮಾಡಿ, ವರ್ಚಸ್ಸು ದಿಲ್ಲಿ ಮುಟ್ಟುವಂತೆ ಮಾಡಿದ್ದರು.

ನಂತರ 2004ರಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವಂತೆ ಮಾಡಲು ವಿಫಲರಾದರೂ ಕೂಡ ಅತಿ ದೊಡ್ಡ ಪಕ್ಷವನ್ನಾಗಿ ಗೆಲ್ಲಿಸಿಕೊಂಡು ಮತ್ತೊಮ್ಮೆ ಪ್ರತಿಪಕ್ಷದ ನಾಯಕರಾದರು. ಬದಲಾದ ರಾಜಕೀಯ ವಿದ್ಯಮಾನದಲ್ಲಿ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಪತನಗೊಂಡು ಜೆಡಿಎಸ್-ಬಿಜೆಪಿ ಮೈತ್ರಿ ರಚನೆಯಾಯಿತು. ಯಡಿಯೂರಪ್ಪ ಮೊದಲ ಬಾರಿ ಸರ್ಕಾರದ ಭಾಗವಾಗಿ ಉಪಮುಖ್ಯಮಂತ್ರಿಯಾದರು.

2008ರಲ್ಲಿ ಒಪ್ಪಂದದಂತೆ ಯಡಿಯೂರಪ್ಪ ಮೊದಲ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. 2008ರ ಮೇ ತಿಂಗಳಿನಲ್ಲಿ ನಡೆದ ಚುನಾವಣೆಯಲ್ಲಿ ಯಡಿಯೂರಪ್ಪರನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸಲಾಯಿತು. ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲದೊಂದಿಗೆ ಸಮಾಜವಾದಿ ಪಕ್ಷದಿಂದ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಕಣದಲ್ಲಿದ್ದರು. ಯಡಿಯೂರಪ್ಪನವರು 45000ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದರು.

ಕೆಜಿಪಿ ಸ್ಥಾಪಿಸಿದ ಬಿಎಸ್‍ವೈ: 2011ರ ಏಪ್ರಿಲ್‍ನಲ್ಲಿ ಕರ್ನಾಟಕ ಜನತಾ ಪಕ್ಷ ಎಂಬ ನೂತನ ಪಕ್ಷ ಸ್ಥಾಪಿಸಿದರು. 2013ರ ಮೇನಲ್ಲಿ ಶಿಕಾರಿಪುರ ಕ್ಷೇತ್ರದಲ್ಲಿ ಸ್ರ್ಪಧಿಸಿ ವಿಧಾನಸಭೆಗೆ ಆಯ್ಕೆಯಾದರು. 2014ರ ಜನವರಿ 2ರಲ್ಲಿ ಕೆಜೆಪಿಯನ್ನು ಬಿಜೆಪಿಗೆ ವಿಲೀನಗೊಳಿಸಿದರು.

500 ಹೊಸ ವಿಮಾನ ಖರೀದಿಸಲು ಮುಂದಾದ ಏರ್ ಇಂಡಿಯಾ

ನಂತರ 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ರ್ಪಧಿಸಿ 3,63,305 ಅಂತರದಿಂದ ಜಯಗಳಿಸಿದರು. 2018ರ ಚುನಾವಣೆಗೆ ಸ್ರ್ಪಸಲು ಲೋಕಸಭಾ ಸ್ಥಾನಕ್ಕೆ ರಾಜೀನಾಮೆ ನೀಡಿದರು. 2018ರಲ್ಲಿ 105 ಸ್ಥಾನಗಳಿಸಿ ಅತಿದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದರೂ ಬಹುಮತಕ್ಕೆ ಬೇಕಾದ ಸ್ಥಾನ ಇರಲಿಲ್ಲ. ಆದರೂ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.

ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಅಪಾರ ರಾಜಕೀಯ ಅನುಭವ ಇರುವ ಯಡಿಯೂರಪ್ಪ ಅವರ ಸೇವೆ ಪರಿಗಣಿಸಿ ಬಿಜೆಪಿ ಹೈಕಮಾಂಡ್ ಯಡಿಯೂರಪ್ಪರನ್ನು ಕೇಂದ್ರ ಸಂಸದೀಯ ಮಂಡಳಿ ಮತ್ತು ಚುನಾವಣಾ ಸಮಿತಿ ಸದಸ್ಯರನ್ನಾಗಿ ನೇಮಕ ಮಾಡಿದೆ.

ಇದರ ನಡುವೆ 2021ರ ಸೆಪ್ಟಂಬರ್‍ನಲ್ಲಿ ಯಡಿಯೂರಪ್ಪಗೆ ಉತ್ತಮ ಶಾಸಕ ಪ್ರಶಸ್ತಿಯನ್ನು ಸದನದಲ್ಲಿ ಪ್ರದಾನಿಸಲಾಯಿತು. ಇದೀಗ ಯಡಿಯೂರಪ್ಪ ಶಾಸಕರಾಗಿ ತಮ್ಮ ಕೊನೆಯ ಅಧಿವೇಶನಕ್ಕೆ ನಾಳೆ ಆಗಮಿಸಲಿದ್ದಾರೆ. ಸದನದಲ್ಲಿ ಹಿರಿಯ ನಾಯಕರಿಗೆ ಅಭಿನಂದನೆ ಸಲ್ಲಿಕೆಯಾಗಲಿದೆ.

bs yediyurappa, last, session, politics, retirement,

Articles You Might Like

Share This Article