Sunday, November 3, 2024
Homeರಾಜ್ಯವಿಜಯೇಂದ್ರ ನೇಮಕ ನಿರೀಕ್ಷೆ ಇರಲಿಲ್ಲ : ಯಡಿಯೂರಪ್ಪ

ವಿಜಯೇಂದ್ರ ನೇಮಕ ನಿರೀಕ್ಷೆ ಇರಲಿಲ್ಲ : ಯಡಿಯೂರಪ್ಪ

ಬೆಂಗಳೂರು, ನ.11- ಬಹಳ ದಿನಗಳ ನಂತರ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯ ಬಿಜೆಪಿಗೆ ಸಂಬಂಧಪಟ್ಟಂತೆ ಬಹಳ ಒಳ್ಳೆಯ ತೀರ್ಮಾನ ತೆಗೆದುಕೊಂಡಿದ್ದಾರೆ. ಸೂಕ್ತ ಸಮಯದಲ್ಲಿ ರಾಜ್ಯಾಧ್ಯಕ್ಷರ ನೇಮಕ ಮಾಡಿದ್ದಾರೆ. ವಿಜಯೇಂದ್ರ ನೇಮಕ ನಿರೀಕ್ಷೆಯಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಿಜಯೇಂದ್ರ ನೇಮಕದ ಬಗ್ಗೆ ನನಗೆ ಗೊತ್ತೇ ಇರಲಿಲ್ಲ. ನೀವು ಯಾರನ್ನು ಬೇಕಾದರೂ ಕೇಳಿ ನೋಡಿ, ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಮಾಡಿ ಎಂದು ನಾನು ಒಂದು ದಿನವೂ ದೆಹಲಿಗೆ ಹೋಗಿ ಕೇಳಿರಲಿಲ್ಲ, ಹೈಕಮಾಂಡ್ ಮುಂದೆ ಮನವಿ ಮಾಡಿರಲಿಲ್ಲ. ಹಲವು ವಿಚಾರಗಳನ್ನು ಅಳೆದು ತೂಗಿ ಹೈಕಮಾಂಡ್ ಸರಿಯಾದ ನಿರ್ಧಾರ ತೆಗೆದುಕೊಂಡಿದೆ ಎಂದು ಹೇಳಿದ್ದಾರೆ.’

ವೀರಶೈವ ಲಿಂಗಾಯತ ಸಮಾಜ ನಮ್ಮ ಜೊತೆಗಿದೆ, ವಿಜಯೇಂದ್ರ ಅಧ್ಯಕ್ಷರಾದ ಮೇಲೆ ಸಮಾಜದ ಬೆಂಬಲ ಇನ್ನೂ ಹೆಚ್ಚು ಸಿಗಲಿದೆ. ಮುಂದಿನ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಿಂದ ಅತಿಹೆಚ್ಚಿನ ಸ್ಥಾನಗಳನ್ನು ಗೆಲ್ಲಿಸಿ ಅವರಿಗೆ ಒಳ್ಳೆಯ ಉಡುಗೊರೆ ಕೊಡಬೇಕೆಂಬುದು ನಮ್ಮ ಗುರಿಯಾಗಿದೆ. ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆ ನಿಟ್ಟಿನಲ್ಲಿ ಇನ್ನಷ್ಟು ಕೆಲಸ ಮಾಡುವುದಾಗಿ ಯಡಿಯೂರಪ್ಪ ಹೇಳಿದರು.

ಅತ್ತೂ ಕರೆದು ಕೊನೆಗೂ ಅಧ್ಯಕ್ಷರ ನೇಮಕ ಮಾಡಿದ್ದಾರೆ : ಶೆಟ್ಟರ್ ಲೇವಡಿ

ಬಿ.ವೈ.ವಿಜಯೇಂದ್ರಗೆ ಬಿಜೆಪಿ ರಾಜಾ್ಯಧ್ಯಕ್ಷ ಸ್ಥಾನ ಸಿಗುತ್ತೆ ಅಂತ ನಾವ್ಯಾರು ನಿರೀಕ್ಷೆ ಇಟ್ಟಿರಲಿಲ್ಲ. ದೆಹಲಿಗೆ ಹೋಗಿ ನನ್ನ ಮಗನಿಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿ ಅಂತಾನೂ ಕೇಳಿರಲಿಲ್ಲ. ದೊಡ್ಡ ಸ್ಥಾನ ಸಿಕ್ಕಿದಾಗ ಸವಾಲುಗಳು ಸಹಜ, ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ಗುರಿ ಮುಟ್ಟಲು ಕಷ್ಟವಿಲ್ಲ. ಆದರೆ ಹಾದಿ ಕಠಿಣ ಇದೆ. ನಾನೂ ಕೂಡ ರಾಜ್ಯ ಪ್ರವಾಸ ಮಾಡಿ ಹೆಚ್ಚಿನ ಸ್ಥಾನ ಗೆಲ್ಲಲು ಶ್ರಮಿಸುತ್ತೇನೆ ಎಂದರು.

ಅಮಿತ್ ಶಾ, ನಡ್ಡಾ ಅವರು ಸೂಕ್ತ ಸಮಯಕ್ಕೆ ಒಳ್ಳೆಯ ನಿರ್ಧಾರ ಮಾಡಿದ್ದಾರೆ. ರಾಜ್ಯ ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿದ್ದಾರೆ. ರಾಜಾ್ಯದ್ಯಂತ ಪ್ರವಾಸ ಮಾಡಿ ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವುದು ನಮ್ಮ ಗುರಿ. ಈ ಬಾರಿ ರಾಜ್ಯದಲ್ಲಿ 25ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕು. ಈ ನಿಟ್ಟಿನಲ್ಲಿ ನಾನು ಕೂಡ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ ಎಂದರು.ಮೋದಿ ಅವರಂತಹ ಮಹಾನ್ ವ್ಯಕ್ತಿ ದೇಶದ ಪ್ರಧಾನಿಯಾಗಿದ್ದಾರೆ.

ದೆಹಲಿಯಲ್ಲಿ ಕುಳಿತು ವಿಜಯೇಂದ್ರನನ್ನು ಅಧ್ಯಕ್ಷನನ್ನಾಗಿ ಮಾಡಿ ಅಂತ ಯಾರನ್ನೂ ಕೇಳಿಲ್ಲ. ಬೇಕಾದರೆ ನೀವುಗಳು ವಿಚಾರಿಸಿ. ನಾವು ಪ್ರವಾಸ ಮಾಡಿದ ಮೇಲೆ ಜನರ ರೆಸ್ಪಾನ್ಸ್ ಹೇಗಿದೆ ಅಂತ ನೋಡಿದ ಮೇಲೆ ನಮ್ಮ ಬಲ ಗೊತ್ತಾಗಲಿದೆ. 25 ಕ್ಷೇತ್ರ ಗೆಲ್ಲೋದು ಸುಲಭವಲ್ಲ. ರಾಜಾ್ಯದ್ಯಂತ ಓಡಾಡಬೇಕು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕು. ಎಲ್ಲರೂ ಒಟ್ಟಾಗಿ ಹೋದಲ್ಲಿ ಯಶಸ್ಸು ಖಚಿತ ಎಂದು ಬಿಎಸ್ವೈ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಂತರ ಮಾತನಾಡಿದ ಮಾಜಿ ಸಚಿವ ಮುನಿರತ್ನ, ಮಾಜಿ ಮುಖ್ಯಮಂತ್ರಿ ಬಿ ಎಸ್.ಯಡಿಯೂರಪ್ಪ ಅವರು ಈಗ ಅಧಿಕಾರದಲ್ಲಿ ಇಲ್ಲ. ಹೀಗಾಗಿ ಇದು ವಂಶವಾದ ಆಗೋದಿಲ್ಲ ಎಂದು ವಂಶವಾದ ರಾಜಕೀಯಕ್ಕೆ ಹೊಸ ವ್ಯಾಖ್ಯಾನ ಮಾಡಿದ್ದಾರೆ. ಬಿ.ವೈ.ವಿಜಯೇಂದ್ರ ಅವರನ್ನು ಬಿಜೆಪಿ ರಾಜಾ್ಯಧ್ಯಕ್ಷನನ್ನಾಗಿ ಆಯ್ಕೆ ಮಾಡುವ ಮೂಲಕ ಯುವಕರಿಗೆ ಅವಕಾಶ ನೀಡಿದಂತಾಗಿದೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು, ಆಗ ಯಶಸ್ಸು ಸಿಗಲಿದೆ. ಸದ್ಯ ನಮ್ಮಲ್ಲಿ ಯಾವುದೇ ಅಸಮಾಧಾನ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

RELATED ARTICLES

Latest News