Thursday, December 7, 2023
Homeರಾಷ್ಟ್ರೀಯತೆಲಂಗಾಣ ಚುನಾವಣೆ : ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಬಿಎಸ್ವೈ ಹೆಸರು

ತೆಲಂಗಾಣ ಚುನಾವಣೆ : ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಬಿಎಸ್ವೈ ಹೆಸರು

ಬೆಂಗಳೂರು,ನ.7- ನವೆಂಬರ್ 30ರಂದು ನಡೆಯಲಿರುವ ತೆಲಂಗಾಣ ಚುನಾವಣೆಯ ಪ್ರಚಾರದ ಸ್ಟಾರ್ ಕ್ಯಾಂಪೇನರ್ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಥಾನ ಪಡೆದುಕೊಂಡಿದ್ದಾರೆ. ಚುನಾವಣಾ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಯಾಗಿದ್ದು, ಒಟ್ಟು 40 ಸ್ಟಾರ್ ಪ್ರಚಾರಕರ ಪೈಕಿ ಕರ್ನಾಟಕದಿಂದ ಯಡಿಯೂರಪ್ಪ ಅವರು ಕೂಡ ಇದ್ದಾರೆ.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾಗಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್‍ವೈಗೆ ಪ್ರಮುಖ ಪಾತ್ರ ನೀಡಿರಲಿಲ್ಲ. ಯಡಿಯೂರಪ್ಪ ಅವರನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸಲಾಗಿತ್ತು ಎಂಬ ಅಭಿಪ್ರಾಯವೂ ಕೇಳಿಬಂದಿತ್ತು.

ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲಿನ ಬೆನ್ನಲ್ಲೇ ಯಡಿಯೂರಪ್ಪನವರನ್ನು ಕಡೆಗಣಿಸಿರುವುದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಆದರೆ ಇದೀಗ ತೆಲಂಗಾಣ ಚುನಾವಣೆಯ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಯಡಿಯೂರಪ್ಪ ಅವರಿಗೆ ಸ್ಥಾನ ಸಿಕ್ಕಿರುವುದು ಸಹಜವಾಗಿ ಕುತೂಹಲ ಕೆರಳಿಸಿದೆ.

80 ವರ್ಷ ಸಮೀಪಿಸುತ್ತಿರುವ ಯಡಿಯೂರಪ್ಪ ಸಕ್ರಿಯ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ, ಆದರೆ ಅವರ ವರ್ಚಸ್ಸು ಕುಗ್ಗಿಲ್ಲ, ಹೀಗಾಗಿ ಮತದಾರರನ್ನು ಓಲೈಸಲು ಮುಂಬರುವ ದಿನಗಳಲ್ಲಿ ತೆಲಂಗಾಣಕ್ಕೆ ಪ್ರಯಾಣಿಸುವ ನಿರೀಕ್ಷೆಯಿದೆ.

ಟೀಮ್‍ ಇಂಡಿಯಾ ಸೆಮೀಸ್‍ನಲ್ಲಿ ಸೋಲುತ್ತದೆ : ಮಿಸ್ಬಾ ಉಲ್ ಹಕ್

ಕರ್ನಾಟಕದಿಂದ ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ ಮತ್ತು ಭಗವಂತ ಖೂಬಾ ಸೇರಿದಂತೆ ನಾಲ್ವರು ಕೇಂದ್ರ ಸಚಿವರಿದ್ದರೂ, ಬಿಜೆಪಿ ಪಕ್ಷದ ಹೈಕಮಾಂಡ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಯಡಿಯೂರಪ್ಪ ಅವರ ಹೆಸರನ್ನು ಆಯ್ಕೆ ಮಾಡಿದೆ.

80 ವರ್ಷದ ಯಡಿಯೂರಪ್ಪ ಅವರು ಅದೇ ಉತ್ಸಾಹದಿಂದ ಕರ್ನಾಟಕದಾದ್ಯಂತ ಪ್ರವಾಸ ಮಾಡುತ್ತಿದ್ದಾರೆ ಮತ್ತು ಅವರು ತೆಲಗಾಣದಲ್ಲಿಯೂ ಅದೇ ರೀತಿ ಮಾಡಲು ಹೊರಟಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಯಡಿಯೂರಪ್ಪ ಕೇವಲ ಕರ್ನಾಟಕಕ್ಕೆ ಮಾತ್ರ ನಾಯಕರಲ್ಲ, ದಕ್ಷಿಣ ಭಾರತದ ರಾಜ್ಯಗಳಲ್ಲಿ ಪಕ್ಷದಿಂದ ಆಯ್ಕೆಯಾದ ಮೊದಲ ಮುಖ್ಯಮಂತ್ರಿ ಯಡಿಯೂರಪ್ಪ ಎಂದು ಪಕ್ಷವು ಭಾವಿಸಿದೆ.

ತೆಲಂಗಾಣ ಕರ್ನಾಟಕದೊಂದಿಗೆ ಗಡಿ ಹಂಚಿಕೊಂಡಿರುವುದರಿಂದ ಅಲ್ಲಿಯೂ ಯಡಿಯೂರಪ್ಪ ಪ್ರಭಾವ ಹೆಚ್ಚಿದೆ. ಅಲ್ಲದೆ ಹೈದರಾಬಾದ್‍ನಲ್ಲಿ ಯಡಿಯೂರಪ್ಪ ಅವರು ಪಕ್ಷಕ್ಕೆ ಮತಗಳನ್ನು ಪಡೆಯಲು ಸಹಾಯ ಮಾಡುವ ಶಕ್ತಿ ಹೊಂದಿದ್ದಾರೆ.

ಅಶ್ವತ್ಥನಾರಾಯಣ ಪ್ರಕಾರ, ತೆಲಂಗಾಣದಲ್ಲಿ ಬಿಎಸ್‍ವೈ ಅವರ ಉಪಸ್ಥಿತಿಯು ಪಕ್ಷಕ್ಕೆ ಭಾರೀ ಲಾಭ ತಂದುಕೊಡುತ್ತದೆ. ಹೀಗಾಗಿ ಪಕ್ಷದ ಹೈಕಮಾಂಡ್ ಅವರನ್ನು ಆಯ್ಕೆ ಮಾಡಿದೆ ಎಂದಿದ್ದಾರೆ. ಯಡಿಯೂರಪ್ಪ ಅವರು ಎಲೆಕ್ಟ್ರೋಲ್ ರಾಜಕೀಯದಿಂದ ಹೊರಗುಳಿದಿದ್ದರೂ ಸಾಕಷ್ಟು ಜನಪ್ರಿಯ ನಾಯಕರಾಗಿದ್ದಾರೆ.

ತೆಲಂಗಾಣದಲ್ಲಿ ಹೆಚ್ಚಿನ ಸಂಖ್ಯೆಯ ವೀರಶೈವರು ಇದ್ದಾರೆ, ಯಡಿಯೂರಪ್ಪ ಅವರ ಪ್ರಚಾರದಿಂದ ಈ ಮತದಾರರನ್ನು ಸೆಳೆಯುವ ನಿರೀಕ್ಷೆಯಿದೆ. ತೆಲಂಗಾಣದ ಒಟ್ಟು 119 ಸ್ಥಾನಗಳಿಗೆ ಇದೇ 30ರಂದು ಒಂದೇ ಹಂತದ ಮತದಾನ ನಡೆಯಲಿದೆ. ಡಿಸೆಂಬರ್ 3ರಂದು ಫಲಿತಾಂಶ ಹೊರಬೀಳಲಿದೆ.

RELATED ARTICLES

Latest News