ಚಿತ್ರದುರ್ಗ, ಅ.18- ಕಾಲೇಜು ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ಬಿಎಸ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿತ್ರದುರ್ಗದ ಚಿತ್ರಾ ಡಾನ್‌ಬೋಸ್ಕೊ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ ಪ್ರೇಮಾ(20) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಚಿತ್ರದುರ್ಗದ ಮೆದೆಹಳ್ಳಿ ನಿವಾಸಿಯಾದ ಈಕೆ ಉತ್ತಮ ವ್ಯಾಸಂಗ ಮಾಡುತ್ತಿದ್ದಳು.
ಈ ನಡುವೆ ಆಕೆಗೆ ಏನಾಯಿತೋ ಏನು ಗೊತ್ತಿಲ್ಲ. ಕಾಲೇಜು ಕಟ್ಟಡದ ಮೂರನೇ ಮಹಡಿಗೆ ಹೋಗಿ ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆಗೆ ಕಾರಣ ಸದ್ಯಕ್ಕೆ ತಿಳಿದು ಬಂದಿಲ್ಲ. ಸುದ್ದಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.