ನವದೆಹಲಿ,ಮಾ.10- ಗಡಿ ನುಸುಳಿ ದೇಶ ಪ್ರವೇಶಿಸಲು ಯತ್ನಿಸುತ್ತಿದ್ದ ಪಾಕ್ ನುಸುಳುಕೋರನೊಬ್ಬನನ್ನು ಗಡಿ ಭದ್ರತಾ ಪಡೆಗಳು ಬಂಧಿಸುವಲ್ಲಿ ಯಶಸ್ವಿಯಾಗಿವೆ. ಪಂಜಾಬ್‍ನ ಭಾರತ-ಪಾಕಿಸ್ತಾನ ಅಂತರಾಷ್ಟ್ರೀಯ ಗಡಿ ಸಮೀಪ ಅಕ್ರಮವಾಗಿ ಗಡಿ ನುಸುಳಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಗಡಿ ಭದ್ರತಾ ಪಡೆ (ಬಿಎಸ್‍ಎಫ್) ಇಂದು ಬಂಧಿಸಿದೆ ಎಂದು ಗಡಿ ಪಡೆ ವಕ್ತಾರರು ತಿಳಿಸಿದ್ದಾರೆ.
ಪಂಜಾಬ್‍ನ ಫಿರೋಜ್‍ಪುರ್ ಸೆಕ್ಟರ್‍ನಲ್ಲಿರುವ ಗಡಿ ಪೋಸ್ಟ್ ತಿರಾತ್ ಪ್ರದೇಶದಲ್ಲಿ ಮಧ್ಯರಾತ್ರಿ ಗಡಿ ನುಸುಳಲು ಯತ್ನಿಸುತ್ತಿದ್ದ ಆತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ವ್ಯಕ್ತಿ ತಾನು ಪಾಕಿಸ್ತಾನದ ಖೈಬರ್ ಜಿಲ್ಲೆಯ ನಿವಾಸಿ ಎಂದು ಹೇಳಿಕೊಂಡಿದ್ದಾನೆ.
ಚಿನ್ನ ಕಳ್ಳಸಾಗಣೆ ಮಾಡುವಾಗ ಸಿಕ್ಕಿಬಿದ್ದ ಏರ್ ಇಂಡಿಯಾ ಸಿಬ್ಬಂದಿ
ಭದ್ರತಾ ಮತ್ತು ಗುಪ್ತಚರ ಅಧಿಕಾರಿಗಳ ಜಂಟಿ ತಂಡವು ಪ್ರಸ್ತುತ ಅವರನ್ನು ವಿಚಾರಣೆ ನಡೆಸುತ್ತಿದ್ದು, ನಂತರ ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವೃದ್ಧೆ ಕಿವಿ ಹರಿದು ಓಲೆ ದರೋಡೆ ಮಾಡಿದ್ದ ಖದೀಮನ ಬಂಧನ
ಪಂಜಾಬ್‍ನ ಇದೇ ಗಡಿಯಲ್ಲಿ ಬಾಂಗ್ಲಾದೇಶಿ ಮತ್ತು ಪಾಕಿಸ್ತಾನಿ ಪ್ರಜೆಯನ್ನು ಗಡಿ ಪಡೆ ಬಂಧಿಸಿದ ಒಂದು ದಿನದ ನಂತರ ಈ ಘಟನೆ ನಡೆದಿದೆ.
BSF, arrests, third, intruder, India-Pak, border, Punjab,