ನವದೆಹಲಿ, ಫೆ 1 (ಪಿಟಿಐ) ಪಿಎಂ ಕಿಸಾನ್ ಯೋಜನೆಯಡಿ 11.8 ಕೋಟಿ ರೈತರಿಗೆ ಆರ್ಥಿಕ ನೆರವು ನೀಡಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಸಂದರ್ಭದಲ್ಲಿ ಅವರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಎನ್ನುವುದು ವಿಶ್ವದ ಅತಿದೊಡ್ಡ ನೇರ ಲಾಭ ವರ್ಗಾವಣೆ ಯೋಜನೆಗಳಲ್ಲಿ ಒಂದಾಗಿದೆ ಎಂದಿದ್ದಾರೆ.
ನೀಲಿ ಬಣ್ಣದ ಸೀರೆಯಲ್ಲಿ ಮಿಂಚಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಈ ಯೋಜನೆಯಡಿಯಲ್ಲಿ, ಸರ್ಕಾರವು ಮೂರು ಸಮಾನ ನಾಲ್ಕು-ಮಾಸಿಕ ಕಂತುಗಳಲ್ಲಿ ವರ್ಷಕ್ಕೆ 6,000 ರೂಪಾಯಿಗಳ ಆರ್ಥಿಕ ಪ್ರಯೋಜನವನ್ನು ಒದಗಿಸುತ್ತದೆ. ಹಣವನ್ನು ಡಿಬಿಟಿ ಮೋಡ್ ಮೂಲಕ ದೇಶಾದ್ಯಂತ ರೈತರ ಕುಟುಂಬಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ಫೆಬ್ರವರಿ 2019 ರಲ್ಲಿ ಮಧ್ಯಂತರ ಬಜೆಟ್‍ನಲ್ಲಿ ಘೋಷಿಸಲಾಯಿತು, ಈ ಯೋಜನೆಯು ಡಿಸೆಂಬರ್ 2018 ರಿಂದ ಜಾರಿಗೆ ಬಂದಿತು.