ನವದೆಹಲಿ,ಫೆ.1- ಈ ಬಾರಿಯ ಬಜೆಟ್‌ನಲ್ಲಿ ದೇಶದ ಅನ್ನದಾತ ರೈತರಿಗೆ ಮತ್ತಷ್ಟು ಸಾಲವನ್ನು ನೀಡುವ ದೃಷ್ಟಿಯಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸುವುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಘೋಷಿಸಿದ್ದಾರೆ. ಇದರಿಂದ ರೈತರಿಗೆ ದೊಡ್ಡ ಮಟ್ಟದಲ್ಲಿ ಲಾಭವಾಗಲಿದ್ದು, ತಮ ಸರ್ಕಾರ ರೈತರ ಪರವಾಗಿದೆ ಎಂಬುದನ್ನು ಸಾಬೀತು ಮಾಡಿದ್ದಾರೆ.
ಈ ಹಿಂದೆ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ ಮೂರು ಲಕ್ಷದವರೆಗೆ ಸಾಲ ನೀಡಲಾಗುತ್ತಿತ್ತು. ಇದೀಗ ಇದರ ಮಿತಿಯನ್ನು ಹೆಚ್ಚಳ ಮಾಡುವ ಸದುದ್ದೇಶದಿಂದ ಮೂರು ಲಕ್ಷದಿಂದ 5 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗಿದೆ.
ರೈತರು ತಮ ಬೆಳೆಗಳನ್ನು ಕಟಾವು ಮಾಡಲು ಸಮಯಕ್ಕೆ ಹಣವನ್ನು ಪಡೆಯಲು ಸಹಾಯ ಮಾಡಲು ಕೇಂದ್ರ ಸರ್ಕಾರವು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಪ್ರಾರಂಭಿಸಿದೆ. ಈ ಕಾರ್ಡ್ ಮೂಲಕ ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ.
ಈ ಯೋಜನೆಯ ಮೂಲಕ ರೈತರು ಮೇಲಾಧಾರವಿಲ್ಲದೆ ಕೇವಲ 4 ಪ್ರತಿಶತ ಬಡ್ಡಿಯಲ್ಲಿ ಇನುಂದೆ 5 ಲಕ್ಷದವರೆಗೆ ಸಾಲ ಪಡೆಯಬಹುದು. ಈ ಯೋಜನೆಯು ರೈತರಿಗೆ ಆರ್ಥಿಕ ನೆರವು ನೀಡುತ್ತದೆ. ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ಬದಲಾವಣೆಗಳನ್ನು ತರಲು ಮತ್ತು ಅವರ ಅಗತ್ಯಗಳನ್ನು ಪೂರೈಸಲು ಸಹಾಯ ಮಾಡುತ್ತದೆ.
ರೈತರಿಗೆ ಬ್ಯಾಂಕ್‌ಗಳ ಮೂಲಕ ಸಾಲ ನೀಡಲು ಈ ಯೋಜನೆ ರೂಪಿಸಲಾಗಿದೆ. ರೈತರು ತಮ ಕೃಷಿ ಅಗತ್ಯತೆಗಳು, ಕಾರ್ಯಾಚರಣೆಯ ವೆಚ್ಚಗಳು ಮತ್ತು ಇತರ ಕೃಷಿ ಅಗತ್ಯಗಳನ್ನು ಪೂರೈಸಲು ಈ ಕ್ರೆಡಿಟ್ ಕಾರ್ಡ್‌ನ್ನು ಬಳಸಬಹುದು.
ಕಿಸಾನ್ ಕ್ರೆಡಿಟ್ ಕಾರ್ಡ್ ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡವರಿಗೆ ಪ್ರತ್ಯೇಕವಾಗಿ ಲಭ್ಯವಿದೆ. ಕೇಂದ್ರ ಸರ್ಕಾರ ಯಾವುದೇ ಗ್ಯಾರಂಟಿ ಇಲ್ಲದೇ ಈ ಯೋಜನೆಯನ್ನು ಜಾರಿಗೆ ತಂದಿದ್ದು, ರೈತರು ಬ್ಯಾಂಕ್‌ಗೆ ಅಡಮಾನ ಅಥವಾ ಭದ್ರತಾ ದಾಖಲೆಗಳನ್ನು ಸಲ್ಲಿಸುವ ಅಗತ್ಯವಿಲ್ಲ.
ಕಿಸಾನ್ ಕ್ರೆಡಿಟ್ ಕಾರ್ಡ್‌ಗಳು (ಕೆಸಿಸಿ) 7.7 ಕೋಟಿ ರೈತರು, ಮೀನುಗಾರರು ಮತ್ತು ಡೈರಿ ರೈತರಿಗೆ ಅಲ್ಪಾವಧಿಯ ಸಾಲಗಳನ್ನು ಸುಗಮಗೊಳಿಸುವುದನ್ನು ಮುಂದುವರಿಸುತ್ತದೆ ಎಂದು ಘೋಷಿಸಿದ್ದು, ಕೆಸಿಸಿ ಮೂಲಕ ಪಡೆಯುವ ಸಾಲದ ಮಿತಿಯನ್ನು 3,000 ರಿಂದ 5,000ಕ್ಕೆ ಹೆಚ್ಚಿಸಲಾಗುವುದು ಎಂದು ಅವರು ಹೇಳಿದ್ದಾರೆ.