Thursday, November 21, 2024
Homeಬೆಂಗಳೂರುರಾತ್ರಿ 8 ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅನುಮತಿ

ರಾತ್ರಿ 8 ರಿಂದ 10ರವರೆಗೆ ಮಾತ್ರ ಪಟಾಕಿ ಸಿಡಿಸಲು ಅನುಮತಿ

Bursting of firecrackers is allowed only from 8 to 10 pm

ಬೆಂಗಳೂರು,ಅ.28- ಪರಿಸರ ಮಾಲಿನ್ಯದ ಹಿನ್ನೆಲೆಯಲ್ಲಿ ನಗರದಲ್ಲಿ ರಾತ್ರಿ ಎಂಟು ಗಂಟೆಯಿಂದ 10 ಗಂಟೆವರೆಗೆ ಮಾತ್ರ ಹಸಿರು ಪಟಾಕಿ ಸಿಡಿಸಲು ಅನುಮತಿ ನೀಡಲಾಗಿದೆ. ಒಂದು ವೇಳೆ ನಿಯಮ ಮೀರಿ ಪಟಾಕಿ ಸಿಡಿಸಿದರೆ ಅಗತ್ಯ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಎಚ್ಚರಿಸಿದ್ದಾರೆ.

ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ನಗರದಲ್ಲಿ ಕೇವಲ ಹಸಿರು ಪಟಾಕಿ ಸಿಡಿಸಲು ಮಾತ್ರ ಅನುಮತಿ ನೀಡಲಾಗಿದೆ. ಆದು ರಾತ್ರಿ ಎಂಟು ಗಂಟೆಯಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಒಂದು ವೇಳೆ ರಾತ್ರಿ 10 ಗಂಟೆ ನಂತರವೂ ಪಟಾಕಿ ಸಿಡಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ.ಮನಸ್ಸೋ ಇಚ್ಚೆ ಪಟಾಕಿ ಸಿಡಿಸುವುದಕ್ಕೆ ಕಡಿವಾಣ ಹಾಕಲು ವಲಯ ಮಟ್ಟದಲ್ಲೂ ಅಧಿಕಾರಿಗಳ ನಿಯೋಜನೆ ಮಾಡಲಾಗಿದೆ. ಹೀಗಾಗಿ ಪಟಾಕಿ ಅನಾಹುತಕ್ಕೆ ಕಾರಣರಾಗಿ ಹಬ್ಬದ ಆಚರಣೆಗೆ ಅಡ್ಡಿ ಮಾಡ್ಕೊಬೇಡಿ ಎಂದು ಅವರು ಸಲಹೆ ನೀಡಿದ್ದಾರೆ.

RELATED ARTICLES

Latest News