ಬೆಂಗಳೂರು-ಮೈಸೂರು ಹೆದ್ದಾರಿಯ ತಡೆಗೋಡೆಗೆ ಬಸ್ ಡಿಕ್ಕಿಯಾಗಿ ಚಾಲಕ ಸಾವು

ಮಂಡ್ಯ,ಅ.28- ಕೇರಳ ಸರ್ಕಾರಿ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಬೆಂಗಳೂರು-ಮೈಸೂರು ಹೆದ್ದಾರಿಯ ತಡೆಗೋಡೆಗೆ ಡಿಕ್ಕಿ ಹೊಡೆದಿರುವ ಘಟನೆ ಮದ್ದೂರಿನ ಗೆಜ್ಜಲಗೆರೆ ಬಳಿ ಇಂದು ಮುಂಜಾನೆ ನಡೆದಿದೆ. ಬೆಳಗ್ಗಿನ ಜಾವ 5:30ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಬಸ್ ಚಾಲಕ ಆಸೀಫ್ (45) ಮೃತಪಟ್ಟಿದ್ದಾನೆ. ಬೆಂಗಳೂರಿನಿಂದ ಮೈಸೂರು ಮಾರ್ಗವಾಗಿ ಬಸ್ ಕೇರಳಕ್ಕೆ ಹೋಗುತ್ತಿತ್ತು ಚಾಲಕ ನಿದ್ರೆಯ ಮಂಪರಿನಲ್ಲಿ ಬಸ್ ಚಲಾಯಿಸಿದ್ದು ಈ ಅವಘಡಕ್ಕೆ ಕಾರಣವಾಗಿದೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ. ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮದ್ದೂರು … Continue reading ಬೆಂಗಳೂರು-ಮೈಸೂರು ಹೆದ್ದಾರಿಯ ತಡೆಗೋಡೆಗೆ ಬಸ್ ಡಿಕ್ಕಿಯಾಗಿ ಚಾಲಕ ಸಾವು