ಬೆಂಗಳೂರು,ಮಾ.4- ರಾಜ್ಯದಲ್ಲಿ ಯೆಲ್ಲೋಬೋರ್ಡ್ ಚಾಲಕರ ಮಕ್ಕಳ ಉನ್ನತ ವಿದ್ಯಾಭ್ಯಾಸ ಉತ್ತೇಜಿಸಲು ವಿದ್ಯಾನಿಧಿ ಯೋಜನೆ ವಿಸ್ತರಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹೆದ್ದಾರಿಗಳ ಅಕ್ಕಪಕ್ಕ ಪ್ರಯಾಣಿಕರಿಗೆ ಖಾಸಗಿ ಸಹಭಾಗಿತ್ವದಲ್ಲಿ ಮೂಲ ಸೌಕರ್ಯಗಳನ್ನು ಹೆಚ್ಚಿಸಲಾಗುವುದು.
ಹಾವೇರಿ ಶಿಗ್ಗಾವಿಯಲ್ಲಿ 28 ಕೋಟಿ ರೂ. ವೆಚ್ಚದಲ್ಲಿ ಬಸ್ ಘಟಕ ಮತ್ತು ಚಾಲನಾ ತರಬೇತಿ ಕೇಂದ್ರ ಆರಂಭಿಸಲಾಗುವುದು. ಮೋಟಾರು ತೆರಿಗೆ ಪಾವತಿಯ ಅವ ಮುಕ್ತಾಯದ ದಿನಾಂಕದಿಂದ 15 ದಿನಗಳ ಕಾಲಾವ ನೀಡಲಾಗುತ್ತಿದ್ದು, ಇದನ್ನು ಒಂದು ತಿಂಗಳಿಗೆ ವಿಸ್ತರಿಸಲಾಗುತ್ತಿದೆ. 30ಸಾವಿರಕ್ಕಿಂತ ಹೆಚ್ಚು ತ್ರೈಮಾಸಿಕ ತೆರಿಗೆ ಪಾವತಿಸುವ ಸಾರಿಗೆ ವಾಹನಗಳಿಗೆ ಮಾಸಿಕ ತೆರಿಗೆ ಪಾವತಿಗೆ ಅವಕಾಶ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಕಟ್ಟಡ ಮತ್ತು ಇತರ ನಿರ್ಮಾಣ ಕಾಮಗಾರಿಗೆ ಬಿಎಂಟಿಸಿಯಲ್ಲಿ ನೀಡುತ್ತಿರುವ ರಿಯಾಯ್ತಿ ಪಾಸ್‍ಗಳ ಸೌಲಭ್ಯವನ್ನು ರಾಜ್ಯಾದ್ಯಂತ ವಿಸ್ತರಿಸಲಾಗುತ್ತಿದೆ. ಎಲ್ಲಾ ಸಾರಿಗೆ ನಿಗಮಗಳ ಪುನಃಶ್ಚೇತನಕ್ಕೆ ಸಮಿತಿ ರಚಿಸಲಾಗಿದ್ದು, ಆದಾಯ ಸೋರಿಕೆ ನಿಯಂತ್ರಣ, ಸಂಪನ್ಮೂಲ ಸೃಷ್ಟಿಗೆ ಒತ್ತು ನೀಡಲಾಗಿದೆ.
ಕೋವಿಡ್ ವೇಳೆ ನಷ್ಟ ಅನುಭವಿಸಿದ ಸಾರಿಗೆ ನಿಗಮಗಳಿಗೆ 2020-21ರಲ್ಲಿ 1,953 ಕೋಟಿ, 2021-22ರಲ್ಲಿ 1,208 ಕೋಟಿ ಸಹಾಯಧನ ಒದಗಿಸಲಾಗಿದೆ. ದೇವನಹಳ್ಳಿ, ಕೋಲಾರ, ಹೊಸಪೇಟೆ, ಗದಗ, ಬಳ್ಳಾರಿ, ವಿಜಯಪುರ, ಬೀದರ್, ಯಾದಗಿರಿ, ದಾವಣಗೆರೆಯಲ್ಲಿ 80 ಕೋಟಿ ರೂ.ಗಳಲ್ಲಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥಗಳನ್ನು ರಸ್ತೆ ಸುರಕ್ಷತಾ ನಿಯಡಿ ನಿರ್ಮಿಸುವುದಾಗಿ ಹೇಳಿದ್ದಾರೆ.
