Monday, August 18, 2025
Homeರಾಷ್ಟ್ರೀಯ | Nationalಬಸ್ ಪಲ್ಟಿಯಾಗಿ 21 ಪೊಲೀಸರಿಗೆ ಗಾಯ

ಬಸ್ ಪಲ್ಟಿಯಾಗಿ 21 ಪೊಲೀಸರಿಗೆ ಗಾಯ

ಬೆತುಲ್ , ಅ 20- ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ಇಂದು ಮುಂಜಾನೆ ಬಸ್ ಪಲ್ಟಿಯಾಗಿ 21 ಪೊಲೀಸರು ಮತ್ತು ಗೃಹ ರಕ್ಷಕ ದಳದ ಸಿಬ್ಬಂದಿ ಗಾಯಗೊಂಡಿದ್ದಾರೆ. ಚುನಾವಣಾ ಕರ್ತವ್ಯ ಮುಗಿಸಿ ರಾಜ್ಯದ ತಮ್ಮ ತವರು ಜಿಲ್ಲೆ ರಾಜ್‍ಗಢಕ್ಕೆ ಹಿಂತಿರುಗುತ್ತಿದ್ದಾಗ ಭೋಪಾಲ್-ಬೇತುಲ್ ಹೆದ್ದಾರಿಯ ಬರೇತಾ ಘಾಟ್ ಬಳಿ ಅಪಘಾತ ಸಂಭವಿಸಿದೆ ಎಂದು ಅಕಾರಿ ತಿಳಿಸಿದ್ದಾರೆ.

ಮುಂಜಾನೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸ್ ಉಪ ವಿಭಾಗಾಧಿಕಾರಿ ಶಾಲಿನಿ ಪರಸ್ತೆ ತಿಳಿಸಿದ್ದಾರೆ. ಐವರು ಪೊಲೀಸರು ಮತ್ತು ಉಳಿದ ಗೃಹರಕ್ಷಕರು ಸೇರಿದಂತೆ ಒಟ್ಟು 40 ಸಿಬ್ಬಂದಿ ಪ್ರಯಾಣಿಸುತ್ತಿದ್ದ ಬಸ್ ಛಿಂದ್ವಾರಾದಲ್ಲಿ ಚುನಾವಣಾ ಕರ್ತವ್ಯದ ನಂತರ ರಾಜ್‍ಗಢಕ್ಕೆ ತೆರಳುತ್ತಿದ್ದರು ಎಂದು ಅವರು ಹೇಳಿದರು.

ಗಂಭೀರವಾಗಿ ಗಾಯಗೊಂಡಿರುವ ಎಂಟು ಸಿಬ್ಬಂದಿಗೆ ಬೆತುಲ್‍ನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸಣ್ಣಪುಟ್ಟ ಗಾಯಗೊಂಡವರಿಗೆ ಶಾಹಪುರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ ತಿರುವಿನ ವೇಳೆ ಚಾಲಕನ ನಿಯಂತ್ರಣ ತಪ್ಪಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

RELATED ARTICLES

Latest News