Friday, April 4, 2025
Homeಜಿಲ್ಲಾ ಸುದ್ದಿಗಳು | District Newsಉತ್ತರ ಕನ್ನಡ | Uttara Kannadaಕಾರವಾರ : ಮನೆಗೆ ನುಗ್ಗಿ ಉದ್ಯಮಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು

ಕಾರವಾರ : ಮನೆಗೆ ನುಗ್ಗಿ ಉದ್ಯಮಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು

businessman-vinayak-nayak-was-attacked-and-killed-at-karwar

ಕಾರವಾರ ,ಸೆ.22- ಮನೆಗೆ ನುಗ್ಗಿದ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಕೊಚ್ಚಿ ಉದ್ಯಮಿಯನ್ನುಭೀಕರವಾಗಿ ಹತ್ಯೆಮಾಡಿ ಪರಾರಿಯಾಗಿರುವ ಘಟನೆ ತಾಲೂಕಿನ ಹಣಕೊಣ ಗ್ರಾಮದಲ್ಲಿ ಇಂದು ಮುಂಜಾನೆ ನಡೆದಿದೆ.ಮಹಾರಾಷ್ಟ್ರದ ಪುಣೆಯ ಉದ್ಯಮಿ ವಿನಾಯಕ ನಾಯ್ಕ ಯಾನೆ ರಾಜು (58) ಕೊಲೆಯಾದ ದುರ್ದೈವಿ.

ಇಂದು ಮುಂಜಾನೆ 5.30ರ ವೇಳೆಗೆ ಕಾರಿನಲ್ಲಿ ಬಂದ ನಾಲ್ಕು ಮಂದಿ ದುಷ್ಕರ್ಮಿಗಳು ಮನೆ ಬಾಗಿಲು ತಟ್ಟಿ ಏಕಾಏಕಿ ಒಳಗೆ ನುಗ್ಗಿದ್ದಾರೆ ಎದುರಿಗೆ ಬಂದ ಪತ್ನಿ ವೃಶಾಲಿ ಅವರ ಮೇಲೆ ಹಲ್ಲೆ ನಡೆಸಿ ನಂತರ ಮಾರಕಾಸ್ರದಿಂದ ರಾಜು ಅವರ ಮೇಲೆರಗಿ ಕೊಂದು ಹಾಕಿದ್ದಾರೆ.

ನಂತರ ಹಂತಕರು ಅಲ್ಲಿಂದ ಪರಾರಿಯಾಗಿದ್ದಾರೆ.ಕೂಗಾಟ ಕೇಲಿ ಅಕ್ಕಪಕ್ಕದವರು ಬಂದು ನೋಡಿದಾಗ ದಂಪತಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ನೋಡಿ ಆತಂಕದಲ್ಲಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿನಾಯಕ್ ಸ್ಥಳದಲ್ಲೇ ಸಾವನ್ನಪ್ಪಿದ್ದು , ಪತ್ನಿ ವೃಶಾಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಮಡೆಯುತ್ತಿದ್ದಾರೆ.ಹಳೇ ದ್ವೇಶದಲ್ಲಿ ಈ ಕೊಲೆ ನಡೆದಿದೆ ಎಂದು ಹೇಳಲಾಗುತ್ತಿದೆ .ಹಂತಕರ ಪತ್ತೆಗೆ ಬಲೆ ಬೀಸಲಾಗಿದೆ.

ಉದ್ಯಮಿ ವಿನಾಯಕ ನಾಯ್ಕ ತಮ್ಮ ಪತ್ನಿಯೊಂದಿಗೆ ಕಳೆದ ವಾರ ಗ್ರಾಮ ದೇವರ ಜಾತ್ರೆಗೆಂದು ಹಣಕೊಣ ಗ್ರಾಮಕ್ಕೆ ಬಂದಿದ್ದರು. ಇಂದು ಬೆಳಗ್ಗೆ ಪುಣೆಗೆ ಹೊಗುವುದಾಗಿ ಸ್ನೇಹಿತರಿಗೆ ತಿಳಿಸಿದ್ದರು. ಅಷ್ಟರಲ್ಲೇ ಕೊಲೆ ನಡೆದಿರುವುದು ಭಾರಿ ಅನುಮಾನ ಹುಟ್ಟಿಸಿದೆ. ಕೊಲೆ ಯಾರೂ ಮಾಡಿದ್ರು ಮತ್ತು ಯಾಕೆ ಮಾಡಿದ್ರು? ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ಚಿತ್ತಾಕುಲ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

Latest News