Sunday, September 15, 2024
Homeರಾಜ್ಯಕಾಂಗ್ರೆಸ್‌‍ ಸರ್ಕಾರದಲ್ಲಿ ಸ್ತ್ರೀಪೀಡಕರು, ದುರುಳರು, ಅತ್ಯಾಚಾರಿಗಳ ಅಟ್ಟಹಾಸ ಮಿತಿಮೀರಿದೆ : ವಿಜಯೇಂದ್ರ

ಕಾಂಗ್ರೆಸ್‌‍ ಸರ್ಕಾರದಲ್ಲಿ ಸ್ತ್ರೀಪೀಡಕರು, ದುರುಳರು, ಅತ್ಯಾಚಾರಿಗಳ ಅಟ್ಟಹಾಸ ಮಿತಿಮೀರಿದೆ : ವಿಜಯೇಂದ್ರ

ಬೆಂಗಳೂರು,ಆ.19- ಬೆಂಗಳೂರಿನಲ್ಲಿ ಆಟೋದಲ್ಲಿ ತೆರಳುತ್ತಿದ್ದ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಖಂಡಿಸಿದ್ದಾರೆ.

ಈ ಸಂಬಂಧ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಟ್ಟೀಟ್‌ ಮಾಡಿರುವ ಅವರು, ರಾಜ್ಯದ ಕಾಂಗ್ರೆಸ್‌‍ ಸರ್ಕಾರದಲ್ಲಿ ಸ್ತ್ರೀಪೀಡಕರು, ದುರುಳರು, ಅತ್ಯಾಚಾರಿಗಳ ಅಟ್ಟಹಾಸ ವಿಪರೀತಕ್ಕೆ ಹೋಗುತ್ತಿದೆ. ಸರಣಿ ರೂಪದಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಿವೆ.

ಬೆಂಗಳೂರಿನ ಹೆಚ್‌ಎಸ್‌‍ಆರ್‌ಲೇ ಔಟ್‌ನಲ್ಲಿ ಆಟೋದಲ್ಲಿ ಹೋಗುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಅತ್ಯಂತ ಹೇಯ ಹಾಗೂ ರಾಕ್ಷಸೀ ಕೃತ್ಯವಾಗಿದೆ. ಮರುಕಳಿಸುತ್ತಲೇ ಇರುವ ಇಂಥಾ ಘಟನೆಗಳಿಂದ ಕರ್ನಾಟಕ ರಾಷ್ಟ್ರಮಟ್ಟದಲ್ಲಿ ತಲೆತಗ್ಗಿಸುವಂತಾಗಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಘನತೆ ಕುಗ್ಗುತ್ತಿದೆ. ಮುಖ್ಯಮಂತ್ರಿಯಾದಿಯಾಗಿ ಸರ್ಕಾರದ ಯಾರೊಬ್ಬರೂ ಈ ಬಗ್ಗೆ ಗಂಭೀರತೆ ಪ್ರದರ್ಶಿಸದೇ ಉಡಾೆ ಧೋರಣೆ ಅನುಸರಿಸುತ್ತಿರುವ ಪರಿ ನೋಡಿದರೆ ಸರ್ಕಾರವೇ ಸೀ ಕುಲ ಪೀಡಕರ ರಕ್ಷಣೆಗೆ ನಿಂತಿರುವ ಅನುಮಾನ ಮೂಡಿಸುತ್ತಿದೆ.

ತಕ್ಷಣವೇ ಯುವತಿಯ ರಕ್ಷಣೆಗೆ ಮುಂದಾಗಿ ಪೈಶಾಚಿಕ ಕೃತ್ಯ ಎಸಗಿದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

RELATED ARTICLES

Latest News