Thursday, May 2, 2024
Homeರಾಜ್ಯಡಿಕೆಶಿ ಪ್ರಕರಣ ವಾಪಾಸ್ ನಿರ್ಧಾರ ದುರದೃಷ್ಟಕರ: ಬಿ.ವೈ.ವಿಜಯೇಂದ್ರ

ಡಿಕೆಶಿ ಪ್ರಕರಣ ವಾಪಾಸ್ ನಿರ್ಧಾರ ದುರದೃಷ್ಟಕರ: ಬಿ.ವೈ.ವಿಜಯೇಂದ್ರ

ಬೆಂಗಳೂರು,ನ.24- ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಮೇಲಿನ ಅಕ್ರಮ ಆಸ್ತಿ ಪ್ರಕರಣದ ಸಿಬಿಐ ತನಿಖೆಯನ್ನು ಹಿಂಪಡೆದಿರುವ ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಧಾರ ಸಂಪೂರ್ಣವಾಗಿ ಕಾನೂನುಬಾಹಿರವಾಗಿದೆ. ತಕ್ಷಣವೇ ತನ್ನ ನಿರ್ಧಾರವನ್ನು ಮರುಪರಿಶೀಲನೆ ಮಾಡಲಿ ಎಂದು ಮನವಿ ಮಾಡಿದರು.

ಐಟಿ ದಾಳಿಯ ವೇಳೆ ರಾಜ್ಯ ಮತ್ತು ಬೇರೆ ಬೇರೆ ಭಾಗಗಳಲ್ಲಿ ಸಾಕಷ್ಟು ಹಣ ಸಿಕಿತ್ತು. ವಿಚಾರಣೆ ನಡೆಯುತ್ತಿರುವ ಹಂತದಲ್ಲೇ ಸರ್ಕಾರದ ಈ ತೀರ್ಮಾನ ಅತ್ಯಂತ ದುರದೃಷ್ಟಕರ. ಸರ್ಕಾರ ಕಾನೂನಿನಿಗೆ ವಿರುದ್ಧವಾಗಿ ಈ ನಿರ್ಣಯ ಕೈಗೊಂಡಿದೆ ಎಂದು ದೂರಿದರು. ಡಿ.ಕೆ.ಶಿವಕುಮಾರ್ ಅವರನ್ನು ರಕ್ಷಣೆ ಮಾಡಲೆಂದೇ ಸರ್ಕಾರ ಕಾನೂನಿಗೆ ವಿರುದ್ಧವಾಗಿ ಈ ನಿರ್ಣಯತೆಗೆದುಕೊಂಡಿದೆ. ಅಷ್ಟಕ್ಕೂ ಏನೂ ತಪ್ಪು ಮಾಡಿಲ್ಲವೆಂದ ಮೇಲೆ ಡಿ.ಕೆ.ಶಿವಕುಮಾರ್ ಹೆದರುವುದು ಏಕೆ ಎಂದು ಪ್ರಶ್ನಿಸಿದರು.

ಸಚಿವ ಸಂಪುಟದ ನಿರ್ಧಾರವನ್ನು ಡಿ.ಕೆ.ಶಿವಕುಮಾರ್ ಮೊದಲು ವಿರೋಧಿಸಬೇಕಿತ್ತು. ಇದನ್ನು ನೋಡಿದರೆ ತಪ್ಪು ಮಾಡಿದ್ದೇವೆಂದು ಅವರೇ ಒಪ್ಪಿಕೊಂಡಂತಾಗಿದೆ. ಸಂಪುಟದ ನಿರ್ಧಾರವನ್ನು ಬಿಜೆಪಿ ಪ್ರಬಲವಾಗಿ ವಿರೋಧಿಸುತ್ತದೆ ಎಂದು ಹೇಳಿದರು.

ವಿಷಪೂರಿತ ಹಾವು ಬಿಟ್ಟು ಪತ್ನಿ-ಮಗಳನ್ನು ಕೊಂದ ಕೀಚಕ

ಸರ್ಕಾರದ ತೀರ್ಮಾನದ ವಿರುದ್ಧ ಮುಂದೆ ಯಾವ ರೀತಿ ಹೋರಾಟ ಮಾಡಬೇಕು ಅಂತ ಚರ್ಚೆ ನಡೆಸಿ ನಿರ್ಧರಿಸಲಿದೆ. ನಮ್ಮ ಅವಧಿಯಲ್ಲಿ ತೆಗೆದುಕೊಂಡ ನಿರ್ಧಾರ ರಾಜಕೀಯ ಪ್ರೇರಿತ ಆಗಿರಲಿಲ್ಲ. ಪ್ರಾಥಮಿಕ ತನಿಖೆಯಲ್ಲಿ ಅಕ್ರಮ ಆಗಿದೆ ಎಂಬ ಮಾಹಿತಿ ಆಧಾರದಲ್ಲಿ ಸಿಬಿಐಗೆ ತನಿಖೆಗೆ ಅನುಮತಿ ಕೊಡಲಾಗಿತ್ತು ಎಂದರು.

ಡಿಕೆಶಿ ಅವರಿಗೆ ಈಗ ಗೋಲ್ಡನ್ ಆಪರ್ಚುನಿಟಿ ಇದೆ. ಅವರು ತಾವು ಸತ್ಯಹರಿಶ್ಚಂದ್ರರು ಎಂದು ಸಾಬೀತು ಮಾಡುವ ಅವಕಾಶ ಇದೆ. ಜನತೆಯ ಮುಂದೆ ನೀವು ತಪ್ಪು ಮಾಡಿಲ್ಲ ಎಂದು ತನಿಖೆ ಎದುರಿಸಿ ತೋರಿಸಿ ಎಂದು ಹೇಳಿದರು. ಇದರ ಬಗ್ಗೆ ಮುಂದಿನ ದಿನಗಳಲ್ಲಿ ಹಿರಿಯರ ಜೊತೆ ಮಾತಾಡಿ ಹೋರಾಟದ ತೀರ್ಮಾನ ಮಾಡುತ್ತೇವೆ. ಪ್ರಾಥಮಿಕವಾಗಿ ಜಾರಿನಿರ್ದೇಶನಾಲಯ ದಾಳಿ ನಡೆಸಿದ ವೇಳೆ ಅಕ್ರಮ ಆಸ್ತಿ ಎಂಬುದು ಗೊತ್ತಾಗಿದೆ. ಇಂಥ ಹೊತ್ತಲೇ ಸರ್ಕಾರದ ತೀರ್ಮಾನ ಸರಿಯಲ್ಲ ಎಂದು ಆಕ್ಷೇಪಿಸಿದರು.

ಶಾಸಕಾಂಗ ಅಂಗೀಕರಿಸಿದ ಮಸೂದೆಯನ್ನು ರಾಜ್ಯಪಾಲರು ವಿನಾಕಾರಣ ತಡೆಹಿಡಿಯುವಂತಿಲ್ಲ : ಸುಪ್ರೀಂ

ಹಿಂದಿನ ವರದಿ, ಆದೇಶದ ಬಗ್ಗೆ ಮಾತಾಡಲ್ಲ. ಪ್ರಕರಣ ವಿಚಾರಣೆಯಲ್ಲಿರುವಾಗ ಈ ರೀತಿ ಮಾಡುವುದು ಸರಿಯಲ್ಲ, ಅಕ್ಷಮ್ಯ ಅಪರಾಧ ಎಂದರು. ಬೆಳಗಾವಿ ಅಧಿವೇಶದಲ್ಲಿ ಸಾಕಷ್ಟು ವಿಚಾರ ಚರ್ಚೆ ಮಾಡುತ್ತೇವೆ. ಬರ ನಿರ್ವಹಣೆ, ಕಬ್ಬು ಬೆಳೆಗಾರರ ಸಮಸ್ಯೆ, ಡಿಕೆಶಿ ವಿಚಾರ ಸೇರಿದಂತೆ ಹಲವು ವಿಚಾರಗಳನ್ನು ಪ್ರಸ್ತಾಪಿಸುವುದಾಗಿ ತಿಳಿಸಿದರು.

ಸಚಿವ ಜಮೀರ್ ಅಹಮ್ಮದ್ ಅವರ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿರುವ ವಿಜಯೇಂದ್ರ ಅವರ ಹೇಳಿಕೆಯನ್ನು ಯಾರೂ ಒಪ್ಪಲು ಸಾಧ್ಯವಿಲ್ಲ. ಅವರೊಬ್ಬ ಭಾರತೀಯನೆಂದು ಹೇಳಲು ನಮಗೆ ನಾಚಿಕೆಯಾಗುತ್ತದೆ ಎಂದು ಇದೇ ವೇಳೆ ವಾಗ್ದಾಳಿ ನಡೆಸಿದರು.

RELATED ARTICLES

Latest News