Monday, May 6, 2024
Homeರಾಜ್ಯಮೈತ್ರಿ ಪಕ್ಷಕ್ಕೆ 4 ಕ್ಷೇತ್ರ ಮಾತ್ರ ಕೊಡಿ, ವರಿಷ್ಠರಿಗೆ ವಿಜಯೇಂದ್ರ ಮನವಿ

ಮೈತ್ರಿ ಪಕ್ಷಕ್ಕೆ 4 ಕ್ಷೇತ್ರ ಮಾತ್ರ ಕೊಡಿ, ವರಿಷ್ಠರಿಗೆ ವಿಜಯೇಂದ್ರ ಮನವಿ

ಬೆಂಗಳೂರು, ಡಿ.21- ಮುಂಬರುವ ಲೋಕಸಭೆ ಚುನಾವಣೆ ಯಲ್ಲಿ ಎನ್‍ಡಿಎ ಮೈತ್ರಿಕೂಟದ ಭಾಗವಾಗಿರುವ ಜೆಡಿಎಸ್‍ಗೆ ರಾಜ್ಯ ದಲ್ಲಿ 4 ರಿಂದ 5 ಕ್ಷೇತ್ರಗಳನ್ನು ಮಾತ್ರ ನೀಡುವಂತೆ ಪಕ್ಷದ ವರಿಷ್ಠರಿಗೆ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮನವಿ ಮಾಡಲಿದ್ದಾರೆ. ಪ್ರಸ್ತುತ ದೆಹಲಿ ಪ್ರವಾಸದಲ್ಲಿರುವ ವಿಜಯೇಂದ್ರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತಿತರ ಪ್ರಮುಖರ ಜೊತೆ ಮಾತುಕತೆ ನಡೆಸಿರುವ ಅವರು, ಜೆಡಿಎಸ್‍ಗೆ 28 ಲೋಕಸಭಾ ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳನ್ನು ನೀಡುವಂತೆ ಪ್ರಸ್ತಾವವನ್ನು ಮುಂದಿಟ್ಟಿದ್ದಾರೆ.

ಹಾಸನ, ಬೆಂಗಳೂರು ಗ್ರಾಮಾಂತರ, ಮಂಡ್ಯ ಲೋಕಸಭಾ ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಟ್ಟುಕೊಟ್ಟು ಚಿಕ್ಕಬಳ್ಳಾಪುರ, ತುಮಕೂರು ಕ್ಷೇತ್ರಗಳಲ್ಲಿ ಜೆಡಿಎಸ್ ಬೆಂಬಲಿತ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ತೀರ್ಮಾನಿಸುವಂತೆ ಕೋರಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿರಬಹುದು. ಆದರೆ ಲೋಕಸಭೆ ಚುನಾವಣೆಯಲ್ಲಿ ತಮಗೆ ಹಿನ್ನಡೆಗಳಾಗುವ ಸಾಧ್ಯತೆಗಳಿಲ್ಲ. 1999 ರಿಂದ 2019 ರ ಲೋಕಸಭಾ ಚುನಾವಣೆವರೆಗೂ ಬಿಜೆಪಿ ಪ್ರತಿ ಚುನಾವಣೆಯಲ್ಲೂ ಉತ್ತಮ ಫಲಿತಾಂಶ ಕಂಡುಕೊಂಡಿದೆ.

ಹೀಗಾಗಿ 3 ಕ್ಷೇತ್ರಗಳನ್ನು ಜೆಡಿಎಸ್‍ಗೆ ಬಿಟ್ಟು 2 ಕಡೆ ಒಮ್ಮತದ ಅಭ್ಯರ್ಥಿಗಳು ಉಳಿದ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸೋಣ. ವರಿಷ್ಠರು ಗಟ್ಟಿನಿರ್ಧಾರ ತೆಗೆದುಕೊಳ್ಳಬೇಕೆಂದು ವಿಜಯೇಂದ್ರರವರು ಮನವಿ ಮಾಡಿದ್ದಾರೆಂದು ತಿಳಿದುಬಂದಿದೆ. ವಿಧಾನಸಭೆ ಚುನಾವಣೆಯಲ್ಲಿ ನಾವು ಸೋತಿರಬಹುದು. ಆದರೆ ಬಿಜೆಪಿಗೆ ಶೇ.36 ರಷ್ಟು ಮತಗಳಿಕೆ ಬಂದಿದೆ. ಅದರಲ್ಲೂ ಹಾಸನ ಮತ್ತು ಮಂಡ್ಯ ಕ್ಷೇತ್ರಗಳಲ್ಲಿ ನಾವು ತಮ್ಮ ಅಭ್ಯರ್ಥಿಗಳು ಸೋಲು ಕಂಡಿದ್ದರೂ ಅನೇಕ ಕ್ಷೇತ್ರಗಳಲ್ಲಿ ಮತಗಳಿಸುವ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ.

ಹಾಸನ ಜಿಲ್ಲೆಯ ಹಾಸನ, ಅರಸೀಕೆರೆ, ಇಡೀ ಕ್ಷೇತ್ರಕ್ಕೆ ಒಳಪಡುವ ಕಡೂರು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ, ಮದ್ದೂರು, ಮಳವಳ್ಳಿ ಹೀಗೆ ಹಲವಾರು ಕಡೆ ಮತಪ್ರಮಾಣ ಏರಿಕೆಯಾಗಿದೆ. ಈ ಎಲ್ಲವನ್ನೂ ಪರಿಗಣಿಸಿ 3 ಕ್ಷೇತ್ರಗಳಲ್ಲಿ ಜೆಡಿಎಸ್ ತುಮಕೂರು ಹಾಗೂ ಚಿಕ್ಕಬಳ್ಳಾಪುರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂಬ ಪ್ರಸ್ತಾವನೆಯನ್ನು ಮುಂದಿಟ್ಟಿದ್ದಾರೆ.

ನಿಗಮ-ಮಂಡಳಿಗಳ ನೇಮಕಾತಿ ವಿಷಯದಲ್ಲಿ ಕಾಂಗ್ರೆಸ್ ಶಾಸಕರಿಗೆ ಮತ್ತೆ ನಿರಾಸೆ

ಸೀಟು ಹಂಚಿಕೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ವ್ಯತ್ಯಾಸವಾಗದಂತೆ ಪರಸ್ಪರ ನಂಬಿಕೆಯನ್ನು ಉಳಿಸಿಕೊಳ್ಳಬೇಕು. ಎಲ್ಲಿಯೂ ಉಭಯ ಪಕ್ಷಗಳ ಮುಖಂಡರ ನಡುವೆ ಅನುಮಾನಕ್ಕೆ ಆಸ್ಪದವಿರಬಾರದು. ಸಣ್ಣಪುಟ್ಟ ವ್ಯತ್ಯಾಸಗಳು ಬಂದರೆ, ಕೆಳಹಂತದಲ್ಲೇ ಪಕ್ಷದ ಪ್ರಮುಖರು ಬಿಕ್ಕಟ್ಟನ್ನು ಪರಿಹರಿಸಬೇಕು. ಹೀಗಾಗಿ ಆದಷ್ಟು ಬೇಗ ಸೀಟು ಹಂಚಿಕೆ ಸಂಬಂಧ ಸ್ಪಷ್ಟ ನಿರ್ಧಾರ ಕೈಗೊಳ್ಳುವಂತೆ ಮನವಿ ಮಾಡುವಂತೆ ತಿಳಿದುಬಂದಿದೆ.

ಉಳಿದಂತೆ ಲೋಕಸಭೆ ಚುನಾವಣೆಗೆ ಕಾರ್ಯಕರ್ತರನ್ನು ಹುರಿದುಂಬಿಸಲು ಜನವರಿ ತಿಂಗಳ ಮಧ್ಯಭಾಗದಲ್ಲಿ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ನಡೆಸಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ. ಮಧ್ಯ ಕರ್ನಾಟಕದ ಪ್ರಮುಖ ಸ್ಥಳ ಹಾಗೂ ರಾಜಕಾರಣಿಗಳಿಗೆ ಅದೃಷ್ಟದ ನೆಲೆ ಎಂದೇ ಹೇಳಲಾಗುವ ದಾವಣಗೆರೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಬೃಹತ್ ಸಮಾವೇಶ ನಡೆಸಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ.

ಪ್ರಧಾನಿ ನರೇಂದ್ರ ಮೋದಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸೇರಿದಂತೆ ಉಭಯ ಪಕ್ಷಗಳ ಮುಖಂಡರನ್ನು ಒಂದೇ ವೇದಿಕೆಗೆ ಕರೆತರಬೇಕು. ಈ ಮೂಲಕ ಕಾರ್ಯಕರ್ತರಿಗೆ ಹೊಸ ಸಂದೇಶ ನೀಡೋಣ ಎಂಬ ಪ್ರಸ್ತಾವನೆಯನ್ನು ಮುಂದಿಟ್ಟಿದ್ದಾರೆ. ಇತ್ತೀಚೆಗೆ ನಡೆದ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‍ಗಢದಲ್ಲಿ ಸ್ಪಷ್ಟ ಜನಾದೇಶ ಪಡೆದು ಅಧಿಕಾರ ಹಿಡಿದಿರುವುದು ಕಾರ್ಯಕರ್ತರಲ್ಲಿ ಹೊಸ ಸಂದೇಶವನ್ನು ತಂದಿದೆ.

ಗೃಹಸಚಿವ ಪರಮೇಶ್ವರ್ ಅವರನ್ನು ಭೇಟಿಯಾದ ಕಿಚ್ಚ ಸುದೀಪ್

ಕರ್ನಾಟಕದಲ್ಲೂ ರಾಜ್ಯದ ಜನತೆ ಮತ್ತೊಮ್ಮೆ ಮೋದಿಯವರನ್ನೇ ಅಧಿಕಾರಕ್ಕೆ ತರಬೇಕೆಂಬ ದೃಢ ಸಂಕಲ್ಪ ಮಾಡಿದ್ದಾರೆ. ಹೀಗಾಗಿ ಬೃಹತ್ ಸಮಾವೇಶ ನಡೆಸಲು ಅನುಮತಿ ನೀಡಬೇಕು. ಇದಕ್ಕೆ ಜೆಡಿಎಸ್ ವರಿಷ್ಠರ ಜೊತೆಗೂ ಮಾತುಕತೆ ನಡೆಸಿ ದಿನಾಂಕವನ್ನು ನಿಗದಿಪಡಿಸಬೇಕೆಂಬ ಕೋರಿಕೆಯನ್ನು ವಿಜಯೇಂದ್ರ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

RELATED ARTICLES

Latest News