Friday, November 22, 2024
Homeರಾಜಕೀಯ | Politicsಪೂರೈಸಿದ್ದು ವರ್ಷ, ಸಾಧಿಸಿದ್ದು ಶೂನ್ಯ, ಖಜಾನೆ ಖಾಲಿ ಖಾಲಿ, ವಸೂಲಿ ಭಾರಿ ಭಾರಿ : ವಿಜಯೇಂದ್ರ...

ಪೂರೈಸಿದ್ದು ವರ್ಷ, ಸಾಧಿಸಿದ್ದು ಶೂನ್ಯ, ಖಜಾನೆ ಖಾಲಿ ಖಾಲಿ, ವಸೂಲಿ ಭಾರಿ ಭಾರಿ : ವಿಜಯೇಂದ್ರ ಟೀಕೆ

ಬೆಂಗಳೂರು,ಮೇ20- ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌‍ ಸರ್ಕಾರ ಅಧಿಕಾರಕ್ಕೆ ಬಂದು ಮೇ 20ಕ್ಕೆ ವರ್ಷವಾಯಿತು. ಆದರೆ ಸಾಧಿಸಿದ್ದು ಮಾತ್ರ ಶೂನ್ಯ ಎಂದು ಬಿಜೆಪಿ ರಾಜ್ಯಾಧ್ಯಾಕ್ಷ ಬಿವೈ ವಿಜಯೇಂದ್ರ ಟೀಕೆ ಮಾಡಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಅವರು, ಪೂರೈಸಿದ್ದು ವರುಷ ಮಾತ್ರ ಆದರೆ, ಸಾಧಿಸಿದ್ದು ಶೂನ್ಯ. ಖಜಾನೆ ಖಾಲಿ ಖಾಲಿ, ವಸೂಲಿ ಭಾರಿ ಭಾರಿ ಎಂದು ಹರಿಹಾಯ್ದಿದ್ದಾರೆ.

ರಾಜ್ಯದ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್‌‍ ಸರ್ಕಾರ ಒಂದು ವರ್ಷದಲ್ಲಿ ಬಿಟ್ಟಿ ಭಾಗ್ಯಗಳಿಗಾಗಿ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಿದ ಪರಿಣಾಮ, ನಿರುದ್ಯೋಗ ಭವಣೆ ಹೆಚ್ಚಾಗಿದೆ. ಶಿಕ್ಷಣ ಕ್ಷೇತ್ರ ಎಡವಿ ಬಿದ್ದಿತು, ಉತ್ಪನ್ನ ಕ್ಷೇತ್ರ ಸೊರಗಿತು. ನಾರಿ ಕುಲ ರಕ್ಷಣೆ ಇಲ್ಲದೆ ನಲುಗಿತು, ಬೆಳೆಯೆಲ್ಲ ಒಣಗಿತು. ದಲಿತ ಕಲ್ಯಾಣ ಕಾರ್ಯಗಳು ಕುಸಿಯಿತು. ಹಿಂದುಳಿದವರ ಅಭಿವೃದ್ಧಿ ಹಿಂದುಳಿಯಿತು. ರೈತರ ಬಾಳು ಗೋಳಾಯಿತು ಎಂದು ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಅವರು ತಮ್ಮ ಸರ್ಕಾರ ಒಂದು ವರ್ಷದಲ್ಲಿ ವಿಪಕ್ಷಗಳಾದ ಜೆಡಿಎಸ್‌‍ ಮತ್ತು ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ನಿರ್ಧರಿಸಿವೆ. ಒಂದು ವರ್ಷದಲ್ಲಿ ಸರ್ಕಾರ ಲೋಪ-ದೋಷಗಳು, ವೈಫಲ್ಯಗಳನ್ನು ಮುಂದಿಟ್ಟುಕೊಂಡು ರಾಜ್ಯಾದ್ಯಂತ ಪ್ರತಿಭಟನೆ ಮಾಡಲು ರಾಜ್ಯ ಬಿಜೆಪಿ, ತನ್ನ ಎಲ್ಲ ಘಟಕಗಳಿಗೆ ಸೂಚನೆ ನೀಡಿದೆ.

ಮತ್ತೊಂದೆಡೆ ವಿಪಕ್ಷದ ಹಿರಿಯ ನಾಯಕರು ಸಹ ಸುದ್ದಿಗೋಷ್ಠಿ ನಡೆಸಿ ಸಮಾಜ ಕಲ್ಯಾಣ, ಆಹಾರ, ಕೃಷಿ ಮತ್ತು ಗೃಹ ಇಲಾಖೆ ಸೇರಿದಂತೆ ಹಲವು ಇಲಾಖೆಗಳ ವೈಫಲ್ಯಗಳ ಕುರಿತು ಜನರ ಮುಂದಿಡಲು ತೀರ್ಮಾನಿಸಿದ್ದಾರೆ. ಅಲ್ಲದೆ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿರುವ ಕುರಿತು ರಾಜ್ಯಪಾಲರಿಗೆ ದೂರು ನೀಡಲು ನಿರ್ಧರಿಸಿದೆ.

RELATED ARTICLES

Latest News