Friday, November 22, 2024
Homeರಾಜ್ಯಅಸಹಾಯಕ ಅಧಿಕಾರಿಗಳು-ಗುತ್ತಿಗೆದಾರರಿಗೆ ಆತ್ಮಹತ್ಯೆ ಭಾಗ್ಯ : ವಿಜಯೇಂದ್ರ ವಾಗ್ದಾಳಿ

ಅಸಹಾಯಕ ಅಧಿಕಾರಿಗಳು-ಗುತ್ತಿಗೆದಾರರಿಗೆ ಆತ್ಮಹತ್ಯೆ ಭಾಗ್ಯ : ವಿಜಯೇಂದ್ರ ವಾಗ್ದಾಳಿ

ಬೆಂಗಳೂರು, ಮೇ 31– ಅಸಹಾಯಕ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಆತ್ಮಹತ್ಯೆ ಭಾಗ್ಯ ಕರುಣಿಸಲಾಗುತ್ತಿದೆ. ಬರಿದಾಗಿರುವ ಸರ್ಕಾರಿ ಖಜಾನೆ ಗುತ್ತಿಗೆದಾರರ ಪಾಲಿಗೆ ಆತಹತ್ಯೆಯ ಬಾವಿಯಾಗುತ್ತಿದೆ. ಈ ಸರ್ಕಾರಕ್ಕೆ ಮಾನವ ಜೀವಗಳೆಂದರೆ ಅದು ಕೇವಲದ ಸಂಕೇತವಾಗಿದೆ ಎಂದು ರಾಜ್ಯ ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರದ ವಿರುದ್ದ ತೀವ್ರ ವಾಗ್ದಳಿ ನಡೆಸಿದ್ದಾರೆ.

ಈ ಕುರಿತು ತಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ವಿಜಯೇಂದ್ರ ಅವರು, ಕಾಂಗ್ರೆಸ್‌‍ ಸರ್ಕಾರದ ಭ್ರಷ್ಟವ್ಯೂಹಕ್ಕೆ ಸಿಲುಕಿದ ಅಧಿಕಾರಿಯೊಬ್ಬರ ಆತ್ಮಹತ್ಯೆಯ ಕರಿನೆರಳು ಅಚ್ಚೊತ್ತಿರುವ ಬೆನ್ನಲೇ ………….. ನಿಂದ ಬಿಲ್‌ ಪಾವತಿಯಾಗದೇ ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರಿನ ಗುತ್ತಿಗೆದಾರ ಪಿ.ಎಸ್‌‍.ಗೌಡರ್‌ ಆತಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ, ಈ ಸರ್ಕಾರದಲ್ಲಿ ಏನಾಗುತ್ತಿದೆ ಎಂಬ ಆತಂಕ ಜನರಲ್ಲಿ ಮೂಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಭಾಗ್ಯಗಳ ಸರ್ಕಾರ ಎಂದು ಬೊಬ್ಬೆ ಹೊಡೆಯುವ ಕಾಂಗ್ರೆಸ್‌‍ ಸರ್ಕಾರದಲ್ಲಿ ಆಡಳಿತದಲ್ಲಿ ಅಮಾಯಕ ಹೆಣ್ಣು ಮಕ್ಕಳಿಗೆ- ಕೊಲೆ ಭಾಗ್ಯ, ಪ್ರಮಾಣಿಕ ಅಧಿಕಾರಿಗಳಿಗೆ- ವರ್ಗಾವಣೆ ಭಾಗ್ಯ, ಕಾಂಗ್ರೆಸ್‌‍ ಸರ್ಕಾರ ಅಧಿಕಾರದಲ್ಲಿದ್ದಷ್ಟೂ ಕಾಲ ರಾಜ್ಯದ ಜನತೆ ನಿತ್ಯ ದುರಂತ ಸುದ್ದಿಯನ್ನಷ್ಟೇ ತಿಳಿಯಬೇಕಿದೆ.

ಇದು ಕರ್ನಾಟಕದ ಪರಮ ದೌರ್ಭಾಗ್ಯವಲ್ಲದೇ ಇನ್ನೇನೂ ಅಲ್ಲ. ಎರಡು ಅಮೂಲ್ಯ ಜೀವಗಳ ಆತಹತ್ಯೆಯ ಹಿನ್ನಲೆಯಲ್ಲಿ ಸತ್ಯ ಏನೆಂಬುದು ಬಹಿರಂಗವಾಗಲೇ ಬೇಕಿದೆ, ಇದಕ್ಕೆ ಸಿಬಿಐ ತನಿಖೆಯೊಂದೇ ಉಳಿದಿರುವ ಮಾರ್ಗವಾಗಿದೆ ಎಂದು ವಿಜಯೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

RELATED ARTICLES

Latest News